ಧಾರವಾಡ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಾಂತ್ರಿಕ ಕಾರಣಗಳಿಂದಾಗಿ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಿದ್ದು, ಇದರಿಂದ ಸುಲಲಿತ ಕಾರ್ಯಕ್ರಮಕ್ಕೆ ತೊಂದರೆ ಉಂಟಾಗಿತ್ತು. ಈ ಬಗ್ಗೆ ಪರಿಶೀಲಿಸ ಪಾಲಿಕೆ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.
ಇದನ್ನೂ ಓದಿ: ಧಾರವಾಡ | ಕನ್ನಡದಲ್ಲೇ ಮಾತನಾಡಿ, ಕನ್ನಡೇತರರಿಗೆ ಕನ್ನಡ ಕಲಿಸುತ್ತೇನೆ ಎಂದು ಪಣತೊಡೋಣ: ಸಂತೋಷ ಲಾಡ್
ಒಂದು ತಿಂಗಳ ಮೊದಲೇ ಪೂರ್ವಭಾವಿ ಸಭೆ ಜರುಗಿಸಿ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ ಕಾರ್ಯಕ್ರಮ ವೇದಿಕೆ ಅಲಂಕಾರ ಹಾಗೂ ಕಾರ್ಯಕ್ರಮದಲ್ಲಿ ಧ್ವನಿವರ್ಧಕ, ವೇದಿಕೆ ಸಿದ್ದತೆ ಜವಾಬ್ದಾರಿ ನೀಡಲಾಗಿತ್ತು. ಆದರೂ ತಾಂತ್ರಿಕ ಕಾರಣಗಳಿಂದ ವಿದ್ಯುತ್ ಪೂರೈಕೆ ಸಮಸ್ಯೆಯಾಗಿ ಕಾರ್ಯಕ್ರಮದಲ್ಲಿ ತೊಂದರೆ ಆಗಿದ್ದು, ಪರಿಶೀಲಿಸಿ ಸಂಬಂಧಿಸಿದ ಪಾಲಿಕೆ ಅಧಿಕಾರಿ ಮತ್ತು ಅಭಿಯಂತರ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.





