ಧಾರವಾಡ | ವಚನಗಳು ಮುಂದಿನ ಪೀಳಿಗೆಗೆ ಹಸ್ತಾಂತರವಾಗಲಿ: ಅಪರ ಜಿಲ್ಲಾಧಿಕಾರಿ ಗೀತಾ ಸಿಡಿ.

Date:

12 ನೇ ಶತಮಾನದಲ್ಲಿ ಶರಣ ಕ್ರಾಂತಿಯ ಪ್ರಮುಖರಾಗಿ ಗುರುತಿಸಿಕೊಂಡಿರುವ ಮಡಿವಾಳ ಮಾಚಿದೇವರು ಬಸವನಿಷ್ಠರು ಮತ್ತು ಅವರ ಭಕ್ತಿ, ಪರಾಕ್ರಮಗಳು ಇತರರಿಗೆ ಮಾದರಿಯಾಗಿದ್ದವು. ಜೀವನ ಮಾರ್ಗ ತೊರಿಸುವ ವಚನಗಳು ಮುಂದಿನ ಪೀಳಿಗೆಯವರಿಗೆ ಹಸ್ತಾಂತರವಾಗಬೇಕು ಎಂದು ಧಾರವಾಡ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಹೇಳಿದರು.

ಅವರು ಫೆ.1ರಂದು ನಗರದ ಆಲೂರು ವೆಂಕಟರಾವ್ ಸಾಂಸ್ಕಂತಿಕ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕಂತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಶರಣ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.

12 ನೇ ಶತಮಾನದ ಶರಣರಲ್ಲಿ ಮಡಿವಾಳ ಮಾಚಿದೇವರೂ ಒಬ್ಬರು. ಮಡಿವಾಳ ಮಾಚಿದೇವರು ಹಿಮಾಲಯದಷ್ಟು ಅಚಲ‌ಹಾಗೂ ದೃಢ ನಿರ್ಧಾರ ಹೊಂದಿದವರು ಎಂದರು. ಕನ್ನಡನಾಡಿಗೆ ಹೊಸ ಭರವಸೆ, ಸಾಮಾಜಿಕ ಬದಲಾವಣೆಗಳನ್ನು ಮೂಡಿಸಿದ್ದ ಶರಣರ ವಚನಗಳನ್ನು ಮಕ್ಕಳು ಪಠಣೆ ಮಾಡಿ, ತಮ್ಮ ಜೀವನದಲ್ಲಿ ರೂಢಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಕ್ರಿಯಾತ್ಮಕವಾದ ಕಾರ್ಯಗಳು ಆಗಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನರಲ್ಲಿ ನಮ್ಮ ರಾಜ್ಯದ ಮತ್ತು ರಾಷ್ಟ್ರದ ಸಾಮಾಜಿಕ, ಧಾರ್ಮಿಕ ವೈವಿಧ್ಯತೆಗಳನ್ನು, ಭಾವೈಕ್ಯತೆಯನ್ನು ಮತ್ತು ಸಹಿಷ್ಣುತೆಯನ್ನು ಮೂಡಿಸುವದಕ್ಕಾಗಿ ಅನೇಕ ಮಹಾತ್ಮರ, ಶರಣರ ಜಯಂತಿಗಳನ್ನು ಆಚರಿಸಲಾಗುತ್ತಿದೆ. ಶರಣರ ಸಂದೇಶಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವ ಕೆಲಸವಾಗಬೇಕೆಂದು ಹೇಳಿದರು.

ಬೆಳಗಾವಿ ನಗರದ ಎಂ.ಎಚ್.ಪಿ.ಎಸ್ ನಂ-12 ರ ಸಂಪನ್ಮೂಲ ವ್ಯಕ್ತಿ ಹಾಗೂ ಸಂಶೋಧಕ ಡಾ. ಬಾಳಪ್ಪ ಈರಪ್ಪ ಚಿನಗುಡಿ ಅವರು ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸವನ್ನು ನೀಡಿದರು.

ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯೆ ಅನಿತಾ ಸಂತೋಷ ಚಳಗೇರಿ, ಧಾರವಾಡ ಜಿಲ್ಲಾ ಮಡಿವಾಳರ ಸಂಘ ಗೌರವಾಧ್ಯಕ್ಷ ವಾಯ್. ಡಿ. ನವಲಗುಂದ, ಅಧ್ಯಕ್ಷ ಮಡಿವಾಳಪ್ಪ ಎಫ್. ಮಡಿವಾಳರ, ಉಪಾಧ್ಯಕ್ಷ ಯಲ್ಲಪ್ಪ ಬ. ಬೆಂಡಿಗೇರಿ ಸೇರಿದಂತೆ ಜಿಲ್ಲಾ ಸಂಘದ ವಿವಿಧ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ವರಸಿ ಓದಿದ್ದೀರಾ? ಧಾರವಾಡ | ಸ್ವಚ್ಛತಾ ಕಾರ್ಯಕ್ರಮದ ಮೂಲಕ ಗುರುವಿನ ಹುಟ್ಟುಹಬ್ಬ ಆಚರಿಸಿದ ವಿದ್ಯಾರ್ಥಿಗಳು

ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಆರತಿ ದೇವಶಿಖಾಮಣಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಸಮುದಾಯದ ಮುಖಂಡರು, ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...