ಧಾರವಾಡ | ಮಳೆಯಿಂದ ಹೆಸರು ಬೆಳೆ ನಾಶ; ಖರೀದಿ ಕೇಂದ್ರ ಸ್ಥಾಪನೆಗೆ ರೈತರ ಮನವಿ

Date:

ವಿಪರೀತ ಮಳೆಯಿಂದಾಗಿ ಹೆಸರು ಬೆಳೆ ನಾಶವಾಗಿದ್ದು, ಕೂಡಲೇ ಸರ್ಕಾರ ರೈತರ ನೆರವಿಗೆ ಧಾವಿಸಿ ಖರೀದಿ ಕೇಂದ್ರ ಸ್ಥಾಪಿಸಬೇಕು ಎಂದು ಧಾರವಾಡ ಜಿಲ್ಲೆ ನವಲಗುಂದ ತಾಲೂಕು ತಹಶೀಲ್ದಾರ್‌ ಸುಧೀರ್‌ ಸಾಹುಕಾರ ಅವರಿಗೆ ರೈತರು ಮನವಿ ಸಲ್ಲಿಸಿದರು.

ಮಾರುಕಟ್ಟೆಯಲ್ಲಿ ಹೆಸರು ಕಾಳು ಪ್ರತಿ ಕ್ವಿಂಟಲ್‌ಗೆ 3 ರಿಂದ 5 ಸಾವಿರವರೆಗೆ ಖರೀದಿ ಮಾಡಲಾಗುತ್ತಿದೆ. ಇದರಿಂದ ಅನ್ನದಾತರಿಗೆ ಅನ್ಯಾಯವಾಗುತ್ತಿದ್ದು, ರೈತರ ಸಮಸ್ಯೆ ಗೊತ್ತಿದ್ದರೂ ಜನಪ್ರತಿನಿಧಿಗಳು ಖರೀದಿ ಕೇಂದ್ರ ಪ್ರಾರಂಭಿಸಲು ಮುಂದಾಗುತ್ತಿಲ್ಲ. ಆಳುವವರು ದೇಶದ ಬೆನ್ನೆಲುಬು ಎನ್ನುವ ರೈತನ ಬೆನ್ನು ಮುರಿಯುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ರೈತ ಮುಖಂಡ ಮಾಬುಸಾಬ ಯರಗುಪ್ಪಿ ಅಸಮಾಧಾನ ವ್ಯಕ್ತಪಡಿಸಿದರು.

ಸತತ ಸುರಿದ ಮಳೆಯಿಂದಾಗಿ ಕಟಾವಿಗೆ ಬಂದ ಹೆಸರು ಬೆಳೆ ನಾಶವಾಗಿದೆ. ರೈತರು ಸಾಲ ಮಾಡಿ ಹೆಚ್ಚಿನ ಪ್ರಮಾಣದಲ್ಲಿ ಹೆಸರು ಬೆಳೆ ಬೆಳೆದಿದ್ದರು. ಈಗ ಅಳಿದುಳಿದ ಹೆಸರನ್ನು ಖರೀದಿಸಲು ಬೆಂಬಲ ಬೆಲೆಯಡಿ ಸರ್ಕಾರ ಈ ಕೂಡಲೇ ಹೆಸರು ಕಾಳು ಖರೀದಿ ಕೇಂದ್ರ ಆರಂಭಿಸಬೇಕು. ಹೆಸರು ಬಿತ್ತಿ, ರಾಶಿ ಮಾಡಲು ಎಕರೆಗೆ ಕನಿಷ್ಠ 15 ರಿಂದ 20 ಸಾವಿರ ರೂ. ಖರ್ಚಾಗುತ್ತದೆ. ಈಗ ನೋಡಿದರೆ ಸೂಕ್ತ ಬೆಲೆ ಸಿಗುತ್ತಿಲ್ಲ. ವ್ಯಾಪಾರಿಗಳು ಹೇಳಿದ ಬೆಲೆಗೆ ಮಾರಾಟ ಮಾಡುವ ಪರಿಸ್ಥಿತಿ ಎದುರಾಗಿದೆ. ಹೀಗಾದರೆ ರೈತರು ಬದುಕೋದು ಹೇಗೆ? ಆದ್ದರಿಂದ ಕೂಡಲೆ ರೈತರ ಸಮಸ್ಯೆಗೆ ಧಾವಿಸಿ ಖರೀದಿ ಕೇಂದ್ರ ಪ್ರಾರಂಭಿಸಬೇಕು ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಧಾರವಾಡ | ಎಸ್‌ಐಆರ್ ಕೈಬಿಡಲು ಚುನಾವಣಾ ಆಯೋಗಕ್ಕೆ ಎಸ್‌ಯುಸಿಐ ಒತ್ತಾಯ

ಈ ಸಂದರ್ಭದಲ್ಲಿ ಕರವೇ ತಾಲೂಕು ಅಧ್ಯಕ್ಷ ಸಿರಾಜುದ್ದಿನ ಧಾರವಾಡ, ಮಹಮ್ಮದಲಿ ಮಿರ್ಜಿ, ನಿಂಗಪ್ಪ ಕುಂಬಾರ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...