ವಿದ್ಯಾರ್ಥಿಗಳು ಕೆಲವು ವರ್ಷಗಳಿಂದ ಪೊಲೀಸ್ ಕಾನ್‌ಸ್ಟೆಬಲ್ ಸೇರುದಂತೆ ವಿವಿಧ ಹುದ್ದೆಗಳ ನೇಮಕಾತಿ ಆಗದಿರುವುದನ್ನು ಖಂಡಿಸಿ ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘಟನೆಯವರು ಬೃಹತ್ ಪ್ರತಿಭಟನೆ ನಡೆಸಿದರು.
ಧಾರವಾಡ ಪಟ್ಟಣದ ಜುಬಿಲಿ ವೃತ್ತದಲ್ಲಿ ವಿದ್ಯಾರ್ಥಿಗಳು ಜಮಾಯಿಸಿ, ಪ್ರತಿಭಟಸುತ್ತಿದ್ದವರು ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಘೋಷಣೆ ಕೂಗಿದರು.
ರಾಜ್ಯದಲ್ಲಿ ಸರಕಾರಿ ಹುದ್ದೆಗಳನ್ನು ಈ ವರ್ಷ ಕರೆಯುವರು, ಮುಂದಿನ ವರುಷ, ಕರೆಯುವರು ಎಂದು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಭ್ಯಾಸ ಮಾಡುತ್ತಿದ್ದು, ಕೆಲವು ವರ್ಷಗಳಿಂದ ಯಾವುದೇ ಹುದ್ದೆಗಳ ನೇಮಕಾತಿ ಪ್ರಕ್ರಿಯೆ
ನಡೆಯದೆ ಇರುವುದರಿಂದ ಉದ್ಯೋಗಾಕಾಂಕ್ಷಿಗಳು ವಯೋಮಿತಿ ಮೀರಿ ಉದ್ಯೋಗದಿಂದ ವಂಚಿತರಾಗುವಂತಹ ಪರಿಸ್ಥಿತಿ ಎದುರಾಗಿದೆ ಎಂದು ಅಳಲನ್ನು ತೋಡಿಕೊಂಡಿದ್ದಾರೆ.





