ಧಾರವಾಡ | ನಗರದಲ್ಲಿ ಬಾಲಕಾರ್ಮಿಕ ಮಕ್ಕಳ ರಕ್ಷಣಾ ಕಾರ್ಯಾಚರಣೆ ಚುರುಕು

Date:

ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹಾಗೂ ಸಹಾಯಕ ಕಾರ್ಮಿಕ ಆಯುಕ್ತರ ನಿರ್ದೇಶನದಂತೆ ಧಾರವಾಡದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ರಕ್ಷಣಾ ಕಾರ್ಯಾಚರಣೆ ಮತ್ತು ವಿವಿದೆಡೆ ತಪಾಸಣೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು.

ಶಹರದಲ್ಲಿರುವ ಅಂಗಡಿ, ಗ್ಯಾರೇಜ್, ಬೇಕರಿ, ಹೋಟೆಲ್, ವಾಣಿಜ್ಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ ತಪಾಸಣೆ ನಡೆಸಿ ಸಂಸ್ಥೆಯ ಮಾಲಿಕರಿಗೆ ಬಾಲಕಾರ್ಮಿಕ ಮತ್ತು ಕಿಶೊರ ಕಾರ್ಮಿಕ (ನೀಷೆಧ ಮತ್ತು ನಿಯಂತ್ರಣ) ಕಾಯ್ದೇ 1986 ರ ಕುರಿತು ಜಾಗೃತಿ, ನಿಯಮ ಬಾಹಿರವಾಗಿ ಮಕ್ಕಳನ್ನು ನೇಮಿಸಿಕೊಂಡಲ್ಲಿ ರೂ. 20 ಸಾವಿರ ರಿಂದ 50 ಸಾವಿರದ ವರೆಗೆ ದಂಡ, ಇಲ್ಲವೇ ಕನಿಷ್ಟ 6 ತಿಂಗಳಿಂದ ಎರಡು ವರ್ಷಗಳ ವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಮಾಲಿಕರಿಗೆ ಹಾಗೂ ಸಾರ್ವಜನಿಕರಿಗೆ ಕಾಯ್ದೆ ಕುರಿತು ಜಾಗೃತಿ ಮೂಡಿಸಿದರು.

ಈ ಸಂದರ್ಭದಲ್ಲಿ ಎನ್‍ಟಿಟಿಎಫ್ ಹತ್ತಿರದ ರಿಚ್ ಆಟೋ ಸ್ಪಾರ್ ಗ್ಯಾರೇಜನಲ್ಲಿ ಕೆಲಸ ಮಾಡುತ್ತಿದ್ದ ಒಬ್ಬ ಕಿಶೋರ ಕಾರ್ಮಿಕ ಪತ್ತೆ ಆಗಿದ್ದು, ಕಾರ್ಯಾಚರಣೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ಪಿ ದೊಡ್ಡಮನಿ, ಕಾರ್ಮಿಕ ಅಧಿಕಾರಿ ಮಾರಿಕಾಂಬ ಹುಲಕೋಟಿ, ಹಿರಿಯ ಕಾರ್ಮಿಕ ನಿರೀಕ್ಷಕಿ ಭುವನೇಶ್ವರಿ ಕೋಟಿಮಠ, ಅಂಗನವಾಡಿ ಮೇಲ್ವಿಚಾರಕಿ ಲಕ್ಷ್ಮಿ, ಯೋಜನಾ ನಿರ್ದೇಶಕ ಬಸವರಾಜ ಸಿ ಪಿ, ಪೊಲೀಸ್ ಸಿಬ್ಬಂದಿ ಬಸವರಾಜ ಕುಂಬಾರಗೊಪ್ಪ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಾಮಾಜಿಕ ಕಾರ್ಯಕರ್ತ ಕರಿಯಪ್ಪ ಕೌಜಲಗಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...