ರಂಗಭೂಮಿ ಕಲಾವಿದ ಹಾಗೂ ಧಾರವಾಡ ರಂಗಾಯಣ ನಿರ್ದೇಶಕ ರಾಜು ತಾಳಿಕೋಟಿ ಅವರ ಪಾರ್ಥಿವ ಶರೀರಕ್ಕೆ ನಗರದ ರಂಗಾಯಣದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಜ್ಯೋತಿ ಪಾಟೀಲ, ಜಿಲ್ಲಾಧಿಕಾರಿ ದಿವ್ಯ ಪ್ರಭು ಮತ್ತು ಸಿಇಓ ಭುವನೇಶ ಪಾಟೀಲ ಪುಷ್ಪಾರ್ಚನೆ ಮಾಡಿ, ಅಂತಿಮ ನಮನ ಸಲ್ಲಿಸಿದರು.
ರಂಗಭೂಮಿ ಕಲಾವಿದರು, ಅಭಿಮಾನಿಗಳು ಹಾಗೂ ಸಾಂಸ್ಕೃತಿಕ ಕ್ಷೇತ್ರದ ಗಣ್ಯರು, ಸಾರ್ವಜನಿಕರು ರಾಜು ತಾಳಿಕೋಟಿ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.
ಈ ಸುದ್ಧಿ ಓದಿದ್ದೀರಾ? ಧಾರವಾಡ | ರಂಗಾಯಣ ನಿರ್ದೇಶಕ, ಹಾಸ್ಯ ನಟ ರಾಜು ತಾಳಿಕೋಟಿ ನಿಧನ
ಈ ಸಂದರ್ಭದಲ್ಲಿ ಧಾರವಾಡದ ವಿವಿಧ ರಾಷ್ಟ್ರೀಯ ಟ್ರಸ್ಟಗಳ ಅಧ್ಯಕ್ಷರು, ಸದಸ್ಯರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕ ಕೆ.ಎಚ್. ಚನ್ನೂರ, ಧಾರವಾಡ ರಂಗಾಯಣದ ಆಡಳಿತಾಧಿಕಾರಿ ಶಶಿಕಲಾ ಹುಡೇದ, ತಹಶೀಲ್ದಾರ ಡಾ. ಡಿ.ಎಚ್.ಹೂಗಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಹಾಗೂ ರಂಗಾಯಣದ ಎಲ್ಲ ಸಿಬ್ಬಂದಿ ವರ್ಗದವರು ಸೇರಿದಂತೆ ಇತರರು ಉಪಸ್ಥಿತರಿದ್ದರು.





