ಧಾರವಾಡ | 30ವರ್ಷ ಮೇಲ್ಪಟ್ಟವರು ಮಧುಮೇಹ ತಪಾಸಣೆಗೆ ಒಳಗಾಗಬೇಕು: ಡಾ.ಪರಶುರಾಮ ಎಫ್.ಕೆ

Date:

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎನ್.ಸಿ.ಡಿ ಘಟಕ ಹಾಗೂ ಜಿಲ್ಲಾ ಎನ್.ಸಿ.ಡಿ. ಕ್ಲಿನಿಕ್, ಜಿಲ್ಲಾ ಆಸ್ಪತ್ರೆ ವತಿಯಿಂದ ವಿಶ್ವ ಮಧುಮೇಹ ದಿನಾಚರಣೆ 2024 ಅಂಗವಾಗಿ ನವೆಂಬರ್ 14ರಂದು ಧಾರವಾಡ ಜಿಲ್ಲಾ ಎನ್.ಸಿ.ಡಿ. ಕ್ಲಿನಿಕ್, ಜಿಲ್ಲಾ ಆಸ್ಪತ್ರೆಯಲ್ಲಿ ಉಚಿತ ಮಧುಮೇಹ, ರಕ್ತದೊತ್ತಡ ಮತ್ತು ಸಾಮಾನ್ಯ ಕ್ಯಾನ್ಸರ್ ತಪಾಸಣೆಯನ್ನು ಹಮ್ಮಿಕೊಂಡಿದ್ದರು.

ಜನರಲ್ ಫಿಜಿಸಿಯನ್ ಡಾ. ನಿವೇದಿತಾ ಪಾಟೀಲ ಮಾತನಾಡಿ, ಬದಲಾದ ಜೀವನ ಶೈಲಿ, ಅನಿಯಂತ್ರಿತ ಆಹಾರ ಕ್ರಮ, ದೈಹಿಕ ಶ್ರಮ ಇಲ್ಲದಿರುವುದು ಮಧುಮೇಹ ವಿಶ್ವದಾದ್ಯಂತ ಹೆಚ್ಚಾಗಲು ಕಾರಣವಾಗಿವೆ ಎಂದರು.

ಜಿಲ್ಲಾ ಎನ್.ಸಿ.ಡಿ. ಕಾರ್ಯಕ್ರಮಾಧಿಕಾರಿ ಮತ್ತು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಪರಶುರಾಮ ಎಫ. ಕೆ ಮಾತನಾಡಿ, 30 ವರ್ಷ ಮೇಲ್ಪಟ್ಟ ಎಲ್ಲರು ಮಧುಮೇಹ ತಪಾಸಣೆಗೆ ಒಳಗಾಗಬೇಕು. ಉಪಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕಾ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಎಲ್ಲಡೆ ಮಧುಮೇಹ ತಪಾಸಣೆ ಲಭ್ಯವಿದ್ದು, ಸಾರ್ವಜನಿಕರು ಸರ್ಕಾರದ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಮತ್ತು ಮಧುಮೇಹ ಖಚಿತಪಟ್ಟಲ್ಲಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕೆಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಂಗಪ್ಪ ಗಾಬಿ ಮಾತನಾಡಿ, ದೈಹಿಕ ಶ್ರಮವಿಲ್ಲದಿರುವುದು, ಧೂಮಪಾನ, ಮದ್ಯಪಾನ, ಒತ್ತಡದ ಜೀವನಶೈಲಿಯಿಂದ ಮಧುಮೇಹ ಪ್ರಕರಣಗಳು ಹೆಚ್ಚಾಗುತ್ತಿದ್ದು ಅಗತ್ಯ ಮುಂಜಾಗ್ರತಾ ಕ್ರಮಗಳಿಂದ ಮಧುಮೇಹವನ್ನು ದೂರವಿಡಬಹುದು. ಮಧುಮೇಹವಿದ್ದಲ್ಲಿ ವೈದ್ಯಕೀಯ ಸಲಹೆ ಅನುಸಾರವಾಗಿ ಚಿಕಿತ್ಸೆ ಪಡೆದುಕೊಳ್ಳಬೇಕು. ನಿಯಮಿತ ಆಹಾರ ಸೇವನೆ ಮತ್ತು ದಿನನಿತ್ಯ ಮುಂಜಾನೆ ನಡಿಗೆಯಿಂದ ಮಧುಮೇಹವನ್ನು ನಿಯಂತ್ರಣದಲ್ಲಿಡಬಹುದು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆಸ್ಪತ್ರೆಯ ಮುಖ್ಯ ಚಿಕಿತ್ಸಕ ಡಾ. ಸ್ವಾಮಿ, ಜಿಲ್ಲಾ ಎನ್.ಸಿ.ಡಿ. ಕ್ಲಿನಿಕ್‍ನ ಜನರಲ್ ಫಿಜಿಸಿಯನ್ ಡಾ. ವಾಸಂತಿ ಜೀರಗಳ, ಎನ್.ಪಿ.ಎಚ್.ಸಿ.ಇ ಮತ್ತು ಎನ್.ಪಿ.ಪಿ.ಸಿ ವೈದ್ಯಾಧಿಕಾರಿಗಳು, ಹಿರಿಯ ಶುಶ್ರೂಷಕ ಅಧಿಕಾರಿಗಳು, ಜಿಲ್ಲಾ ಎನ್.ಸಿ.ಡಿ ಘಟಕ ಮತ್ತು ಎನ್.ಸಿಡಿ ಕ್ಲಿನಿಕ್ ಹಾಗೂ ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...