ಧಾರವಾಡ | ಮಕ್ಕಳ ಚಟುವಟಿಕೆ ಕಡೆಗೆ ಪಾಲಕರ ಗಮನವಿರಲಿ: ಡಾ.ಆಯ.ಎ.ಮುಲ್ಲಾ

Date:

ಮಗುವಿನ ಸರ್ವಾಂಗೀನ ವ್ಯಕ್ತಿತ್ವ ವಿಕಾಸದಲ್ಲಿ ಶಾಲಾ ಶಿಕ್ಷಕರು ಎಷ್ಟು ಮಹತ್ವದ ಪಾತ್ರ ನಿರ್ವಹಿಸುವರೋ, ಅಷ್ಟೇ ಪ್ರಮುಖ ಪಾತ್ರ ಪಾಲಕರು ಸಹ ನಿರ್ವಹಿಸಬೇಕು. ಮಕ್ಕಳ ಚಟುವಟಿಕೆ ಕುರಿತು ಪಾಲಕರು ಗಮನಹರಿಸಬೇಕು‌ ಎಂದು ಅಂಜುಮನ್ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಆಯ.ಎ .ಮುಲ್ಲಾ ಹೇಳಿದರು.

ನಗರದ ಅಂಜುಮನ್ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ ಹಾಗೂ ಪಿ.ಜಿ ಅಧ್ಯಯನ ಕೇಂದ್ರದಲ್ಲಿ “ಪಾಲಕರು ಶಿಕ್ಷಕರ ಸಭೆಯ” ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಮಕ್ಕಳೊಂದಿಗೆ ಭಾವನಾತ್ಮಕವಾಗಿ ಉತ್ತಮ ಸಂಬಂಧ ಹೊಂದಿರಬೇಕು ಹಾಗೂ ಅವರೊಂದಿಗೆ ಪ್ರೀತಿ ವಿಶ್ವಾಸದಿಂದ ವರ್ತಿಸಬೇಕು. ಶಿಕ್ಷಕರ ಜೊತೆಗೆ ಪಾಲಕರೂ ಮಕ್ಕಳ ವಿದ್ಯಾಭ್ಯಾಸದ ಕಡೆಗೆ ಖಾಳಜಿವಹಿಸಬೇಕು ಎಂದರು.

ಇದೇ ವೇಳೆ ರಿಜವಾನ್ ಅಹಮದ್ ಬಿ.ಎಸ್ಸಿ ವಿಭಾಗದ ಸಾಧನೆ ಮತ್ತು ವಿವಿಧ ಕಾರ್ಯಕ್ರಮಗಳ ವಿವರ ಪಿ.ಪಿ.ಟಿ ಮೂಲಕ ತಿಳಿಸಿದರು. ಉಲ್ಲಾಸ್ ದೊಡ್ಡಮನಿ ವಾಣಿಜ್ಯ ಕೋರ್ಸ್‌ದೊಂದಿಗೆ ದೊರೆಯಬಹುದಾದ ಉದ್ಯೋಗಾವಕಾಶಗಳ ಕುರಿತು ತಿಳಿಸಿದರು. ಡಾ. ಅಧೋನಿ ಮಾತನಾಡಿ ಮಾನವೀಯ ಮೌಲ್ಯಗಳನ್ನು ಮಕ್ಕಳಲ್ಲಿ ಬೆಳೆಸಬೇಕು ಎಂದರು. ಪಾಲಕರ ಅನಿಸಿಕೆಯಲ್ಲಿ ಉಮಾ ಚೌಹಾನ್ ಮಾತನಾಡಿ, ಪಾಲಕರು ಆಗಾಗ ಶಿಕ್ಷಕರೊಂದಿಗೆ ಸಂಪರ್ಕದಲ್ಲಿದ್ದು ಮಗುವಿನ ಕುರಿತು ಮಾಹಿತಿ ಪಡೆಯುತ್ತಿರಬೇಕು ಎಂದರು. ಐ.ಕ್ಯೂ.ಎ .ಸಿ ಸಂಯೋಜಕ ಡಾ. ಏನ್ .ಬಿ ನಲತವಾಡ ಸ್ವಾಗತಿಸುತ್ತಾ, ಪಾಲಕರು-ಶಿಕ್ಷಕರ ಸಭೆಯ ಉದ್ದೇಶ ತಿಳಿಸಿದರು. ಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಏನ್.ಬಿ.ಗುದಗನವರ್ ಪಿ.ಪಿ.ಟಿ ಮೂಲಕ ಕಾಲೇಜಿನ ಪರಿಚಯ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಧಾರವಾಡ | ದ್ವಾಮವ್ವ, ದುರ್ಗವ್ವ ಮೂರ್ತಿ ಹೊತ್ತು ಭಾವೈಕ್ಯ ಮೆರೆದ ಮುಸ್ಲಿಮರು

ಕಾರ್ಯಕ್ರಮದಲ್ಲಿ ಅಹಮದ್‌ರಜಾ ಪಠಾಣ್ ಕುರಾನ್ ಪಠಣ ಮಾಡಿದರು, ವಿದ್ಯಾರ್ಥಿ ಪ್ರವೀಣ್ ಲಮಾಣಿ ಶ್ಲೋಕ ಪಠಿಸಿದರು. ದಿನಾಚರಣೆ ಸಮಿತಿಯ ಅಧ್ಯಕ್ಷೆ ಡಾ. ಸೌಭಾಗ್ಯ ಜಾದವ್ ಕಾರ್ಯಕ್ರಮ ನಿರೂಪಿಸಿದರು. ಶ್ರುತಿ ಯಾವಗಲ್‌ಮಠ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...