ಧಾರವಾಡ | ಅಬಕಾರಿ ಅಧಿಕಾರಿಗಳಿಗೆ ಸಚಿವ ಸಂತೋಷ್ ಲಾಡ್ ಖಡಕ್ ಎಚ್ಚರಿಕೆ

Date:

ಸಾರಾಯಿ ದಂಧೆ ಎಗ್ಗಿಲ್ಲದೆ ಸಾಗುತ್ತಿರುವ ಬಗ್ಗೆ ಬಹುತೇಕ ದೂರುಗಳು ಬಂದಿವೆ. ಎರಡು ದಿನಗಳಲ್ಲಿ ಸೂಕ್ತ ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸಬೇಕು ಎಂದು ಧಾರವಾಡ ಜಿಲ್ಲೆಯ ಅಬಕಾರಿ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ತಾಕೀತು ಮಾಡಿದರು.

ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಉದ್ಘಾಟನೆಗೆ ಆಗಮಿಸಿದ್ದ ಅವರು ಅಬಕಾರಿ ಅಧಿಕಾರಿಗಳನ್ನು ಕರೆಯಿಸಿದ್ದು, “ಸಾರಾಯಿ ದಂಧೆ ಎಗ್ಗಿಲ್ಲದೆ ಸಾಗುತ್ತಿರುವ ಬಗ್ಗೆ ಅನೇಕ ದೂರುಗಳು ಬಂದಿವೆ. ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಇಂತಹ ಅಹಿತಕರ ಘಟನೆಗಳು ಮರುಕಳಿಸದಂತೆ ಜಾಗೃತಿ ವಹಿಸಿ, ಎರಡು ದಿನಗಳಲ್ಲಿ ಸಮಸ್ಯೆ ಬಗೆಹರಿಸಬೇಕು” ಎಂದು ಖಡಕ್ ಎಚ್ಚರಿಕೆ ನೀಡಿದರು.

“ಗ್ರಾಮೀಣ ಪ್ರದೇಶಗಳಲ್ಲಿ ಮದ್ಯ ಮಾರಾಟ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮದ್ಯ ಮಾರಾಟದಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಶೀಘ್ರವೇ ಕ್ರಮಕೈಗೊಳ್ಳಬೇಕು. ಕಳೆದ 7 ವರ್ಷಗಳಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ‌” ಎಂದು ಕಲಘಟಗಿ ತಾಲೂಕಿನ ಮಹಿಳೆಯರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮೀಣ ಕೂಲಿಕಾರರ ಸಂಘಟಕಿ ನಿಂಗಮ್ಮ ಸವಣೂರ‌ ಈ ದಿ‌ನ.ಕಾಮ್ ಜೊತೆಗೆ ಮಾತನಾಡಿ, “ನಾವೆಲ್ಲ ಸೇರಿಕೊಂಡು 2015 ರಿಂದ ಮದ್ಯ ನಿಷೇಧ ಆಂದೋಲನವನ್ನು ಸಕ್ರಿಯವಾಗಿ ನಡೆಸುತ್ತಿದ್ದೇವೆ. ಕರ್ನಾಟಕದ ಹಳ್ಳಿಗಳಲ್ಲಿ ಅಕ್ರಮ ಅಂಗಡಿಗಳ ಮೂಲಕ ಮದ್ಯದ ಮಾರಾಟವನ್ನು ನಿಲ್ಲಿಸಲು ಹೈಕೋರ್ಟ್ ಆದೇಶವನ್ನು ತಕ್ಷಣವೇ ಜಾರಿಗೊಳಿಸಿಬೇಕು. ಸಾರಯಿಯಿಂದ ಮಹಿಳೆಯರಿಗೆ ಭಾರೀ ಸಮಸ್ಯೆ ಉಂಟಾಗುತ್ತಿದೆ. 8ನೇ ತರಗತಿಯ ಚಿಕ್ಕ ವಯಸ್ಸಿನ ಮಕ್ಕಳೂ ಕುಡಿಯಲು ಪ್ರಾರಂಭಿಸಿರುವುದು ಸೋಜಿಗ ಎನಿಸಿದರೂ ನಿಜವಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಗದಗ | ಮದ್ಯ ಸಾಗಾಟಕ್ಕೆ ಬಸ್ಸಿನಲ್ಲಿ ಅನುಮತಿ ನೀಡುವಂತೆ ಆಗ್ರಹ

“ಅಕ್ರಮ ಸಾರಾಯಿ ದಂಧೆ ಇರುವ ಗ್ರಾಮಗಳ ಪಟ್ಟಿಯನ್ನು ಸರ್ಕಾರದ ಗಮನ ಸೆಳೆಯಲು ಜಿಲ್ಲಾ ಅಬಕಾರಿ ಇಲಾಖೆಗೆ ಹಲವು ಬಾರಿ ಸಲ್ಲಿಸಿದ್ದರೂ ಏನೂ ಪ್ರಯೋಜನವಾಗಿಲ್ಲ” ಎಂದು ಆರೋಪಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...