ಧಾರವಾಡ | ನೀಟ್-ನೆಟ್ ಪರೀಕ್ಷೆ ಅಕ್ರಮ; ಎಸ್‌ಎಫ್‌ಐ ನೇತೃತ್ವದಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

Date:

ಯುಜಿಸಿ – ನೀಟ್ ಪರೀಕ್ಷೆಯಲ್ಲಿನ ಅಕ್ರಮ ವಿರೋಧಿಸಿ ಹಾಗೂ ಮರು ಪರೀಕ್ಷೆ ಮಾಡುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಧಾರವಾಡ ಸಂಘಟನಾ ಸಮಿತಿಯ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ರಾಷ್ಟ್ರಿಯ ಪರೀಕ್ಷಾ ಸಂಸ್ಥೆ (ಎನ್.ಟಿ.ಎ)ಯನ್ನು ಹಾಗೂ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ಅನ್ನು ರದ್ದುಗೊಳಿಸಿ ಸಾಮಾನ್ಯ ಪ್ರವೇಶ ಪರೀಕ್ಷೆ ಜಾರಿಯಾಗಬೇಕು ಎಂದು ಒತ್ತಾಯಿಸಿ ಜುಬ್ಲಿ ಸರ್ಕಲ್‌ನಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ತಹಶೀಲ್ದಾರ ಕಂಟೆಪ್ಪಗೌಡ್ರು ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ನೀಟ್ ಮನವಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಎಸ್ಎಫ್ಐ ರಾಜ್ಯ ಮುಖಂಡ ಬಸವರಾಜ ಎಸ್ ಮಾತನಾಡಿ, “ಕಳೆದ ಕೆಲವು ವಾರಗಳಿಂದ ನಡೆದ ಘಟನೆಗಳನ್ನು ಗಮನಿಸಿದಾಗ ಮತ್ತೊಮ್ಮೆ ರಾಷ್ಟೀಯ ಪರೀಕ್ಷಾ ಪ್ರಾಧಿಕಾರ ರಾಷ್ಟ್ರ ಮಟ್ಟದ ಪರೀಕ್ಷೆಗಳನ್ನು ನಡೆಸಲು ಅಸಮರ್ಥತೆಯನ್ನು ಪ್ರದರ್ಶಿಸಿದೆ. ನೆಟ್ ಮರು ಪರೀಕ್ಷೆ, ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ರಾಷ್ಟ್ರಾದ್ಯಂತ ಸುದ್ದಿ ಮಾಡಿದೆ” ಎಂದು ತಿಳಿಸಿದರು.

“ಜೂನ್ 4 ರಂದು ಘೋಷಿಸಲಾದ ನೀಟ್ ಪರೀಕ್ಷೆಯ ಫಲಿತಾಂಶಗಳು ಸರಿಯಾದ ಪಾರದರ್ಶಕತೆ ಇಲ್ಲದೆ ಮತ್ತು ಪೇಪರ್ ಸೋರಿಕೆಯಂತಹ ದೂರುಗಳಿಂದ ಲಕ್ಷಾಂತರ ವಿದ್ಯಾರ್ಥಿಗಳು ಬಾಧಿತರಾಗಿದ್ದರು. ಇದರ ಜೊತೆಗೆ, ಲಕ್ಷಗಟ್ಟಲೆ ವಿದ್ಯಾರ್ಥಿಗಳು ಹಾಜರಾಗಿದ್ದ ಯುಜಿಸಿ ನೆಟ್ ಪರೀಕ್ಷೆಯು ಪೇಪರ್ ಸೋರಿಕೆ ವರದಿಗಳಿಂದ ರದ್ದುಗೊಳಿಸಲಾಯಿತು. ಇದಲ್ಲದೆ, ನೇರವಾಗಿ ಆರೋಗ್ಯ ಸಚಿವಾಲಯದ ಅಡಿಯಲ್ಲಿ ಬರುವ ವೈದ್ಯಕೀಯ ವಿಜ್ಞಾನಗಳ ರಾಷ್ಟ್ರೀಯ ಪರೀಕ್ಷಾ ಮಂಡಳಿ (NBE) ಸಹ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ಬಗ್ಗೆ ಉಲ್ಲೇಖಿಸಿ ನೀಟ್ ಪಿಜಿ ಪ್ರವೇಶ ಪರೀಕ್ಷೆಗಳನ್ನು ಕೊನೆಯ ಕ್ಷಣದಲ್ಲಿ ಮುಂದೂಡಲು ನಿರ್ಧರಿಸಲಾಗಿದೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ವಿಜಯಪುರ | ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿದ ಪ್ರಕರಣ: ಐವರ ಮೃತದೇಹ ಪತ್ತೆ, ಕಾರ್ಯಾಚರಣೆ ಅಂತ್ಯ

ಕೋಚಿಂಗ್ ಸೆಂಟರ್‌ಗಳ ಪ್ರೋತ್ಸಾಹಿಸುವಿಕೆಯನ್ನು ಸಿಯುಇಟಿ, ನೀಟ್‌ನಂತಹ ಕೇಂದ್ರೀಕೃತ ಪರೀಕ್ಷೆಗಳ ಪಾಲಿಸಿಗಳಿಂದ ಶಿಕ್ಷಣದ ಖಾಸಗೀಕರಣ ಹೆಚ್ಚುತ್ತಿದೆ. ಇದರಿಂದ ಕೋಟ್ಯಂತರ ತಳ ಸಮುದಾಯದ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣ ದುಬಾರಿಯಾಗಿದೆ. ‘ಒಂದು ರಾಷ್ಟ್ರ, ಒಂದು ಪರೀಕ್ಷೆ’ ಎಂಬ ಘೋಷಣೆಯ ಅಡಿಯಲ್ಲಿ, ಇಡೀ ಪರೀಕ್ಷಾ ವ್ಯವಸ್ಥೆಯು ಕುಸಿದಿದೆ. ಅನಿರ್ದಿಷ್ಟಾವಧಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವನ್ನು ಅಪಾಯಕ್ಕೆ ಸಿಲುಕಿಸಿದೆ. ಎನ್.ಟಿ.ಎ ಯನ್ನು ರದ್ದುಗೊಳಿಸಬೇಕು. ಕೇಂದ್ರದ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು. ಇತ್ತೀಚಿಗೆ ನೆಟ್ ಮತ್ತು ನೀಟ್ ಪರೀಕ್ಷೆಯನ್ನು ಬರೆದ ವಿದ್ಯಾರ್ಥಿಗಳಿಗೆ ಪರಿಹಾರವನ್ನು ಒದಗಿಸಬೇಕು ಎಂದು ಕೆಂದ್ರ ಸರಕಾರವನ್ನು ಒತ್ತಾಯಿಸಿದರು.

ಎಸ್ಎಫ್ಐ ಜಿಲ್ಲಾಧ್ಯಕ್ಷ ನಾಗರಾಜ ಇಟಗಿ ಮಾತನಾಡಿ, “ಉನ್ನತ ಶಿಕ್ಷಣದಲ್ಲಿನ ಸಮಸ್ಯೆಗಳು ಅಷ್ಟೇ ಅಲ್ಲದೆ, ಶಾಲಾ ಶಿಕ್ಷಣದ ಸಮಸ್ಯೆಗಳನ್ನು ಪ್ರತ್ಯೇಕಿಸುವಂತಿಲ್ಲ. ಬಿಜೆಪಿ ನೇತೃತ್ವದ ಎನ್‌ಡಿಎ ಅವಧಿಯಲ್ಲಿ ಶಿಕ್ಷಣಕ್ಕೆ ಸಂಬಂಧಪಟ್ಟ ಇಲಾಖೆಗಳಿಗೆ ಬಜೆಟ್‌ನಲ್ಲಿ ಹಣ ಕಡಿತ ಮಾಡಿರುವುದು, ಸರ್ಕಾರಿ ಶಾಲೆಗಳನ್ನು ಮುಚ್ಚುವುದು, ಶಿಕ್ಷಕರ ಕೊರತೆ, ವಿದ್ಯಾರ್ಥಿಗಳ ಒಟ್ಟು ದಾಖಲಾತಿಯಲ್ಲಿ ಕುಸಿದಿರುವುದನ್ನು ಕಾಣಬಹುದಾಗಿದೆ” ಎಂದರು.

“2018-19 ಮತ್ತು 2021-22 ರ ನಡುವೆ ಭಾರತದಲ್ಲಿ ಒಟ್ಟು ಸರ್ಕಾರಿ ಶಾಲೆಗಳ ಸಂಖ್ಯೆ 61885 ರಷ್ಟು ಕಡಿಮೆಯಾಗಿವೆ. ಒಟ್ಟು 15,51,000 ಶಾಲೆಗಳಿಂದ 14,89,115 ಶಾಲೆಗಳಿಗೆ ಕುಸಿದಿದೆ. ಒಟ್ಟು 61361 ಶಾಲೆಗಳನ್ನು ಮುಚ್ಚಲಾಗಿದೆ. ಸರ್ಕಾರಿ ಶಾಲೆಗಳ ಸಂಖ್ಯೆಯಲ್ಲಿ ವಿಪರೀತ ಕುಸಿತ ಹಾಗೂ ಖಾಸಗಿ ಶಾಲೆಗಳ ಸಂಖ್ಯೆಯಲ್ಲಿ ಅಗಾಧ ಪ್ರಮಾಣದಲ್ಲಿ ಹೆಚ್ಚಳವಾಗಿರುವುದು ಬಡ – ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣದಿಂದ ವಂಚಿಸುವ ಹುನ್ನಾರವಾಗಿದೆ” ಎಂದು ಎಸ್‌ಎಫ್‌ಐ ಮುಖಂಡ ಆರೋಪಿಸಿದರು.

ಅತಿಯಾದ ಖಾಸಗೀಕರಣದಿಂದ ವಿದ್ಯಾರ್ಥಿಗಳು ಶುಲ್ಕವನ್ನು ಭರಿಸಲು ಸಾಧ್ಯವಾಗದೇ ಶಿಕ್ಷಣದಿಂದ ದೂರ ಉಳಿಯುವಂತಾಗಿದೆ. ಪಿಹೆಚ್‌ಡಿ ಪ್ರವೇಶಾತಿ ಪರೀಕ್ಷೆಗೆ ನೆಟ್ ಪರೀಕ್ಷೆ ಕಡ್ಡಾಯವಾಗಿ ಉತ್ತೀರ್ಣರಾಗಿರಬೇಕು ಎನ್ನುವ ನಿಯಮವನ್ನು ವಾಪಸ್ ಪಡೆಯಬೇಕು. ಪರೀಕ್ಷೆಗಳನ್ನು ಕೇಂದ್ರೀಕರಣ ಗೊಳಿಸುವುದನ್ನು ನಿಲ್ಲಿಸಬೇಕು. ಆಯಾ ರಾಜ್ಯಗಳಿಗೆ ಸ್ವಾಯತ್ತತೆಯನ್ನು ಒದಗಿಸಬೇಕು. ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳ ಮೇಲೆ ನಡೆಯುವ ದಾಳಿಗಳನ್ನು ನಿಲ್ಲಿಸಬೇಕು ಹಾಗೂ ವಿದ್ಯಾರ್ಥಿಗಳ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವವನ್ನು ಕಾಪಾಡಬೇಕು. ಸಾರ್ವತ್ರಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಿ, ಸರ್ಕಾರಿ ಶಾಲೆಗಳನ್ನು ಮುಚ್ಚುವುದನ್ನು ನಿಲ್ಲಿಸಬೇಕು ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆಗ್ರಹ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಎಸ್ಎಫ್ಐ ಮುಖಂಡ ರವಿಕುಮಾರ್ ರಾಯಚೂರು, ಸಂತೋಷ ಬಡಿಗೇರ್, ರಾಮನಗೌಡ್ ಕೆ ಆರ್, ಪ್ರಮೋದ್ ಎಸ್ ಡಿ, ಅರುಣ್ , ರಹಿಮ್ ಖಾನ್ ಎಚ್ ಆರ್, ರಶ್ಮಿ ತಳವಾರ, ಅಶ್ವಿನಿ ಬಾಲಣ್ಣನವರ, ಪವಿತ್ರ ಕೆ, ಲಕ್ಷ್ಮೀ ಡಿ ಆರ್, ರಶ್ಮೀಕಾ ಡಿ ಎಚ್, ರುಕ್ಸನಾ ಬಾನು ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...