ಧಾರವಾಡ | ಇಕ್ಕಟ್ಟಾದ ರಸ್ತೆಗಳಿಂದ ಬೇಸತ್ತ ಸಾರ್ವಜನಿಕರು

Date:

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ದಿನೆದಿನೇ ವಾಣಿಜ್ಯ ಚಟುವಟಿಕೆಗಳು ಹೆಚ್ಚಾಗುತ್ತಿದ್ದು, ನಗರಕ್ಕೆ ಬಂದು ಹೋಗುವವರ ಸಂಖ್ಯೆಯೂ ಹೆಚ್ಚಿದೆ. ಆದರೆ, ವಾಣಿಜ್ಯ ಸ್ಥಳದಲ್ಲಿ ಅಗತ್ಯವಾದ ರಸ್ತೆ ಸೌಲಭ್ಯಗಳಿಲ್ಲದೆ ಸಾರ್ವಜನಿಕರು, ವ್ಯಾಪಾರಿಗಳು ಬೇಸತ್ತಿದ್ದಾರೆ.

ಹಾವೇರಿ, ಗದಗ, ಉತ್ತರ ಕನ್ನಡ, ಬಾಗಲಕೋಟೆ ಹೀಗೆ ಸುತ್ತಮುತ್ತಲಿನ ಜಿಲ್ಲೆಗಳ ಅಪಾರ ಸಂಖ್ಯೆ ಜನರು ನಿತ್ಯ ಇಲ್ಲಿಗೆ ವ್ಯಾಪಾರ, ವ್ಯವಹಾರಗಳಿಗೆ ಓಡಾಡುತ್ತಾರೆ. ನಗರದ ನಿವಾಸಿಗಳು ತಮ್ಮ ಕಚೇರಿ ಕಾರ್ಯಗಳಿಗಾಗಿ ಓಡಾಡುವುದು ಸಾಮಾನ್ಯ. ಹೀಗಾಗಿ ನಗರದ ಪ್ರಮುಖ ರಸ್ತೆಗಳು ಇಡೀ ದಿನ ಜನದಟ್ಟಣೆ, ವಾಹನ ಸಂಚಾರದಿಂದ ಗಿಜಿಗುಡುತ್ತಿರುತ್ತದೆ.

ಕೆಲವು ರಸ್ತೆಗಳು ಕಿರಿದಾಗಿದ್ದು, ಎರಡು ವಾಹನ ಏಕ ಕಾಲದಲ್ಲಿ ಸರಾಗವಾಗಿ ಓಡಾಡುವುದು ಕಷ್ಟಕರವಾಗಿದೆ. ಕಿರಿದಾದ ರಸ್ತೆಯ ಮೇಲೆಯೇ ಬೇಕಾಬಿಟ್ಟಿಯಾಗಿ ವಾಹನ ನಿಲುಗಡೆ ಮಾಡುವುದು, ರಸ್ತೆ ಬದಿಯಲ್ಲೇ ತಳ್ಳುಗಾಡಿ, ಗೂಡಂಗಡಿ ಇಟ್ಟುಕೊಂಡು ವ್ಯಾಪಾರ ನಡೆಸುವುದು ಕೂಡ ಸುಗಮ ಸಂಚಾರಕ್ಕೆ ಸಮಸ್ಯೆಯಾಗಿದೆ ಎನ್ನುತ್ತಿದ್ದಾರೆ ಸಾರ್ವಜನಿಕರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಲಭ ಸಂಚಾರಕ್ಕಾಗಿ ಒನ್‌ವೇ ಸಂಚಾರ ವ್ಯವಸ್ಥೆ ಮಾಡಲಾಗಿದ್ದರೂ ಬೈಕ್ ಸವಾರರು ಎಲ್ಲೆಂದರಲ್ಲಿ ನುಗ್ಗುತ್ತಾರೆ. ಸಂಚಾರಿ ಪೊಲೀಸರ ಕ್ರಮಕ್ಕೂ ವಾಹನ ಸವಾರರೂ ಕ್ಯಾರೆ ಎನ್ನುತ್ತಿಲ್ಲ. ಆದ್ದರಿಂದ ಇನ್ನೂ ಹೆಚ್ಚು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ವ್ಯಾಪಾರಿಗಳು, ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

ಇವೆಲ್ಲವನ್ನೂ ಮೀರಿಸುವಂತೆ ನಗರದಲ್ಲಿ ನಿರಂತರವಾಗಿ ಒಂದಿಲ್ಲೊಂದು ಕಡೆ ರಸ್ತೆ ಕಾಮಗಾರಿ ನಡೆಯುತ್ತಲೇ ಇರುತ್ತವೆ. ಇವು ಎಂದೂ ಮುಗಿಯದ ಅಭಿವೃದ್ಧಿ ಕಾಮಗಾರಿಗಳಾಗಿ ಜನರಿಗೆ ಕಿರಿಕಿರಿ ಉಂಟಾಗಿದೆ.

ಸಂಗೊಳ್ಳಿ ರಾಯಣ್ಣ ವೃತ್ತದಿಂದ ದಾಜಿಬಾನಪೇಟೆ ಮಾರ್ಗದ ಒಂದು ಬದಿಯಲ್ಲಿ ಸಾಲಾಗಿ ಬೈಕ್‌ಗಳನ್ನು ನಿಲ್ಲಿಸಲಾಗಿರುತ್ತದೆ. ಇನ್ನೊಂದು ಬದಿಯಲ್ಲಿ ಉದ್ದಕ್ಕೂ ಹಣ್ಣು, ಹೂವು ಮಾರಾಟ ಮಾಡುವ ಬೀದಿಬದಿ ವ್ಯಾಪಾರಿಗಳು ಇರುತ್ತಾರೆ. ದುರ್ಗದಬೈಲ್ ಮಾರುಕಟ್ಟೆಯನ್ನು ಸಂಪರ್ಕಿಸುವ ಪ್ರಮುಖ ರಸ್ತೆಗಳಲ್ಲಿ ಇದೂ ಒಂದು. ಗೌಳಿಗಳ ಎಮ್ಮೆಗಳ ಹಿಂಡು ಈ ಗಿಜಿಗುಡುವ ರಸ್ತೆಯಲ್ಲೇ ಓಡಾಡುತ್ತವೆ.

ಪಕ್ಕದಲ್ಲೇ ಹೊಸದಾಗಿ ಜನತಾ ಬಜಾರ್ ನಿರ್ಮಾಣ ಮಾಡಲಾಗಿದೆ. ವ್ಯಾಪಾರಿಗಳಿಗೆ ಇನ್ನೂ ಅಲ್ಲಿ ಮಳಿಗೆ ಕೊಟ್ಟಿಲ್ಲ. ಮಳಿಗೆ ಹಂಚಿಕೆ ಮಾಡಿದರೆ ಅಲ್ಲಿಯೇ ವ್ಯಾಪಾರ ಮಾಡುತ್ತೇವೆ ಎನ್ನುತ್ತಾರೆ ವ್ಯಾಪಾರಿಗಳು. ಆದಷ್ಟು ಬೇಗ ಈ ಜಂಗುಳಿಯಿಂದ ಮುಕ್ತಿ ನೀಡಿ ಎಂದು ಪಾಲಿಕೆಯ ಅಧಿಕಾರಿಗಳ ಬಳಿ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...