ಧಾರವಾಡ | ದಾರಿ ತಪ್ಪಿದ ಯುವಕರಿಗೆ ಜೈಭೀಮ್ ಘೋಷಣೆ ಮಾರ್ಗದರ್ಶಿಯಾಗಲಿ: ಶಂಕರ್ ಹಲಗತ್ತಿ

Date:

ಜಿಲ್ಲಾ ಸಂವಿಧಾನ ಸಂರಕ್ಷಕರ ಪಡೆ ವತಿಯಿಂದ ದಾವಣಗೆರೆ ‌ಮತ್ತು ಧಾರವಾಡ ನಗರದಲ್ಲಿ ಸಂವಿಧಾನ ಸಂರಕ್ಷಕರ ಬೃಹತ್ ಸಮಾವೇಶದ ಅರ್ಥಾತ್ ಭೀಮೋತ್ಸವ ಕಾರ್ಯಕ್ರಮದ ಪೂರ್ವಸಿದ್ದತಾ ಸಭೆಯು ಏ.15ರಂದು ಸಾಯಂಕಾಲ ರಾ.ಹ.ದೇಶಪಾಂಡೆ ಸಭಾಭವನದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಕರಪತ್ರ ಮತ್ತು ಈದಿನ.ಕಾಂ ಹೊರತಂದಿರುವ ‘ಅರಿವೇ ಅಂಬೇಡ್ಕರ’ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಿದರು.

ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ್ ಹಲಗತ್ತಿ ಮಾತನಾಡಿ, ಇತ್ತೀಚೆಗೆ ಯುವಕರು ದಾರಿ ತಪ್ಪುತ್ತಿದ್ದು, ಸರಿಯಾದ ಹಾದಿ ತೋರುವವರಿಲ್ಲದೆ ಇತ್ತ ಜೈಭೀಮ್ ಹೇಳಿ ಅತ್ತ ಜೈಶ್ರೀರಾಮ್ ಹೇಳುವ ಯುವಕರ ಸಂಖ್ಯೆ ಹೆಚ್ಚಾಗಿದೆ. ಇದನ್ನು ಬಿಡಿಸಿ ತಳ ಸಮುದಾಯಗಳು ಮತ್ತು ಅಲ್ಪಸಂಖ್ಯಾತರು ಎಲ್ಲರೂ ಒಂದಾಗಿ ಹೆಜ್ಜೆ ಹಾಕಬೇಕು. ಜೈಭೀಮ್ ಎಂಬುದೊಂದೇ ಅವರು ಸರಿದಾರಿಗೆ ಬರಲು ಸೂಕ್ತ ಹಾದಿ. ಇನ್ನು ಆಡಳಿತ ಪಕ್ಷವು ತಪ್ಪು ಮಾಡಿದಾಗ ತಿದ್ದಿ‌ ಬುದ್ಧಿ ಹೇಳುವ ಕೆಲಸವನ್ನು ಪ್ರಜ್ಞಾವಂತರು ಮಾಡಬೇಕಿದೆ ಎಂದರು.

ಸಭೆಯಲ್ಲಿ ಎದ್ದೇಳು ಕರ್ನಾಟಕ ಸಂಘಟನೆಯ ನೂರ್‌ಶ್ರೀಧರ್ ಪ್ರಾಸ್ತಾವಿಕವಾಗಿ ಮಾತನಾಡಿ, ದೇಶದೆಲ್ಲೆಡೆ ಇಂದು ನಾನಾ ರೂಪದ ಚಳುವಳಿಗಳು ಹುಟ್ಟಿಕೊಂಡಿವೆ. ಸಮಾಜದಲ್ಲಿ ಸಾಮರಸ್ಯವನ್ನು ಜೀವಂತವಾಗಿರಿಸಲು ನಾವೆಲ್ಲ ಮುಂದಾಗಬೇಕಿದೆ. ದೇಶದಲ್ಲಿ ಕಾರ್ಪೊರೇಟ್ ಅಜೆಂಡಾ ಮುನ್ನುಗ್ಗುತ್ತಿದೆ. ಹೀಗಾಗಿ ನಾವು ಜಾಗೃತರಾಗಬೇಕು. ಒಡೆದ ಮನಸ್ಸುಗಳ ಕಟ್ಟಲು ಎಲ್ಲ ಜಾತಿ ಸಮುದಾಯ ಒಳಗೊಂಡು ದೊಡ್ಡ ಶಕ್ತಿಯಾಗಿ ಹೊರಹೊಮ್ಮಬೇಕು. ಸಮಾಜದಲ್ಲಿ ವಿಷವನ್ನು ಬಿತ್ತಿದ್ದಾರೆ. ನಾವು ಸೌಹಾರ್ದತೆಯ ಬಿತ್ತುತ್ತ ಸಾಗೋಣ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯಲ್ಲಿ ಡಾ. ಇಸಾಬೆಲಾ ಝೆವಿಯರ್ ಮಾತನಾಡಿ, ಏ. 26ರಂದು ದಾವಣಗೆರೆಯಲ್ಲಿ ನಡೆಯುವ ಸಂವಿಧಾನ ಸಂರಕ್ಷಕರ ಬೃಹತ್ ಸಮಾವೇಶದ ಕುರಿತು ವಿವರಿಸಿದರು. ವಕೀಲ ಮುಸ್ತಾಕ‌ಅಹಮ್ಮದ್ ಹಾವೇರಿಪೇಠ ಮಾತನಾಡಿ, ನಾವೆಲ್ಲ ತಳಮಟ್ಟದಿಂದ ಸಂಘಟನಾತ್ಮಕವಾಗಿ ಸಾಗಿದರೆ ಮಾತ್ರ ಉಳಿಯುತ್ತೇವೆ. ಅದನ್ನು ಬಿಟ್ಟು ಭಿನ್ನಾಭಿಪ್ರಾಯದಿಂದ ಕೂಡ್ರುವುದು ಸರಿ ಹೊಂದುವುದಿಲ್ಲ ಎಂದರು. ಉತ್ತರ ಕರ್ನಾಟಕ ಹೋರಾಟ ಸಮಿತಿಯ ಹೋರಾಟಗಾರ ಲಕ್ಷ್ಮಣ ಬಕ್ಕಾಯಿ ಮತ್ತು ಜಾಗತಿಕ‌ ಲಿಂಗಾಯತ ಮಹಾಸಭಾದ ಸಿ ಜಿ ಪಾಟೀಲ ವೇದಿಕೆ ಮೇಲಿದ್ದರು.

ಧಾರವಾಡದಲ್ಲಿ ಏ.20ಕ್ಕೆ ನಡೆಯಬೇಕಿದ್ದ ಭೀಮೋತ್ಸವ ಕಾರ್ಯಕ್ರಮವನ್ನು ಮುಂಬರುವ ಏ.27ಕ್ಕೆ ಮುಂದೂಡಲಾಗಿದೆ.‌ ಮತ್ತು ದಾವಣಗೆರೆ ಸಮಾವೇಶದ ಕುರಿತು ವಿವಿಧ ಸಮುದಾಯದ ಮುಖಂಡರು, ಸಂಘಟಕರು ಚರ್ಚಿಸಿದರು.

ಸಭೆಯಲ್ಲಿ ಅತಿಕ್ ಅಹೆಮ್ಮದ್, ಮಾರ್ತಾಂಡಪ್ಪ ಕತ್ತಿ, ಮಹಮ್ಮದ್‌ಅಲಿ ಗುಡೂಭಾಯಿ, ನಾಗರಾಜ ಅಂಬಣ್ಣವರ, ಎಮ್ ಕೆ ನದಾಫ್, ಇಕ್ಬಾಲ್ಅಹ್ಮದ್ ಎಲ್ಲ ಸಮುದಾಯದ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...