ಧಾರವಾಡ | ಬೆಳೆ ಹಾನಿ ಸಮೀಕ್ಷೆ ಪೂರ್ಣಗೊಳಿಸಲು‌ ಸಚಿವ ಸಂತೋಷ್ ಲಾಡ್ ಸೂಚನೆ

Date:

ಧಾರವಾಡ ಜಿಲ್ಲೆಯಾದ್ಯಂತ ಮಳೆಯಿಂದ ಆದ ಬೆಳೆ ಹಾನಿ ಸಮೀಕ್ಷೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು ಎಂದು ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್ ಲಾಡ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾಭವನದಲ್ಲಿ ಧಾರವಾಡ ಜಿಲ್ಲೆಯ ಆಗಸ್ಟ್ ತಿಂಗಳಿನಲ್ಲಿ ಭಾರಿ ಮಳೆಯಿಂದಾಗಿರುವ ಬೆಳೆ ಹಾನಿ ಹಾಗೂ ರೈತರ ಬೆಳೆ ಪರಿಹಾರದ ಕುರಿತು ಕೃಷಿ, ಕಂದಾಯ, ತೋಟಗಾರಿಕೆ ಇಲಾಖೆಗಳ ಅಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಸಭೆ ನಡೆಸಿ ಮಾತನಾಡಿ, “ಅತೀವೃಷ್ಟಿಯಿಂದ ನಷ್ಟ ಅನುಭವಿಸಿದ ರೈತರಿಗೆ ಸರ್ಕಾರವು ನಿಯಮಾನುಸಾರ ಪರಿಹಾರ ನೀಡುತ್ತದೆ. ಪರಿಹಾರ ಕಾರ್ಯಗಳಲ್ಲಿ ಯಾವುದೇ ಲೋಪದೋಷಗಳಾಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು. ಅತಿವೃಷ್ಟಿಯಿಂದ ಹಾನಿಗೊಳಗಾದ ಎಲ್ಲಾ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ನಿಖರ ಸಮೀಕ್ಷೆಯನ್ನು ಕೈಗೊಳ್ಳಬೇಕು” ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

“ಸಮೀಕ್ಷಾ ಕಾರ್ಯದಲ್ಲಿ ಯಾವುದೇ ವಿಳಂಬವಾಗದಂತೆ ಮತ್ತು ಅರ್ಹ ಫಲಾನುಭವಿಗಳಿಗೆ ನ್ಯಾಯ ದೊರಕಿಸಬೇಕು. ಜಿಲ್ಲೆಯಲ್ಲಿ ಅತಿವೃಷ್ಟಿ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸಲು ಮತ್ತು ಸಂತ್ರಸ್ತರಿಗೆ ಶೀಘ್ರ ನ್ಯಾಯ ಒದಗಿಸಲು ಬೆಳೆ ಸಮೀಕ್ಷೆ ಕಾರ್ಯ ಸಹಾಯಕವಾಗಲಿದೆ. ಕೃಷಿ ಹಾಗೂ ತೋಟಗಾರಿಕೆ ಇಲಾಖೆ ನೀಡಿರುವ ಪ್ರಾಥಮಿಕ ವರದಿಯ ಪ್ರಕಾರ ಅಂದಾಜು ವರದಿಯ ಪ್ರಕಾರ, 79,697 ಹೇಕ್ಟೆರ್ ಹೆಸರು ಬೆಳೆ, 6,550 ಹೇಕ್ಟೆರ್ ಉದ್ದು ಬೆಳೆ, 7,250 ಹೇಕ್ಟೆರ್ ಸೋಯಾಅವರೆ ಬೆಳೆ, 50 ಹೇಕ್ಟರ್ ಮುಸಿಕನ ಜೋಳ ಸೇರಿದಂತೆ ಸರಿಸುಮಾರು 93,547 ಹೇಕ್ಟೆರ್ ಹಾನಿಯಾಗಿದೆ. ಮತ್ತು ತೋಟಗಾರಿಕಾ ಬೆಳೆಗಳಾದ 915 ಹೇಕ್ಟೆರ್ ಒಣಮೆಣಸಿನಕಾಯಿ, 2,920 ಹೇಕ್ಟೆರ್ ಈರುಳ್ಳಿ, 230 ಹೇಕ್ಟೆರ್ ಬೆಳ್ಳೊಳ್ಳಿ ಸೇರಿದಂತೆ ಸರಿಸುಮಾರು 4,065 ಹೇಕ್ಟೆರ್ ಬೆಳೆ ಹಾನಿಯಾಗಿದೆ. ಒಟ್ಟಾರೆಯಾಗಿ ಕೃಷಿ ಮತ್ತು ತೋಟಗಾರಿಕಾ ಇಲಾಖೆಗಳು ಸಮೀಕ್ಷೆ ಪೂರ್ವದಲ್ಲಿ ಅಂದಾಜು 97,612 ಹೇಕ್ಟೆರ್ ಪ್ರದೇಶದಲ್ಲಿನ ವಿವಿಧ ಬೆಳೆಗಳು ಹಾನಿಯಾಗಿವೆ ಎಂದು ಮತ್ತು ಮುಂದಿನ ಎರಡ್ಮೂರು ದಿನಗಳಲ್ಲಿ ಸಮೀಕ್ಷೆಯನ್ನು ಪೂರ್ಣಗೊಳಿಸುವುದಾಗಿ ತಿಳಿಸಿದ್ದಾರೆ. ಸಮೀಕ್ಷೆಯ ನಂತರ ಒಟ್ಟು ಹಾನಿಯ ನಿಖರ ಮಾಹಿತಿ ಲಭ್ಯವಾಗಲಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆಗಸ್ಟ್ ಮಾಹೆಯಲ್ಲಿ ಸುರಿದ ಬಾರಿ ಮಳೆಯಿಂದಾಗಿ ಪ್ರಾಥಮಿಕ ವರದಿಯ ಪ್ರಕಾರ 223 ಮನೆಗಳು ಹಾನಿಯಾದ ಪ್ರಕರಣಗಳು ವರದಿಯಾಗಿದ್ದು, ಕಂದಾಯ ಹಾಗೂ ಇತರ ಇಲಾಖೆಗಳ ಜಂಟಿ ಸಮಿತಿ ಪರಿಶೀಲನೆಯ ನಂತರ ಇದರಲ್ಲಿನ 81 ಪ್ರಕರಣಗಳನ್ನು ತಿರಸ್ಕರಿಸಲಾಗಿದೆ. ಉಳಿದಂತೆ 128 ಮನೆ ಹಾನಿ ಪ್ರಕರಣಗಳ ಪೈಕಿ ಶೇ. 76 ಕ್ಕಿಂತ ಹೆಚ್ಚು ಹಾನಿಯಾದ 25 ಮನೆಗಳಿಗೆ, ಶೇ. 51 ರಿಂದ 75 ರಷ್ಟು ಹಾನಿಯಾದ 41 ಮನೆಗಳಿಗೆ, ಶೇ. 21 ರಿಂದ 50 ರಷ್ಟು ಹಾನಿಯಾದ 51 ಮನೆಗಳಿಗೆ ಮತ್ತು ಶೇ. 15 ರಿಂದ 20 ರಷ್ಟು ಹಾನಿಯಾದ 11 ಮನೆಗಳಿಗೆ ನಿಯಮಾನುಸಾರ ಪರಿಹಾರ ನೀಡಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ. ಹಾಗೂ ಹಾನಿಯಾದ 14 ಮನೆಗಳು ಇನ್ನೂ ಪರಿಶೀಲನಾ ಹಂತದಲ್ಲಿದೆ” ಎಂದು ತಿಳಿಸಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, “ಕಳೆದ 15 ದಿನಗಳಿಂದ ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳ ಅಧಿಕಾರಿಗಳು ಬೆಳೆ ಹಾನಿ ಸಮೀಕ್ಷೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬರುವ ಸೋಮವಾರ ಸಂಜೆಯೊಳಗೆ ಸಮೀಕ್ಷೆಯ ಪೂರ್ಣ ವರದಿಯನ್ನು ಅಧಿಕಾರಿಗಳು ಸಲ್ಲಿಸಬೇಕು. ವರದಿ ಪಡೆದ ನಂತರ, ರೈತರಿಗೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಲು ಒಂದು ವಾರ ಕಾಲಾವಕಾಶ ನೀಡಲಾಗುವುದು. ಬೆಳೆ ಹಾನಿ ಆಗಿರುವ ಎಲ್ಲ ರೈತರಿಗೂ ಪರಿಹಾರ ಸಿಗುವಂತೆ ಅಧಿಕಾರಿಗಳು ಸಮರ್ಪಕವಾಗಿ ಮತ್ತು ನಿಯಮಾನುಸಾರ ಬೆಳೆ ಹಾನಿ ಸಮೀಕ್ಷೆ ಮಾಡಬೇಕು. ಆದಷ್ಟು ಶೀಘ್ರವಾಗಿ ಸರ್ಕಾರಕ್ಕೆ ಬೆಳೆ ಹಾನಿ ಸಮೀಕ್ಷೆಯ ವರದಿಯನ್ನು ಸಲ್ಲಿಸಿ, ಪರಿಹಾರ ಬರುವಂತೆ ಜಿಲ್ಲಾ ಉಸ್ತುವಾರಿ ಸಚಿವರ ಹಾಗೂ ಶಾಸಕರ ಮಾರ್ಗದರ್ಶನದಲ್ಲಿ ಜಿಲ್ಲಾಡಳಿತ ಕ್ರಮವಹಿಸಲಿದೆ” ಎಂದು ತಿಳಿಸಿದರು.

ಇದನ್ನೂ ಓದಿ: ಧಾರವಾಡ | ಅವಳಿನಗರ ವ್ಯಾಪ್ತಿಯಲ್ಲಿ ಆ.26ರಿಂದ ಸೆ.07ರವರೆಗೆ ಮದ್ಯ ಮಾರಾಟ, ಮದ್ಯಪಾನ ನಿಷೇಧ

ಸಭೆಯಲ್ಲಿ ಶಾಸಕ ಎನ್ ಎಚ್ ಕೋನರೆಡ್ಡಿ, ಕೃಷಿ ವಿವಿ ಕುಲಪತಿ ಡಾ. ಪಿ ಎಲ್ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ರುದ್ರೇಶ ಘಾಳಿ, ಉಪಪೊಲೀಸ್ ಆಯುಕ್ತ ಮಹಾನಿಂಗ ನಂದಗಾವಿ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕಾಶಿನಾಥ ಭದ್ರಣ್ಣನವರ, ಜಿಲ್ಲಾ ಸಂಖ್ಯಾ ಸಂಗ್ರಹಣಾ ಅಧಿಕಾರಿ ವೀರಣ್ಣಗೌಡ ಪಾಟೀಲ, ಕೃಷಿ ಇಲಾಖೆ ಉಪನಿರ್ದೇಶಕಿ ಜಯಶ್ರೀ ಹಿರೇಮಠ, ಸಂದೀಪ ಜಿ., ಎಲ್ಲ ತಾಲೂಕಿನ ತಹಶೀಲ್ದಾರರು, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರು, ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಹಾಯಕ ಕೃಷಿ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...