ಧಾರವಾಡ | ಸೈಬರ್ ವಂಚನೆಯಲ್ಲಿ ಅಕ್ಷರಸ್ಥರೆ ಹೆಚ್ಚು ಮೋಸ ಹೋಗುತ್ತಾರೆ: ಜಿಲ್ಲಾಧಿಕಾರಿ ದಿವ್ಯ ಪ್ರಭು

Date:

ಪ್ರಸ್ತುತ ದಿನದಲ್ಲಿ ಬಹುತೇಕ ಸಾರ್ವಜನಿಕರಿಗೆ ಆಗಲಿ ಸರ್ಕಾರಿ ನೌಕರರೆ ಆಗಿರಲಿ ತಂತ್ರಜ್ಞಾನದ ಬಗ್ಗೆ ಹೆಚ್ಚು ಮಾಹಿತಿ ಇರುವುದಿಲ್ಲ. ಅದಕ್ಕಾಗಿಯೇ ದಿನದಿನಕ್ಕೆ ಸೈಬರ್ ವಂಚನೆಗಳು ಹೆಚ್ಚಾಗಿ ನಡೆಯುತ್ತಿವೆ. ಅಕ್ಷರಸ್ಥರೆ ಹೆಚ್ಚು ಮೋಸ ಹೋಗುತ್ತಾರೆ ಮತ್ತು ತಾಂತ್ರಿಕ ಜ್ಞಾನ, ಮೊಬೈಲ್ ಬಳಕೆ ಬಗ್ಗೆ ಸಾಮಾನ್ಯ ತಿಳುವಳಿಕೆ ಅಗತ್ಯ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಯಿಂದ ಸರ್ಕಾರಿ ನೌಕರರಿಗೆ ಆಯೋಜಿಸಿದ್ದ ಆರ್ಥಿಕ ವಂಚನೆ, ಸೈಬರ್ ಕ್ರೈಮ್, ಡಿಜಿಟಲ್ ಅರೆಸ್ಟ್ ಬಗ್ಗೆ ಮತ್ತು ಕೆಜಿಐಡಿ ಸೌಲಭ್ಯಗಳ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಅವರು, ಇಲಾಖೆಯಲ್ಲಿರುವ ಎಲ್ಲ ಅಧಿಕಾರಿಗಳು ಅವರ ಸಂಬಂಧಪಟ್ಟ ವ್ಯಕ್ತಿಗನುಗುಣವಾಗಿ ಹುದ್ದೆಯ ಅರ್ಹತೆ ತಿಳಿದುಕೊಳ್ಳಬೇಕು. ಬೇರೆ ಎಲ್ಲ ಇಲಾಖೆಗಳ ಬಗ್ಗೆಯೂ ಮಾಹಿತಿಯನ್ನು ತಿಳಿದುಕೊಂಡಿರಬೇಕು. ಹಾಗೂ ಮೇಲಾಧಿಕಾರಿಗಳು ಕೆಳ ವರ್ಗದ ಸಿಬ್ಬಂದಿಗಳವರಿಗೆ ಯಾವ ರೀತಿ ಕಾರ್ಯಗಾರದ ಅವಶ್ಯಕತೆ ಇದೆ ಎಂಬುದನ್ನು ತಿಳಿದುಕೊಂಡು ಅವರಿಗೆ ತರಬೇತಿಯನ್ನು ನೀಡುವುದು ಅತಿ ಸೂಕ್ತ ಎಂದು ಅವರು ಹೇಳಿದರು.

ಸಂಪನ್ಮೂಲ ವ್ಯಕ್ತಿಗಳನ್ನು ಕರೆಸಿಕೊಂಡು ಅವರಿಗೆ ಮಾಹಿತಿಯನ್ನು ನೀಡಿದರೆ, ಅತಿ ಉತ್ತಮ.  ಪ್ರತಿಯೊಂದು ಹಂತದಲ್ಲಿಯೂ ಸಿಬ್ಬಂದಿ ವರ್ಗದವರಿಗೆ ಕಾರ್ಯಗಾರ ಮುಖಾಂತರ ತರಬೇತಿಯನ್ನು ನೀಡಿದರೆ ಉತ್ತಮ ಹಾಗೂ ಎಲ್ಲ ಇಲಾಖೆಯವರು ಯಾವ ರೀತಿ ತಮಗೆ ತರಬೇತಿ ಬೇಕು ಎಂಬುದನ್ನು ನಮಗೆ ಹೇಳಿದರೆ ಜಿಲ್ಲಾಡಳಿತದಿಂದ ಎಲ್ಲ ಅನುಕೂಲವನ್ನು ಮಾಡಿಕೊಡುತ್ತೇವೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿರಿಯ ಪೊಲೀಸ್ ಅಧಿಕಾರಿ, ಸೆನ್ ಪೊಲೀಸ್ ಠಾಣೆಯ ಡಿವೈಎಸ್ಪಿ ಶಿವಾನಂದ ಕಟಗಿ ಮಾತನಾಡಿ, ಇಂದಿನ ಕಾಲದಲ್ಲಿ ಸೈಬರ್ ಜಾಗೃತಿ ಅತ್ಯಂತ ಅಗತ್ಯವಾದ ಒಂದು ಕೌಶಲ್ಯವಾಗಿದೆ. ಮಾನವೀಯ ಸಂಬಂಧಗಳು, ಬ್ಯಾಂಕಿಂಗ್ ವ್ಯವಸ್ಥೆಗಳು, ವ್ಯಾಪಾರ ವ್ಯವಹಾರಗಳು ಎಲ್ಲವೂ ಡಿಜಿಟಲ್ ಆಗುತ್ತಿರುವ ಈ ಯುಗದಲ್ಲಿ ವಂಚನೆಗಳ ರೂಪವೇ ಬದಲಾಗಿದೆ. ನಾವು ಜಾಗೃತರಾಗಿರದಿದ್ದರೆ, ಅಪರಾಧಿಗಳು ಕೆಲವೇ ಕ್ಷಣಗಳಲ್ಲಿ ನಮ್ಮ ಸಂಪೂರ್ಣ ಸಂಗ್ರಹ ಹಣವನ್ನು ದೋಚಬಹುದು. ಬ್ಯಾಂಕ್ ಖಾತೆ ವಿವರಗಳು, ಓಟಿಪಿ, ಎಟಿಎಮ್ ಪಿನ್, ಆಧಾರ್ ಅಥವಾ ಪ್ಯಾನ್ ವಿವರಗಳನ್ನು ಕೇಳುವ ಯಾವುದೇ ಕರೆ ಅಥವಾ ಸಂದೇಶವನ್ನು ನಂಬಬಾರದು ಹಾಗೂ ಯಾವುದೇ ಬ್ಯಾಂಕ್ ಅಥವಾ ಸರ್ಕಾರಿ ಇಲಾಖೆ ನಿಮ್ಮ ವೈಯಕ್ತಿಕ ಮಾಹಿತಿಯನ್ನು ಫೋನ್ ಮೂಲಕ ಕೇಳುವುದಿಲ್ಲ. ಕೇಳಿದರೆ ಅದು ವಂಚನೆ ಎನ್ನುವುದು ನಿಶ್ಚಿತ ಎಂದು ಹೇಳಿದರು.

ನಕಲಿ ಕಸ್ಟಮ್ಸ್, ಸಿಬಿಐ, ಸೈಬರ್ ಕ್ರೈಮ್, ಪೊಲೀಸ್ ಅಧಿಕಾರಿ ಎಂದು ಕರೆ ಮಾಡುವ ಮೂಲಕ ನಿಮ್ಮ ಮೇಲೆ ಪ್ರಕರಣವಿದೆ, ಹಣಕಾಸು ಗೊಂದಲವಿದೆ, ವೀಡಿಯೋ ಕಾಲ್ ಮೂಲಕ ವಿಚಾರಣೆ ನಡೆಯುತ್ತದೆ ಎಂದು ಹೇಳಿ ಜನರನ್ನು ಹೆದರಿಸುತ್ತಿದ್ದಾರೆ ಆ ರೀತಿ ಕಾನೂನಿನಲ್ಲಿ ಇಲ್ಲ. ಪೊಲೀಸರು ದೂರವಾಣಿ ಅಥವಾ ವಿಡಿಯೋ ಕಾಲ್ ಮೂಲಕ ಯಾರನ್ನೂ ಬಂಧಿಸುವುದಿಲ್ಲ. ಯಾವುದೇ ಶಂಕೆ ಬಂದರೆ, ತಕ್ಷಣ 112 ಅಥವಾ ಸೈಬರ್ ಹೆಲ್ಪ್‍ಲೈನ್ 1930 ನ್ನು ಸಂಪರ್ಕಿಸಿ ಎಂದು ಅವರು ನೌಕರರಿಗೆ ಮನವಿ ಮಾಡಿದರು.

ಕಳೆದ 8 ದಿನಗಳಲ್ಲಿ ಸೈಬರ್ ಕ್ರೈಮ್‍ದಿಂದ 48 ಲಕ್ಷ ಹಣ ಧಾರವಾಡದಲ್ಲಿ ವಂಚನೆ ಆಗಿದೆ. ದೆಹಲಿಯಲ್ಲಿ 26 ಕೋಟಿ ಮತ್ತು ಬೆಂಗಳೂರಲ್ಲಿ 11 ಕೋಟಿ ಹಣ ಕಳೆದುಕೊಂಡಿದ್ದಾರೆ. ಪ್ರತಿ ವರ್ಷ ಭಾರತದಲ್ಲಿ ಸೈಬರ್ ಸಹಾಯವಾಣಿ 1930 ಗೆ ಮತ್ತು ಪೊಲೀಸ್ ಠಾಣೆಗೆ ಎಫ್‍ಐಆರ್ ದಾಖಲು ಆಗುತ್ತಿವೆ. 23 ಸಾವಿರ ಕೋಟಿ ಹಣ ಭಾರತದಲ್ಲಿ ಲ್ಯಾಪ್ಸ್ ಆಗುತ್ತಿದೆ ಇದು ಸೈಬರ್‍ಯಿಂದಾಗಿ ಮಾತ್ರ. ಸೈಬರ್‍ದಿಂದ ವಂಚಿತರಾದವರು ಕೇವಲ ಶೇ. 10 ರಷ್ಟು ಜನ ಮಾತ್ರ ದೂರನ್ನು ದಾಖಲಿಸುತ್ತಾರೆ. ಆದರೆ ಉಳಿದ ಜನ ಐದು ಮತ್ತು ಹತ್ತು ಸಾವಿರ ಕಳೆದುಕೊಂಡವರು ಮತ್ತು ಓಟಿಪಿ ವರ್ಗಾಯಿಸಿದವರು, ಅನಾಮದೆಯ ಕರೆಗಳಿಂದ ಹಣ ಕಳೆದುಕೊಂಡು ವಂಚಿತರಾದವರು ಯಾವುದೇ ದೂರುಗಳನ್ನು ಕೊಡುವುದಿಲ್ಲ ಎಂದು ತಿಳಿಸಿದರು.

ಕೆಜಿಐಡಿ ಜಿಲ್ಲಾ ವಿಮಾ ಅಧಿಕಾರಿ ಜೆ.ಸಿ.ಕಠಾರಿ ಅವರು ಕೆಜಿಐಡಿ ವಿಮೆ, ವಂತಿಗೆ, ಬೋನಸ್, ಲಾಭ ಮತ್ತು ಹೂಡಿಕೆ ಕುರಿತು ವಿವರಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಶಿರಸ್ತೆದಾರ ಕೆ.ಶ್ರೀಧರ ಸ್ವಾಗತಿಸಿದರು. ಮಲ್ಲಿಕಾರ್ಜುನ ಸೊಲಗಿ ನಿರೂಪಿಸಿದರು. ಡಾ.ಸುರೇಶ ಹಿರೇಮಠ ವಂದಿಸಿದರು. ಉಪನ್ಯಾಸ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಡಿಡಿಓಗಳು, ವಿಷಯ ನಿರ್ವಾಹಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...