ಧಾರವಾಡ | ಒಳಚರಂಡಿ ಕಾರ್ಮಿಕರ ನೇಮಕಾತಿ, ಕಾರ್ಮಿಕ ಕಾಯ್ದೆ ಜಾರಿಗೆ ಪೌರಕಾರ್ಮಿಕರ ಆಗ್ರಹ

Date:

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಒಳಚರಂಡಿ ಕಾರ್ಮಿಕರ ನೇಮಕಾತಿ, ಚಾಲಕರ ನೇರ ನೇಮಕಾತಿ, ನೇರ ವೇತನ ಪಾವತಿ ಸೇರಿದಂತೆ ವಿವಿಧ ಕಾರ್ಮಿಕ ಕಾಯ್ದೆ ಸೌಲಭ್ಯಗಳನ್ನು ದೊರಕಿಸಿ‌ಕೊಡುವಂತೆ ಆಗ್ರಹಿಸಿ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರ ಮತ್ತು ನೌಕರರ ಸಂಘ ಆಗ್ರಹಿಸಿದೆ.

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರ ಮೂಲಕ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿ, ಹೋರಾಟಗಾರ ವಿಜಯ ಎಂ ಗುಂಟ್ರಾಳ ಮಾತನಾಡಿ, “ಸಂಘದ ಸದಸ್ಯರಾದ 80 ಮಂದಿ ಒಳಚರಂಡಿ ಕಾರ್ಮಿಕರು ಹಾಗೂ ಚಾಲಕರು ಕಳೆದ 16 ವರ್ಷಗಳಿಂದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಒಳಚರಂಡಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿದ್ದಾರೆ. ಗುತ್ತಿಗೆದಾರರಾದ ಸಾಧಾನಾ ಎನ್ವಿರೊ ಎಂಜನಿಯರ್ಸ್, ಸಾಯಿ ಇನ್‍ಫ್ರಾಸ್ಟ್ರಕ್ಚರ್ ಸರ್ವಿಸ್‌ನವರು ಕಾರ್ಮಿಕ ಕಾಯ್ದೆ ಉಲ್ಲಂಘಿಸಿದ್ದು, ಕೆಲಸದ ಅವಧಿ 8 ಗಂಟೆ ಇದ್ದುರೂ ಸಹ ಕಾರ್ಮಿಕರನ್ನು 24 ಗಂಟೆ ದುಡಿಸಿಕೊಳ್ಳುತ್ತಿದ್ದಾರೆ. ಅಲ್ಲದೆ, ಅವರು ಕರೆದಾಗ ಕೆಲಸ ನಿರ್ವಹಿಸಬೇಕಾಗಿದೆ. ಹೀಗಾಗಿ ಕೆಲಸದ ಅವಧಿಯನ್ನು 8 ಗಂಟೆ ನಿಗದಿಪಡಿಸಬೇಕು” ಎಂದು ಒತ್ತಾಯಿಸಿದರು.

“ವಾರದಲ್ಲಿ ಒಂದುದಿನ ಪೂರ್ತಿ ರಜೆ ಸೌಲಭ್ಯ ನೀಡಬೇಕು. ಕಾರ್ಮಿಕರ ಹಾಗೂ ಚಾಲಕರ ಆರೋಗ್ಯದ ಹಿತದೃಷ್ಟಿಯಿಂದ ಮೆಡಿಕಲ್ ಮಾಸ್ಟರ್ ಚೆಕಪ್ ಮಾಡಿಸಬೇಕು. ನಿಗದಿಪಡಿಸಿದ ಕೆಲಸವನ್ನು ಹೊರತುಪಡಿಸಿ ಇತರೆ ಕೆಲಸಗಳನ್ನು ಮಾಡಿಸಬಾರದು‌. ವಿವಿಧ ಕಾರ್ಮಿಕ ಕಾಯ್ದೆ ಸೌಲಭ್ಯಗಳಾದ ನಿಗದಿತ ಸಮಯಕ್ಕೆ ಮಾಸಿಕ ವೇತನ ಪಾವತಿಸುವುದು, ಗುರುತಿನ ಚೀಟಿ, ಸರ್ವಿಸ್ ಲೇಟರ್, ವೇತನ ಚೀಟಿ, ಪಿಎಫ್, ಯುಎಎನ್ ಕಾರ್ಡ್‌, ಇಎಸ್‌ಐ ಸ್ಮಾರ್ಟ್‌ ಕಾರ್ಡ್‌/ಟಿಐಸಿ ಪ್ರಮಾಣ ಪತ್ರ, ರಜೆ ಸಹಿತ ವೇತನ ರಾಷ್ಟ್ರೀಯ ಹಬ್ಬಗಳ ದುಪ್ಪಟ್ಟು ವೇತನ, ಬೋನಸ್, ಗ್ರಾಜುವಿಟಿ, ಸರ್ವಿಸ್ ವೇಟೇಜ್ ಸೇರಿದಂತೆ ಇನ್ನೂ ಮುಂತಾದ ಸೌಲಭ್ಯಗಳನ್ನು 2008 ರಿಂದ 2024ರ ವರೆಗಿನ ವ್ಯತ್ಯಾಸದ ಬಾಕಿ ಮೊತ್ತಗಳನ್ನು ಕಾರ್ಮಿಕರಿಗೆ ದೊರಕಿಸಿಕೊಡಬೇಕು. ಬೆಳಗಿನ ಉಪಹಾರ, ಸುರಕ್ಷತೆ ಸಾಧನಗಳು, ಕೆಲಸದ ಪರಿಕರಗಳನ್ನು ಪೂರೈಸಬೇಕು” ಎಂದು ಆಗ್ರಹಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಾಸನ | ಧಾರಾಕಾರ ಮಳೆ; ಕುಂಬರಡಿ-ಹಾರ್ಲೆ ಎಸ್ಟೇಟ್‌ ನಡುವೆ ಭೂಕುಸಿತ

“ಒಳಚರಂಡಿ ಕಾರ್ಮಿಕರನ್ನು ಖಾಯಂಗೊಳಿಸುವ, ನೇರವೇತನ ಪಾವತಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಈ ಬಗ್ಗೆ ಕಾರ್ಮಿಕರ ಸೇವಾ ಜೇಷ್ಠತೆ ಅನ್ವಯ ಪಟ್ಟಿಯನ್ನು ಸಿದ್ದಪಡಿಸಿ ಸರ್ಕಾರದ ಆದೇಶದ ಅನುಗುಣವಾಗಿ ನೇರನೇಮಕಾತಿ ನೇರವೇತನ ಪಾವತಿಸಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...