ಧಾರವಾಡ | ಶಾಂತಿ, ಸೌಹಾರ್ದತೆ ಕಾಪಾಡುವ ಕೆಲಸವಾಗಲಿ: ಪಿಎಸ್ಐ ಶಿವಾನಂದ ಅಂಬಿಗೇರ

Date:

ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಪಿಎಸ್ಐ ಶಿವಾನಂದ ಅಂಬಿಗೇರ  ತಿಳಿಸಿದರು

ಧಾರವಾಡ ಜಿಲ್ಲೆಯ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು,  ಮತ್ತೊಬ್ಬರ ಸಂತಸಕ್ಕೆ ನೋವುಂಟು ಮಾಡುವ ಮತ್ತು ಇನ್ನೊಬ್ಬರ ಆಚರಣೆಗೆ ದಕ್ಕೆ ತರುವ ಕೆಲಸಕ್ಕೆ ಮುಂದಾಗಬಾರದು. ಹಬ್ಬಗಳು ಎಲ್ಲರನ್ನೂ ಒಂದುಗೂಡಿಸುವುದಕ್ಕೆ ದಾರಿಯಾಗಬೇಕು.

  ಸಾಮಾಜಿಕ ಜಾಲತಾಣದಲ್ಲಿ ಬರುವ  ಸುಳ್ಳು ಸುದ್ದಿಗಳ ಬಗ್ಗೆ ಎಚ್ಚರ ವಹಿಸಿ. ಅನುಮಾನವಿದ್ದರೆ ಪೊಲೀಸರ ಗಮನಕ್ಕೆ ತನ್ನಿ.  ಸುಳ್ಳು ಸುದ್ದಿಗಳಿಂದ ಸಮಾಜದಲ್ಲಿ ಶಾಂತಿ ಕದಡುತ್ತದೆ ಹಾಗಾಗಿ ಸುಳ್ಳು ಸುದ್ದಿಗಳ ಹರಡುವಿಕೆಯನ್ನು ಬುಡಮಟ್ಟ ಕಿತ್ತಾಕಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001520721

ಇನ್ನು ಯಾವುದೇ ಆಚರಣೆಗಳು ಮತ್ತು ಮಹಾತ್ಮರು ಒಂದೇ ಜಾತಿ ಸಮುದಾಯಕ್ಕೆ ಸಿಮೀತವಾಗಬಾರದು. ಅನಾಥ, ತುಳಿತಕ್ಕೊಳಗಾದವರಿಗೆ, ಬಿದ್ದವರಿಗೆ ಮೇಲೆತ್ತುವ ಕಾರ್ಯವು ಶ್ರೇಷ್ಠವಾದ ದಾನವಾಗಿದೆ.  ಹಿಂದೂ, ಮುಸ್ಲಿಂ ಹಬ್ಬಗಳನ್ನು ಬಂದುತ್ವದಿಂದ  ಆಚರಣೆ ಮಾಡಿ ಎಂದರು.

 ಬಕ್ರೀದ್ ಸಾಂತಿ ಸೌಹಾರ್ದತೆಯ ಹಬ್ಬವಾಗಿದ್ದು, ಶಾಂತಿಯುತವಾಗಿ ಆಚರಿಸೋಣ. ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಜಾಗೃತವಹಿಸೋಣ. ಕುಂದಗೋಳದಲ್ಲಿ ಯಾವುದೇ ಹಿಂದೂ‌-ಮುಸ್ಲಿಂ ಘರ್ಷಣೆ ನಡೆದಿಲ್ಲ. ಬಕ್ರಿದ್ ಮೊಹರಂಗೆ ಹಿಂದೂಗಳು ಸಹಕರಿಸುತ್ತೇವೆ. ಮುಸ್ಲಿಂ ಬಾಂಧವರೂ ಹಿಂದೂಗಳ ಹಬ್ಬಗಳಲ್ಲಿ ಸಹಕರಿಸುತ್ತಾರೆ ಎಂದು ಸಭೆಯಲ್ಲಿದ್ದ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಕಿರೇಸೂರ ಮಾತನಾಡಿ, ಬಕ್ರೀದ್ ಹಬ್ಬ ಎಲ್ಲರ ಹಬ್ಬವಾಗಿದೆ. ಅನ್ಯ ಕೋಮಿನವರೂ ಸಹಕರಿಸೋಣ ಎನ್ನುತ್ತಾ, ಪಟ್ಟಣದಲ್ಲಿ ಅನಧಿಕೃತ ಬಾವಚಿತ್ರ, ಧ್ವಜಗಳನ್ನು, ಬ್ಯಾನರ್‌ಗಳನ್ನು ತೆರವುಗೊಳಿಸಬೇಕೆಂದು ಒತ್ತಾಯಿಸಿದರು. ಭೂದಾನ ಮಾಡಿದ ಅಣ್ಣಾಸಾಹೇಬ ನಾಡಗೇರಿ ಅವರ ಪುತ್ಥಳಿ ಮಾಡಲು ಪೊಲೀಸ್ ಇಲಾಖೆ ಸಹಕರಿಸಬೇಕು ಮತ್ತು ಎಲ್ಲ ಸಮಾಜದವರ ಸಹಕಾರವಿರಲಿ ಎಂದು ವಿನಂತಿಸಿದರು.

ಕುಂದಗೋಳ, ಸಂಶಿ ಹಾಗೂ ವಿವಿಧ ಸಮುದಾಯಗಳ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...