ಧಾರವಾಡ | ಪಂಜಾ ಕೂರಿಸಿ ಮೊಹರಂ ಆಚರಣೆ; ಮುಸ್ಲಿಂಯೇತರ ಕುಟುಂಬ ಚಾಲನೆ

Date:

ಕರ್ಬಲಾದಲ್ಲಿ‌ ಘೋರವಾಗಿ ಮೃತಪಟ್ಟಿದ್ದ ಪ್ರವಾದಿ ಪೈಗಂಬರ್ ವಂಶಸ್ಥರ ನೆನಪಿಗಾಗಿ ಪ್ರತಿ ವರ್ಷ ಪಂಜಾಗಳನ್ನು‌ ಕೂರಿಸಿ ಆಚರಣೆಗೈದು ಹಿಂದೂ ಮುಸ್ಲಿಂ ಭಾವೈಕ್ಯೆತೆಯನ್ನು ಸಾರಲಾಗುತ್ತಿದೆ.

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಗುರಪ್ಪ ಗೊಲ್ಲರ ಮನೆಯಲ್ಲಿ ಬೀಬಿ ಫಾತೀಮಾ ಅವರು ಪಂಜಾ ಕೂರಿಸಿ ಮೊಹರಂ ಆಚರಣೆಗೆ ಚಾಲನೆ ನೀಡಿದರು.

ಈ ದಿ‌ನ.ಕಾಮ್‌ನೊಂದಿಗೆ ಗುರಪ್ಪ ಗೊಲ್ಲರ್ ಮಾತನಾಡಿ‌, “ನಾವು ನಮ್ಮ ತಂದೆಯವರ ಕಾಲದಿಂದಲೂ ಈ ಮೊಹರಂ ಆಚರಣೆ ನಡೆಸುತ್ತಿದ್ದೇವೆ. ಕಳೆದ ನಾಲ್ಕು ವರ್ಷದ ಹಿಂದೆ ಭಕ್ತರು ಪಂಜಾವನ್ನು‌ ಮಾಡಿಸಿ ಕೊಟ್ಟಿದ್ದಾರೆ. ಅಲ್ಲಿಂದ ಪಂಜಾವನ್ನು ಮನೆಯಲ್ಲಿಯೇ ಕೂರಿಸಿ ಪೂಜೆ, ಫಾತೇಹಾವನ್ನು‌ಮಾಡಲಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಆಚರಣೆಯನ್ನು ಮಾಡಲು ನಮ್ಮಲ್ಲಿ ಹಿಂದೂ-ಮುಸ್ಲಿಂ ಬೇಧದ ವಿಚಾರವೇ ಹೊಳೆಯುವುದಿಲ್ಲ. ಕಾರಣ, ಮೊಹರಂ ಆಚರಣೆಯು ಪರಸ್ಪರ ಸೌಹಾರ್ದತೆ ಬೆಳೆಸುವಲ್ಲಿ ಸಹಕಾರಿಯಾಗುತ್ತದೆ. ಹೀಗಾಗಿ ನಾವೆಲ್ಲ ಒಂದೇ ತಾಯಿಯ ಮಕ್ಕಳಂತೆ ಸಾಗುತ್ತಿದ್ದೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಹಿರಿಯ ರೈತರಿಗೆ ಪಿಂಚಣಿ, ಸರ್ಕಾರಿ ಶಾಲಾ ಮಕ್ಕಳಿಗೆ ಕೃಪಾಂಕ ನೀಡಿ: ಶಾಸಕ ಬಿ ಆರ್ ಪಾಟೀಲ್

ರಾಯಸಾಬ ಕುನ್ನೂರ ಮಾತನಾಡಿ, “ನಾನು ಸಣ್ಣವನಿದ್ದಾಗಿನಿಂದಲೂ ಈ ಮೊಹರಂ ಆಚರಣೆ ನೋಡುತ್ತಿದ್ದೇನೆ. ಎಂದಿಗೂ ಕೂಡಾ ಜಾತಿ ಧರ್ಮವೆಂದು ಹೊಡೆದಾಡಿಲ್ಲ. ಜಗಳವಾಡಿ ಛಿದ್ರವಾಗಿದ್ದರೂ ಮೊಹರಂ ಬಂದಾಗ ಸಹಜವಾಗಿ ಒಂದೇ ಕುಟುಂಬದವರಂತೆ ಒಂದಾಗುತ್ತಾರೆ. ನಮ್ಮ ದೇವರು ನಿಮ್ಮ ದೇವರು ಅಂತ ಜಗಳವಾಡಿದ್ದನ್ನು ನಾನಿಲ್ಲಿ ನೋಡಿಲ್ಲ. ಎಪ್ಪತ್ತು ವರ್ಷದ ನನ್ನ ಆಯುಷ್ಯದಲ್ಲಿ ನಮ್ಮ ಹಿರಿಯರು ಹಾಕಿಕೊಟ್ಟ ಮಾರ್ಗದಲ್ಲಿ ಶಾಂತಿಯುತವಾಗಿ ಸಾಗಿದ್ದೇವೆ. ಇನ್ನು ಮುಂದಿನ ಪೀಳಿಗೆಯು ಹೀಗೆ ಭಾವೈಕ್ಯೆತೆ ಕಾಪಾಡಲು ಶಾಂತಿ ಮತ್ತು ಸೌಹಾರ್ದತೆಯಿಂದ ಮುನ್ನಡೆಯಬೇಕು” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...