ಧಾರವಾಡ | ಸರಕಾರಿ ಉರ್ದು ಶಾಲೆಗಳಲ್ಲಿ ಕನ್ನಡ ಶಿಕ್ಷಕರನ್ನು ಖಾಯಂಗೊಳಿಸಿ: ಶಂಕರ ಹಲಗತ್ತಿ

Date:

ಸರಕಾರಿ ಉರ್ದು ಶಾಲೆಗಳಲ್ಲಿ ಕನ್ನಡ ಶಿಕ್ಷಕರನ್ನು ಸರ್ಕಾರ ಖಾಯಂಗೊಳಿಸಬೇಕು ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಲು ಜನಪ್ರತಿನಿಧಿಗಳು ಮುಂದಾಗಬೇಕು ಎಂದು ಧಾರವಾಡದ ಕಂಠಿಗಲ್ಲಿ ಸರಕಾರಿ ಮಾದರಿ ಉರ್ದು ಶಾಲೆಯಲ್ಲಿ, ಇಂಡಿಪೆಂಡೆಂಟ್ ಸಂಗ್ರಾಮ್ ನ್ಯೂಸ್ ಟ್ರಸ್ಟ್ ಹಾಗೂ ಕಂಠಿಗಲ್ಲಿ ಉರ್ದು ಶಾಲಾ ಸುಧಾರಣಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವ, ಮತ್ತು ಮಕ್ಕಳ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ‘ಉರ್ದು ಜೊತೆ ಕನ್ನಡ ಕಲಿಯಿರಿ’ ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಮಾತನಾಡಿದರು.

ಈ ವೇಳೆ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಜಿಲ್ಲಾಧ್ಯಕ್ಷ ಎ. ಎ. ದರ್ಗಾ ಮಾತನಾಡಿ, ರಾಜ್ಯದಲ್ಲಿ ಮುಸಲ್ಮಾನರ ಸಂಖ್ಯೆ 70 ಲಕ್ಷ 50 ಸಾವಿರ ಇದೆ. ಅದರಲ್ಲಿ ಪ್ರತಿಶತ 40ರಷ್ಟು ಜನ ಮಾತ್ರ ಕನ್ನಡವನ್ನು ಮಾತನಾಡುತ್ತಾರೆ. ಉರ್ದು ಜೊತೆಗೆ ಕನ್ನಡವನ್ನು ಕಲಿಯಬೇಕು. ನಮ್ಮ ರಾಜ್ಯದಲ್ಲಿ ಆಡಳಿತ ಭಾಷೆ ಕನ್ನಡ ಇರುವುದರಿಂದ ಸರಕಾರದ ಜೊತೆಗೆ ಪತ್ರ ವ್ಯವಹಾರ ಮಾಡಲು ಪಾಲಕರು ತಮ್ಮ ಮಕ್ಕಳಿಗೆ ಕನ್ನಡವನ್ನು ಕಲಿಸಬೇಕು ಎಂದರು.

ಮಹಾನಗರ ಪಾಲಿಕೆಯ ಮಾಜಿ ವಿರೋಧ ಪಕ್ಷದ ನಾಯಕರಾದ ರಾಜಶೇಖರ ಕಮತಿ ಮಾತನಾಡಿದರು. ಪತ್ರಕರ್ತ ಹಾಗೂ ಸಾಹಿತಿ ಎಂ. ಆರ್. ನದಾಫ್ ಮಾತನಾಡಿ, ಮಕ್ಕಳಲ್ಲಿ ಸಾಹಿತ್ಯ ಅಭಿರುಚಿ ಬೆಳೆಸುವುದು ಅಗತ್ಯವಿದೆ ಎಂದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಂಘಟನಾ ಕಾರ್ಯದರ್ಶಿ ಪ್ರಮೀಳಾ ಜಕ್ಕಣ್ಣವರ ಮಾತನಾಡಿ, ಉರ್ದು ಶಾಲೆಗಳಲ್ಲಿ ಕನ್ನಡ ಶಿಕ್ಷಕರು ಮಕ್ಕಳಿಗೆ ಹಾಡಿನ ಮೂಲಕ ತಿಳಿಸಬೇಕು ಎಂದರು. ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷ ಕೆ. ಜಿ. ಹಳಿಯಾಳ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ ಧಾರವಾಡ | ಏಕೀಕರಣ ಚಳುವಳಿಯಲ್ಲಿದ್ದ ಮಹನೀಯರಲ್ಲಿ ಅದರಗುಂಚಿ ಶಂಕರಗೌಡರು ಪ್ರಮುಖರು: ರವೀಂದ್ರನಾಥ

ಮಹಮ್ಮದಲಿ ಗೂಡುಬಾಯಿ ಹಾಗೂ ಎಂ. ಎಂ. ಜಮಾದಾರ ನಿರೂಪಿಸಿದರು. ಕುಮಾರಿ ಎಂ.ಎಂ.ನದಾಫ ಸ್ವಾಗತಿಸಿದರು. ಕಾಂಗ್ರೆಸ್ ಮುಖಂಡ ಮೈನೋದೀನ ನದಾಫ, ಎಸ್ ಡಿ ಎಂ ಸಿ ಅಧ್ಯಕ್ಷ ಯಾಸೀನ ಹಳಿಯಾಳ, ಇಂಡಿಪೆಂಡೆಂಟ್ ಸಂಗ್ರಾಮ್ ನ್ಯೂಸ್ ಟ್ರಸ್ಟ್ ಅಧ್ಯಕ್ಷ ಎಂ. ಕೆ. ನದಾಫ ಹಾಗೂ ಮಕ್ಕಳ ಪಾಲಕರು, ಶಿಕ್ಷಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...