ಧಾರವಾಡ | ಕಾರ್ಮಿಕರ ದಿನಾಚರಣೆ; ಕೇಕ್ ಕತ್ತರಿಸಿ ಸಂಭ್ರಮಿಸಿದ ಗ್ರಾಮೀಣ ಕೂಲಿ‌ ಕಾರ್ಮಿಕರು

Date:

ಜಿಲ್ಲೆಯ ವಿವಿಧ ತಾಲೂಕಿನ‌ ಗ್ರಾಪಂ ವ್ಯಾಪ್ತಿಯಲ್ಲಿ ಕೆಲಸದಲ್ಲಿ‌ ನಿರತವಾಗಿದ್ದ ಕಾಮಾಗಾರಿ ಸ್ಥಳದಲ್ಲಿ ಕೇಕ್ ಕತ್ತರಿಸುವ ಮೂಲಕ ಮೇ 1ರಂದು ಕಾರ್ಮಿಕ ದಿನಾಚರಣೆ ಆಚರಿಸಿದರು. ವಿವಿಧ ಕಾರ್ಮಿಕ ಸಂಘಟನೆಗಳು ಮುಖ್ಯವಾಗಿ ಆಚರಿಸುವ ಸಂಭ್ರಮದ ಸಾರ್ವಜನಿಕ ಉತ್ಸವ ದಿನ ಮೇ ದಿನ ಅಥವಾ ಅಂತರರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯನ್ನು ಪ್ರತಿ ವರ್ಷದ ಮೇ 1ರಂದು ಪ್ರಪಂಚದ ಹಲವು ದೇಶಗಳಲ್ಲಿ ಆಚರಿಸಲಾಗುತ್ತದೆ. ಈ ದಿನದಂದು ಕಾರ್ಮಿಕ ಆಂದೋಲನದ ಸಾಮಾಜಿಕ ಮತ್ತು ಆರ್ಥಿಕ ಸಾಧನೆಗಳನ್ನು ಆಚರಿಸಲಾಗುತ್ತದೆ.

ಆ ಹಿನ್ನೆಲೆಯಲ್ಲಿ ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದಲ್ಲಿ ಕಾರ್ಮಿಕರ ದಿನಾಚರಣೆ ಆಚರಿಸಿದರು. ಈ ಸಂದರ್ಭದಲ್ಲಿ ಗ್ರಾಮೀಣ ಕೂಲಿ‌ಕಾರ್ಮಿಕರ ಸಂಘಟನೆ ಸಂಚಾಲಕಿ ನಿಂಗಮ್ಮ ಸವಣೂರ ಇದ್ದರು. ತಾಲೂಕಿನ ನೂರಾರು ಕೂಲಿ‌ಕಾರ್ಮಿಕರು ಇಲ್ಲಿ ನೆರೆದಿದ್ದರು. ಕೇಕ್ ಕತ್ತರಿಸುವ ಮೂಲಕ ಸಂಭ್ರಮಿಸಿದರು.

IMG 20250503 072707

ಹುಬ್ಬಳ್ಳಿ ತಾಲೂಕಿನ ಚನ್ನಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಾಮಗಾರಿಯ ಸ್ಥಳದಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರು ಧಾರವಾಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ್ ಪಾಟೀಲ್ ನೇತೃತ್ವದಲ್ಲಿ ಕೇಕ್ ಕತ್ತರಿಸುವ ಮೂಲಕ ಕಾರ್ಮಿಕ‌ರ ದಿನ ಆಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...