ಸಂಸದ ಪ್ರಲ್ಹಾದ್ ಜೋಶಿ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ಕುಂದಗೋಳದಲ್ಲಿ 5 ಲಕ್ಷ ರೂ. ವೆಚ್ಚದ ಸಾಂಸ್ಕೃತಿಕ ಭವನ ನಿರ್ಮಾಣ ಕಾಮಗಾರಿಗೆ ಶಾಸಕ ಎಂ ಆರ್ ಪಾಟೀಲ್ ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಈ ಭವನವು ಸ್ಥಳೀಯ ಕಲಾವಿದರು, ಯುವಕರು ಹಾಗೂ ಸಾಮಾಜಿಕ ಸಂಘಟನೆಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು, ಸಭೆ-ಸಮ್ಮೇಳನಗಳನ್ನು ಆಯೋಜಿಸಲು ಮತ್ತು ಜನಸೇವಾ ಕಾರ್ಯಗಳನ್ನು ಮುಂದುವರಿಸಲು ಪ್ರೇರಣೆಯ ಕೇಂದ್ರವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಸಮಾಜದ ಮುಖಂಡ ಶಿವಣ್ಣ ಬರಿ, ರೈತ ಮುಖಂಡ ಹೇಮನಗೌಡ ಪಾಟೀಲ, ಕೆ.ಸಿ.ಸಿ ಬ್ಯಾಂಕ ನಿರ್ದೇಶಕ ಉಮೇಶ ಹೆಬಸೂರ, ಧಾರವಾಡ ಕೃಷಿ ವಿಶ್ವವಿದ್ಯಾಲಯ ಸದಸ್ಯ ಮಾಲತೇಶ ಶ್ಯಾಗೋಟಿ ಹಾಗೂ ಗ್ರಾಮದ ಹಿರಿಯರು ಇದ್ದರು.





