ಧಾರವಾಡ | ಮೂಢನಂಬಿಕೆ ವಿಚಾರದಲ್ಲಿ ಸಕಾರಾತ್ಮಕ ಚಿಂತನೆ ಇರಲಿ: ಪ್ರೊ. ಎಸ್. ಎನ್. ಎಮ್ಮಿ

Date:

“ಮೂಢನಂಬಿಕೆ” ಎಂದು ಪರಿಗಣಿಸಲಾಗುವ ಕೆಲವು ನಂಬಿಕೆಗಳ ಹಿಂದೆ ಕೆಲವು ವೈಜ್ಞಾನಿಕ ಕಾರಣಗಳಿವೆ. ಮತ್ತು ಮೂಢನಂಬಿಕೆ ವಿಚಾರದಲ್ಲಿ ವೈಜ್ಞಾನಿಕ ಚಿಂತನೆ ಇರಬೇಕಾಗುತ್ತದೆ ಎಂದು ಹುಬ್ಬಳ್ಳಿಯ ಕೆಎಲ್ಇ ಸಂಸ್ಥೆಯ ಪ್ರೊ. ಎಸ್. ಎನ್. ಎಮ್ಮಿ ಹೇಳಿದರು.

ಧಾರವಾಡದ ಅಂಜುಮನ್ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ ಮತ್ತು ಸ್ನಾತಕೋತ್ತರ ಅಧ್ಯಯನ ವಿಭಾಗದ ಸಸ್ಯಶಾಸ್ತ್ರ ಹಾಗೂ ಪ್ರಾಣಿಶಾಸ್ತ್ರ ವಿಭಾಗಗಳು ಐಕ್ಯೂಎಸಿ (IQAC) ಯೋಜನೆಯಡಿ ಆಯೋಜಿಸಿದ್ದ, “ವಿಜ್ಞಾನ ಮತ್ತು ಮೂಢನಂಬಿಕೆ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡುತ್ತಾ, ಉದಾಹರಣೆಗೆ; ಬೆಕ್ಕು ದಾರಿ ದಾಟುವ ಸಂದರ್ಭದಲ್ಲಿ ಭಯದಿಂದ ನಿಲ್ಲುತ್ತೆವೆ. ಅದರ ಬದಲು ಸಕಾರಾತ್ಮಕವಾಗಿ ಚಿಂತಿಸಬೇಕು. ವಾಹನಗಳಿಗೆ ನಿಂಬೆ ಮತ್ತು ಮೆಣಸಿನಕಾಯಿ ಕಟ್ಟಿ ಹಾಕುವುದು, ಗ್ರಹಣದ ಸಮಯದಲ್ಲಿ ಹೊರಗೆ ಹೋಗದಿರುವುದು ಇತ್ಯಾದಿಗಳನ್ನು ನಂಬಿಕೆಯಿಂದ ಮಾಡಲಾಗುತ್ತದೆ. ಯಾವುದರ ಕುರಿತಾಗಿಯೂ ಭಯದಿಂದ ಬದುಕಬಾರದು ಎಂದರು.

ಐಕ್ಯೂಎಸಿ ಸಂಯೋಜಕ ಡಾ. ಏನ್ ಬಿ ನಾಲತವಾಡ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಇಂತಹ ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಿದ್ದಕ್ಕಾಗಿ ವಿಭಾಗಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳು ತಮ್ಮ ದೈನಂದಿನ ಜೀವನದಲ್ಲಿ ವೈಜ್ಞಾನಿಕ ಚಿಂತನೆ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಲೇಜಿನ ಪ್ರಾಚಾರ್ಯ ಡಾ. ಐ. ಎ. ಮುಲ್ಲಾ ವೇದಿಕೆ ಮೇಲಿದ್ದರು. ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ. ಶೃತಿ ಎಸ್. ಯಾವಗಲಮಠ ಸ್ವಾಗತಿಸಿ, ಅತಿಥಿಗಳಿಗೆ ಪುಷ್ಪಾರ್ಪಣೆ ಸಲ್ಲಿಸಿದರು. ಸಸ್ಯಶಾಸ್ತ್ರ ವಿಭಾಗದ ಪ್ರೊ. ತನ್ಜೀಲಾ ನುಝತ್ ಎಸ್ ಅವರು ಗಣ್ಯರನ್ನು ಪರಿಚಯಿಸುತ್ತಾ, ಆಧುನಿಕ ಸಮಾಜದಲ್ಲಿ ತಾರ್ಕಿಕ ಚಿಂತನೆ ಹಾಗೂ ವೈಜ್ಞಾನಿಕ ಅರಿವಿನ ಅಗತ್ಯತೆ ಬಗ್ಗೆ ಹೇಳಿದರು. ಸಸ್ಯಶಾಸ್ತ್ರ ವಿಭಾಗದ ಪ್ರೊ. ಆರಿಫಾ ಮುಲ್ಲಾ ನಿರೂಪಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ವಿದ್ಯಾರ್ಥಿನಿ ಉಮ್ಮೇ ರಬಿಯಾ ಬಾಳೆಕಾಯಿ ಪವಿತ್ರ ಕುರಾನ್ ಪಠಿಸಿದರು. ವಿದ್ಯಾರ್ಥಿ ದರ್ಶನ ರಾಥೋಡ್ ಶ್ಲೋಕ ವಾಚಿಸಿದರು. ಮಹಾವಿದ್ಯಾಲಯದ ಪ್ರಧಾನ ಕಾರ್ಯದರ್ಶಿ ಕುಮಾರಿ ಖುತೆಜತುಲ್ ಕುಬ್ರಾ ಟಿ. ವಂದಿಸಿದರು. ಕಾರ್ಯಕ್ರಮದಲ್ಲಿ ಡಾ. ಎಸ್ ಎಸ್ ಅಧೋನಿ, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...