ಧಾರವಾಡ | ಇಂದಿರಾ ಕ್ಯಾಂಟೀನ್‍ ಆಹಾರ ಕುರಿತು ಸಾರ್ವಜನಿಕರ ದೂರು; ಅಧಿಕಾರಿಗಳ ದಿಢೀರ್ ಭೇಟಿ

Date:

ಧಾರವಾಡದ ನವಲಗುಂದ ಪುರಸಭೆ ವ್ಯಾಪ್ತಿಯಲ್ಲಿ ನಿರ್ಮಾಣವಾಗಿರುವ ಇಂದಿರಾ ಕ್ಯಾಂಟೀನಲ್ಲಿ ಪೂರೈಸಲಾಗುತ್ತಿರುವ ಆಹಾರದ ಪ್ರಮಾಣ, ಗುಣಮಟ್ಟದ ಕುರಿತು ಸಾರ್ವಜನಿಕರಿಂದ ದೂರುಗಳು ಸ್ವೀಕೃತವಾದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಸೂಚನೆ ಮೇರೆಗೆ ಅಧಿಕಾರಿಗಳ ತಂಡವು ಉಪಹಾರ ಸೇವಿಸುವ ಮೂಲಕ ಆಹಾರದ ಪ್ರಮಾಣ, ಆಹಾರದ ಗುಣಮಟ್ಟ ಕುರಿತು ಪರಿಶೀಲನೆ ಮಾಡಿದರು.

ಈ ವೇಳೆ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ ಮಾತನಾಡಿ, “ಸಾರ್ವಜನಿಕ ದೂರುಗಳ ಹಿನ್ನಲೆ ಈಗಾಗಲೇ ನವಲಗುಂದ ಪುರಸಭೆಯಿಂದ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಸಮರ್ಪಕ ಉತ್ತರ ನೀಡದಿದ್ದಲ್ಲಿ ಮತ್ತು ಕ್ಯಾಂಟೀನ್‍ಗಳಿಗೆ ವಿಧಿಸಿರುವ ನಿಯಮಗಳನ್ನು ಪಾಲಿಸದಿದ್ದಲ್ಲಿ ಗುತ್ತಿಗೆದಾರರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದರು.

ಇಡ್ಲಿ, ಅವಲಕ್ಕಿ ಸೇವಿಸಿದ ಅಧಿಕಾರಿಗಳು ಸ್ವಾದ ಹಾಗೂ ಗುಣಮಟ್ಟ ಮತ್ತು ಪ್ರಮಾಣದ ಪರಿಶೀಲನೆ ಮಾಡಿದರು. ಇಡ್ಲಿ, ಸಾಂಬಾರು, ಅವಲಕ್ಕಿ, ಚಟ್ನಿ ಕುರಿತ ದೂರುಗಳ ಬಗ್ಗೆ ಕ್ಯಾಂಟೀನ್ ಸಿಬ್ಬಂದಿಗಳನ್ನು ವಿಚಾರಿಸಿದರು. ಉಪಹಾರ ಸೇವನೆಗೆ ಆಗಮಿಸಿದ್ದ ಸಾರ್ವಜನಿಕರನ್ನು, ಮಾಧ್ಯಮ ಪ್ರತಿನಿಧಿಗಳನ್ನು ಮಾತನಾಡಿಸಿ, ಅಭಿಪ್ರಾಯ ಸಂಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂದಿರಾ ಕ್ಯಾಂಟೀನ್‍ನಲ್ಲಿ ಇಟ್ಟಿರುವ ದೂರು ದಾಖಲೆ ರಿಜಿಸ್ಟರ್‌ನಲ್ಲಿ, ಸಾರ್ವಜನಿಕರು ತಮ್ಮ ಅಭಿಪ್ರಾಯವನ್ನು ದಾಖಲಿಸಲು ಮನವಿ ಮಾಡಿದರು. ಸಾರ್ಜನಿಕರ ಅಭಿಪ್ರಾಯಗಳನ್ನು ಅವಲೋಕಿಸಿ ಗುತ್ತಿಗೆದಾರರ ಮೇಲೆ ಸೂಕ್ತ ಕ್ರಮಕೈಗೊಳ್ಳಬೇಕು. ಸಾರ್ವಜನಿಕರಿಗೆ ಹಾಗೂ ಕಾರ್ಮಿಕರಿಗೆ ಪೂರೈಸುವ ಆಹಾರದ ಗುಣಮಟ್ಟ ಚನ್ನಾಗಿರಬೇಕು. ಕ್ಯಾಂಟೀನ್‌ನಲ್ಲಿ ತಯಾರಿಸಲಾಗುತ್ತಿರುವ ಆಹಾರದ ಗುಣಮಟ್ಟ, ಪೂರೈಸಲಾಗುತ್ತಿರುವ ಪ್ರಮಾಣ ಹಾಗೂ ಸ್ವಚ್ಛತೆಯ ಕುರಿತು ಸಂಬಂಧಿಸಿದ ಗುತ್ತಿಗೆದಾರರಿಗೆ ಸೂಕ್ತ ನಿರ್ದೇಶನಗಳನ್ನು ನೀಡಿ, ಅವುಗಳನ್ನು ಪಾಲಿಸಲು ಸೂಚನೆ ನೀಡಿದರು.

ಇದನ್ನೂ ಓದಿ: ಧಾರವಾಡ | ಎಸ್‌ಐಆರ್ ಕೈಬಿಡಲು ಚುನಾವಣಾ ಆಯೋಗಕ್ಕೆ ಎಸ್‌ಯುಸಿಐ ಒತ್ತಾಯ

ಸರ್ಕಾರವು ನಿಗದಿಪಡಿಸಿರುವ ಪ್ರಮಾಣದಲ್ಲಿ ಆಹಾರ ಪೂರೈಕೆಯಾಗುತ್ತಿರುವ ಕುರಿತು ಪರಿಶೀಲಿಸಿ, ಪ್ರತಿದಿನ ಕಡ್ಡಾಯವಾಗಿ ನಿಗದಿತ ಪ್ರಮಾಣದಲ್ಲಿ ಆಹಾರಪೂರೈಸಲು. ಹಾಗೂ ಕ್ಯಾಂಟೀನ್ ಆವರಣದಲ್ಲಿ ಸ್ವಚ್ಛತೆ ಕಾಪಾಡಿಕೊಂಡು ಉತ್ತಮ ಗುಣಮಟ್ಟದ ಆಹಾರವನ್ನು ಪೂರೈಸಲು ಸೂಚಿಸಿ, ಸರ್ಕಾರದ ಸೂಚನೆಗಳನ್ನು ಉಲ್ಲಂಘಿಸಿದಲ್ಲಿ ನಿಯಮಾನುಸಾರ ಕ್ರಮಜರುಗಿಸಲಾಗುವುದೆಂದು ಸಂಬಂಧಿಸಿದ ಗುತ್ತಿಗೆದಾರರಿಗೆ ಎಚ್ಚರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ನಗರಾಭಿವೃಧ್ದಿ ಕೋಶದ ಕಾರ್ಯನಿರ್ವಾಹಕ ಅಭಿಯಂತರ ಗವಿಸಿದ್ದಪ್ಪ ಗೊನಾಳ, ನವಲಗುಂದ ಪುರಸಭೆ ಮುಖ್ಯಾಧಿಕಾರಿ ಶರಣು ಪೂಜಾರ, ಆರೋಗ್ಯ ನಿರೀಕ್ಷಕ ಅಕ್ಕಮಹಾದೇವಿ ಬಣಗಾರ ಸೇರಿದಂತೆ ಇತರ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...