ಧಾರವಾಡ | ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವವೇ ನಮ್ಮ ಸಂವಿಧಾನದ ಅಡಿಪಾಯ: ಸಭಾಪತಿ ಬಸವರಾಜ ಹೊರಟ್ಟಿ

Date:

ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾದ ಲಿಖಿತ ಸಂವಿಧಾನ ನಮ್ಮದು. ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ತಳಹದಿಯ ಮೇಲೆ ನಮ್ಮ ಸಂವಿಧಾನ ರಚನೆಯಾಗಿದೆ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆಯು ಸಂಯುಕ್ತವಾಗಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿದ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಪ್ರಜಾಪ್ರಭುತ್ವ ಉಳಿಯಬೇಕಾದರೆ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನದ ಆಶಯಗಳನ್ನು ಅರಿತುಕೊಳ್ಳಬೇಕು. ದೇಶದ ಐಕ್ಯತೆ ಮತ್ತು ಸಮಗ್ರತೆಯನ್ನು ಕಾಪಾಡುವುದು ನಮ್ಮೆಲ್ಲರ ಹೊಣೆ ಎಂದು ಅವರು ತಿಳಿಸಿದರು.
ನಮ್ಮ ಸಂವಿಧಾನವು ಕೇವಲ ಕಾನೂನಿನ ಪುಸ್ತಕವಲ್ಲ. ಅದು ನಮ್ಮ ದೇಶದ ಆತ್ಮವಾಗಿದೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಜೊತೆಗೆ ಸಂವಿಧಾನ ವಿಧಿಸಿರುವ ಮೂಲಭೂತ ಕರ್ತವ್ಯಗಳನ್ನು ಪಾಲಿಸುವ ಜವಾಬ್ದಾರಿಯು ಎಲ್ಲರ ಮೇಲಿದೆ ಎಂದು ತಿಳಿಸಿದರು.

ಅಂಬೇಡ್ಕರ್ ಅವರ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ. ಅವರ ಹೋರಾಟ, ಶಿಕ್ಷಣ ಮತ್ತು ಸಾಧನೆಗಳು ನಮಗೆ ಸ್ಫೂರ್ತಿ. ಆದರೆ, ಅಂಬೇಡ್ಕರ್ ಅವರಂತಹ ಮಹಾನ್ ಚೇತನವನ್ನು ಜಗತ್ತಿಗೆ ನೀಡಲು ಅವರ ತಾಯಿ ಭೀಮಾಬಾಯಿ ಅವರು ಪಟ್ಟ ಪಾಡು ಮತ್ತು ತ್ಯಾಗ ಅಷ್ಟಿಷ್ಟಲ್ಲ. ಇಂದು ನಾವು ಆ ಮಹಾನ್ ತಾಯಿಯನ್ನೂ ಸ್ಮರಿಸಬೇಕು. ಮುಂಬೈನ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಪ್ರೊಫೆಸರ್ ಹುದ್ದೆ ಖಾಲಿ ಇತ್ತು. ಅಂಬೇಡ್ಕರ್ ಅವರ ಅಗಾಧ ಕಾನೂನು ಜ್ಞಾನ ಮತ್ತು ವಿದ್ವತ್ತಿನ ಅರಿವಿದ್ದ ಹುಬ್ಬಳ್ಳಿಯ ಸರ್ ಸಿದ್ದಪ್ಪ ಕಂಬಳಿಯವರು ಈ ಹುದ್ದೆಗೆ ಅಂಬೇಡ್ಕರ್ ಅವರೇ ಸೂಕ್ತ ಎಂದು ನಿರ್ಧರಿಸಿದರು. ಆದರೆ, ಅಂಬೇಡ್ಕರ್ ಅವರಿಗೆ ಈ ಹುದ್ದೆ ನೀಡುವುದಕ್ಕೆ ಅಂದಿನ ಆಡಳಿತ ವರ್ಗ ಮತ್ತು ಮೇಲ್ವರ್ಗದವರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಆದರೆ ಸರ್ ಸಿದ್ದಪ್ಪ ಕಂಬಳಿಯವರು ಯಾರಿಗೂ ಜಗ್ಗದೆ ತಮ್ಮ ಅಧಿಕಾರವನ್ನು ಬಳಸಿ ಅಂಬೇಡ್ಕರ್ ಅವರನ್ನು ಜೂನ್ 1928 ರಲ್ಲಿ ಸರ್ಕಾರಿ ಲಾ ಕಾಲೇಜಿನ ಪ್ರಾಧ್ಯಾಪಕರನ್ನಾಗಿ ನೇಮಿಸಿದರು ಎಂಬುವುದು ಹೆಮ್ಮೆಯ ವಿಷಯ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕ ಎನ್.ಎಚ್. ಕೋನರೆಡ್ಡಿ ಮಾತನಾಡಿ, ಅಂಬೇಡ್ಕರ್ ಅವರು ಇಲ್ಲದೇ ಹೋಗಿದ್ದಲ್ಲಿ, ಇಂದು ಸಮಾಜದ ಜನರು ಗ್ರಾಮ ಪಂಚಾಯಿತ್ ಸದಸ್ಯರಾಗಲಿ ಅಥವಾ ಶಾಸಕರಾಗಲಿ ಆಗಲು ಸಾಧ್ಯವಿರುತ್ತಿರಲಿಲ್ಲ. ಅಂಬೇಡ್ಕರ್ ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾದ ನಾಯಕರಲ್ಲ. ಅವರು ಇಡೀ ಮನುಕುಲದ ವಿಮೋಚಕರು. ಅವರ ವೈಚಾರಿಕ ನಿಲುವುಗಳು ಮತ್ತು ಸಮಾನತೆಯ ತತ್ವಗಳನ್ನು ಅಳವಡಿಸಿಕೊಂಡರೆ ಮಾತ್ರ ನಾವು ನಿಜವಾದ ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ರಾಷ್ಟ್ರವನ್ನು ಕಟ್ಟಲು ಸಾಧ್ಯ ಎಂದು ತಿಳಿಸಿದರು.

ಜಿಲ್ಲಾಧೀಕಾರಿ ದಿವ್ಯ ಪ್ರಭು ಮಾತನಾಡಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಲು ಮತ್ತು ಜವಾಬ್ದಾರಿಯುತ ಪ್ರಜೆಗಳಾಗಿ ರೂಪುಗೊಳ್ಳಲು ವಿದ್ಯಾರ್ಥಿಗಳು ಸಂವಿಧಾನವನ್ನು ಓದುವುದು ಮತ್ತು ಅರ್ಥಮಾಡಿಕೊಳ್ಳುವುದು ಅವಶ್ಯ. ಸಂವಿಧಾನ ಶಿಲ್ಪಿ, ಭಾರತದ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಕೇವಲ ಭಾರತಕ್ಕೆ ಮಾತ್ರವಲ್ಲ, ಇಡೀ ವಿಶ್ವಕ್ಕೇ ಜ್ಞಾನದ ಸಂಕೇತವಾಗಿದ್ದಾರೆ. ಲಂಡನ್ನಿನ ಪ್ರತಿಷ್ಠಿತ ಗ್ರಂಥಾಲಯದಲ್ಲಿ ಅಂಬೇಡ್ಕರ್ ಅವರ ಪುತ್ಥಳಿಯನ್ನು ಸ್ಥಾಪಿಸಿರುವುದು ಪ್ರತಿಯೊಬ್ಬ ಭಾರತೀಯನೂ ಹೆಮ್ಮೆಪಡುವ ವಿಚಾರವಾಗಿದೆ ಎಂದು ತಿಳಿಸಿದರು.

ಅಂಬೇಡ್ಕರ್ ಅವರು ಬದುಕಿದ್ದ ಕಾಲದಲ್ಲಿ ನಮ್ಮ ದೇಶದಲ್ಲಿ ಜಾತಿ ಪದ್ಧತಿ ತೀವ್ರವಾಗಿತ್ತು. ದಲಿತರು ಮತ್ತು ಕೆಳವರ್ಗದ ಜನರು ಸ್ವಚ್ಛವಾದ ಬಟ್ಟೆ ಧರಿಸುವುದನ್ನು, ಚಪ್ಪಲಿ ಹಾಕುವುದನ್ನು ಮೇಲ್ವರ್ಗದವರು ಸಹಿಸುತ್ತಿರಲಿಲ್ಲ. ಅಂತಹ ಸನ್ನಿವೇಶದಲ್ಲಿ, ಅಂಬೇಡ್ಕರ್ ಅವರು ವಿದೇಶಿ ದೊರೆಗಳಂತೆ ಸೂಟು-ಬೂಟು ಧರಿಸುತ್ತಿದ್ದರು. ವಿದ್ಯೆ ಮತ್ತು ಬುದ್ಧಿವಂತಿಕೆಯಲ್ಲಿ ನಾವೂ ಕಡಿಮೆಯಿಲ್ಲ, ಎಂಬ ಸಂದೇಶವನ್ನು ಅವರು ತಮ್ಮ ಉಡುಪಿನ ಮೂಲಕ ಸಮಾಜಕ್ಕೆ ಸಾರಿದರು ಎಂದು ಹೇಳಿದರು.

ಕೆ.ಯು.ಎಸ್.ಕೆ. ಕಾನೂನು ಮಹಾವಿದ್ಯಾಲಯ ಪ್ರಾಧ್ಯಾಪಕಿ ಹಾಗೂ ಪ್ರಾಂಶುಪಾಲರಾದ ಡಾ. ಮಂಜುಳಾ ಎಸ್.ಆರ್ ಅವರು ಸಂವಿಧಾನ ಆಚರಣೆಯ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಜಿಲ್ಲಾ ಪಂಚಯತ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರು ಇದ್ದರು.

ಸಂವಿಧಾನ ಜಾಗೃತಿ ಜಾಥಾ:
ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಸಂವಿಧಾನ ಜಾಗೃತಿ ಜಾಥಾ ನಡಿಗೆಯು ಕೋರ್ಟ್ ಸರ್ಕಲ್, ಆಲೂರು ವೆಂಕಟರಾವ್ ವೃತ್ತ (ಜುಬ್ಲಿ ಸರ್ಕಲ್) ಮಾರ್ಗವಾಗಿ ಡಾ.ಪಾಟೀಲ ಪುಟ್ಟಪ್ಪ ಸಭಾಭವನದವರೆಗೆ ಮೆರವಣಿಗೆಯು ಜರುಗಿತು. ಜಾಥಾ ಕಾರ್ಯಕ್ರಮಕ್ಕೆ ಕರ್ನಾಟಕ ವಿಧಾನ ಪರಿಷತ್‍ನ ಸರ್ಕಾರಿ ಮುಖ್ಯ ಸಂಚೇತಕರಾದ ಸಲೀಂ ಅಹ್ಮದ ಚಾಲನೆ ನೀಡಿದರು.

ಇದನ್ನೂ ಓದಿ ಧಾರವಾಡ | ವಿದ್ಯಾರ್ಥಿಗಳ ಬಸ್ ಸಮಸ್ಯೆ ನಿವಾರಣೆಗೆ ಕ್ರಮವಹಿಸಿ: ಅರವಿಂದ ಏಗನಗೌಡರ

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ.ಶುಭಾ ಅವರು ಸ್ವಾಗತಿಸಿ, ಸಂವಿಧಾನ ಪಿಠೀಕೆಯನ್ನು ಬೋಧಿಸಿದರು. ಶಿಕ್ಷಕ ಪ್ರವೀಣ ಮಸಗಿ ನಿರೂಪಸಿದರು. ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು, ಶಾಲಾ ಮಕ್ಕಳು, ಸಾರ್ವಜನಿಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...