ಧಾರವಾಡ | ನಿಮ್ಮ ಮೊಬೈಲ್‍ ಕಳೆದು ಹೋಗಿದೆಯೇ? ಹುಡುಕಲು ಈ ಆ್ಯಪ್‍ನ್ನು ಡೌನಲೋಡ ಮಾಡಿಕೊಳ್ಳಿ

Date:

ದೂರು ನೀಡಿದ್ದ ಆಧಾರದಲ್ಲಿ ಕಳೆದುಕೊಂಡಿದ್ದ ಮೊಬೈಲ್’ಗಳನ್ನು ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಮಾಡಿ, ಧಾರವಾಡ ಜಿಲ್ಲಾ ಪೊಲೀಸ್ ಇಲಾಖೆ ಯಶಸ್ವಿಯಾಗಿದ್ದು, ಒಟ್ಟು 175 ಫೋನ್ ಮೊಬೈಲ್‍ಗಳನ್ನು ಕಳೆದುಕೊಂಡವರಿಗೆ ಹಿಂದಿರುಗಿಸಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸ್ ವರಿಷ್ಟಾಧಿಕಾರಿ ಗುಂಜನ್ ಆರ್ಯ ಮಾತನಾಡಿ, ಕಳೆದುಕೊಂಡಿರುವ ಮೊಬೈಲ್ ಹುಡುಕಲು ಮಾರ್ಗವನ್ನು ಹೇಳಿದ್ದಾರೆ.

ಕಳೆದು ಹೋಗಿರುವ ಮೊಬೈಲ್ ಅನ್ನು ಹುಡುಕಲು ಮೊದಲು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಕೆಎಸ್‍ಪಿ ಆ್ಯಪ್‍ನ್ನು ಡೌನಲೋಡ ಮಾಡಿಕೊಳ್ಳಬೇಕು. ನಂತರ ಅದರಲ್ಲಿ ಲಾಗಿನ್ ಆಗಿ ಕಳೆದುಕೊಂಡವರ ಹೆಸರು ವಿಳಾಸ ಮತ್ತು ಕಳೆದು ಹೋದ ಪೋನ್‍ಗೆ ಸಂಭಂದಿಸಿದಂತಹ ಮಾಹಿತಿ ಭರ್ತಿ ಮಾಡಿ ದೂರು ಸಲ್ಲಿಸಬೇಕು. ತಕ್ಷಣ ಕಳೆದು ಹೋದ ಪೋನ್‍ನಲ್ಲಿದ್ದ ಸಿಮ್‍ ಅನ್ನು ಬ್ಲಾಕ್ ಮಾಡಿಸಿ ಹೊಸ ಸಿಮ್ ಕಾರ್ಡನ್ನು ತೆಗೆದುಕೊಳ್ಳಬೇಕು. ಕಳುವಾದ ಮೊಬೈಲ್‍ಗಳನ್ನು ಬಳಸದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದ್ದಾರೆ.

ನಂತರ ಗೂಗಲ್‍ನಲ್ಲಿ ceir.gov.in ವೆಬ್‍ಸೈಟ್ ಗೆ ಭೇಟಿ ನೀಡಿ ಅದರಲ್ಲಿ ಇರುವಂತಹ BLOCK STOLEN/LOST MOBILE ಎಂಬ ಟ್ಯಾಬ್ ಮೇಲೆ ಕ್ಲಿಕ್ ಮಾಡಿದಾಗ ಮೊಬೈಲ್ ನಂಬರ್, ಐಎಮ್‍ಇಐ ನಂಬರ್, ಕಳೆದು ಹೋದ ದಿನಾಂಕ, ಸಮಯ, ಸ್ಥಳದ ಬಗೆಗಿನ ಸಂಪೂರ್ಣ ಮಾಹಿತಿ ಭರ್ತಿ ಮಾಡಿದಾಗ ನಿಮ್ಮ ಸಿಮ್ ನಂಬರಗೆ ಬ್ಲಾಕ್ ಮಾಡಲು ಒಂದು ಓಟಿಪಿ ಬರುತ್ತದೆ, ಆಗ ನೀವು ಸದರಿ ಓಟಿಪಿ ಹಾಕಿ ವೆರಿಫೈ ಮಾಡಿ ಸಬ್ಮಿಟ್ ಮಾಡಿದಾಗ ನಿಮ್ಮ ದೂರು ದಾಖಲಾಗಿ ನಿಮಗೆ 18 ಅಂಕಿಗಳ ಬ್ಲಾಕಿಂಗ್ ರಿಕ್ವೆಷ್ಟ್ ಐಡಿ ದೊರೆಯುತ್ತದೆ. ಆಗ ಮಾತ್ರ ನಿಮ್ಮ ದೂರು ಅದಿಕೃತವಾಗಿ ದಾಖಲಾಗಿರುವುದು ಖಚಿತವಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ ಧಾರವಾಡ | ಕಳೆದುಕೊಂಡಿದ್ದ 175 ಮೊಬೈಲ್‍ಗಳನ್ನು ಗ್ರಾಹಕರಿಗೆ ಹಿಂದುರುಗಿಸಿದ ಜಿಲ್ಲಾ ಪೊಲೀಸ್ ಇಲಾಖೆ

ಒಂದು ವೇಳೆ ನೀವು ಮೊಬೈಲ್ ಕಳೆದುಕೊಂಡು ನಿಮ್ಮ ಹತ್ತಿರ ಕಳೆದು ಹೋದ ಮೊಬೈಲ್’ನ ಐಎಮ್‍ಇಐ ನಂಬರ್ ಇಲ್ಲದೆ ಇದ್ದಾಗ ನೀವು ನಿಮ್ಮ ಸಮೀಪದ ನಿಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ದಾಖಲಿಸಬೇಕು ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...