ಧಾರವಾಡ | ಸರ್ವಜ್ಞನ ತ್ರಿಪದಿ ಜನಸಾಮಾನ್ಯರಿಗೆ ಸುಲಭವಾಗಿ ಅರ್ಥೈಸುವ ಸಾಹಿತ್ಯ: ಶಾಕೀರ್ ಸನದಿ

Date:

ಸರ್ವಜ್ಞರು ತ್ರಿಪದಿ ಎಂಬ ಕಾವ್ಯರೂಪದ ಮೂಲಕ ಜನಪ್ರಿಯ ಆಗಿದ್ದಾರೆ. ತ್ರಿಪದಿ ಚಿಕ್ಕದಾಗಿದ್ದರೂ ಅದರಲ್ಲಿ ಆಳವಾದ ತತ್ವ, ವ್ಯಂಗ್ಯ ಭರಿತ ಹಾಸ್ಯ ಹಾಗೂ ಜೀವನ ಪಾಠ ಅಡಕವಾಗಿರುತ್ತದೆ. ತ್ರಿಪದಿಗಳು ಸುಲಭವಾಗಿ ಮನನವಾಗುವಂತೆ ರಚಿಸಲ್ಪಟ್ಟಿರುವುದರಿಂದ ಸಾಮಾನ್ಯ ಜನರು ಸಹ ಅರ್ಥೈಸಿಕೊಳ್ಳಲು ಅನುಕೂಲವಾಗುತ್ತದೆ ಎಂದು ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ ಹೇಳಿದರು.

ನಗರದ ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಸಂತಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.

ಸಂತಕವಿ ಸರ್ವಜ್ಞ ಅವರ ವಚನಗಳು ಜನರಲ್ಲಿ ಜಾಗೃತಿ ಮೂಡಿಸುತ್ತವೆ. ಅವರ ತ್ರಿಪದಿಗಳು ಸತ್ಯ ಮತ್ತು ನೀತಿಯ ಮಾರ್ಗವನ್ನು ತೋರಿಸಿವೆ. ಯುವಕರು ಮಹಾನುಭಾವರ ಆದರ್ಶಗಳನ್ನು ಅನುಸರಿಸಬೇಕು. ಕಾಯಕದಲ್ಲಿ ಸಮರ್ಪಣೆ ಇದ್ದರೆ, ವ್ಯಕ್ತಿ ಹಾಗೂ ರಾಷ್ಟ್ರ ಅಭಿವೃದ್ಧಿ ಹೊಂದುತ್ತದೆ. ಸಮಾಜ ಸೇವೆಯೇ ನಿಜವಾದ ಸಾಧನೆ ಎಂಬ ಸಂದೇಶವನ್ನು ಸಾರಿದವರು ಸಂತಕವಿ ಸರ್ವಜ್ಞ ಆಗಿದ್ದಾರೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನಸಾಮಾನ್ಯರ ಜೀವನಕ್ಕೆ ಹತ್ತಿರವಾದ ತ್ರಿಪದಿ ಸಾಹಿತ್ಯದ ಮೂಲಕ ಸಂತಕವಿ ಸರ್ವಜ್ಞರು, ನೈತಿಕ ಮೌಲ್ಯಗಳು, ದಾನ, ಧರ್ಮ, ಶ್ರಮ ಮತ್ತು ಸತ್ಯದ ಮಹತ್ವವನ್ನು ಬೋಧಿಸಿದರು. ಸರ್ವಜ್ಞರು ಒಂದೇ ಜಾತಿಗೆ ಸೀಮಿತರಾಗದೇ ಸಮಾಜದ ಎಲ್ಲ ವರ್ಗಗಳನ್ನೂ ಸಮನಾಗಿ ನೋಡಿದ ಜ್ಞಾನಿ. ಓದಿನಿಂದ ಮಾತ್ರ ಜ್ಞಾನ ಸಾಧ್ಯವಿಲ್ಲ. ಕಾಯಕ ಮತ್ತು ಅನುಭವದಿಂದಲೇ ನಿಜವಾದ ಜ್ಞಾನ ದೊರೆಯುತ್ತದೆ ಎಂಬ ಸಂದೇಶವನ್ನು ತಮ್ಮ ತ್ರಿಪದಿಗಳ ಮೂಲಕ ಸ್ಪಷ್ಟಪಡಿಸಿದ್ದಾರೆ. ಯಾವುದೇ ವಿಷಯವನ್ನು ಬಿಟ್ಟುಬಿಡದೆ ಜೀವನದ ಎಲ್ಲ ಆಯಾಮಗಳನ್ನು ಸ್ಪರ್ಶಿಸಿದವರು ಸರ್ವಜ್ಞರಾಗಿದ್ದಾರೆ ಎಂದು ಹೇಳಿದರು.

ಮಾಜಿ ಸಂಸದ ಪ್ರೊ. ಐ.ಜಿ.ಸನದಿ ಮಾತನಾಡಿ, ಸಂತಕವಿ ಸರ್ವಜ್ಞ ಅವರ ತ್ರಿಪದಿಗಳನ್ನು ಪದೇ ಪದೇ ಸ್ಮರಿಸಿ ಅವುಗಳ ಅರ್ಥವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸರ್ವಜ್ಞರ ವಚನಗಳು ಮಾನವ ಜೀವನದ ಸತ್ಯಗಳನ್ನು ಸ್ಪಷ್ಟವಾಗಿ ತಿಳಿಸುವ ದಾರಿ ದೀಪಗಳಾಗಿವೆ. ಸರಳ ಭಾಷೆಯಲ್ಲಿ ಆಳವಾದ ತತ್ತ್ವವನ್ನು ಸಾರುವ ಅವರ ತ್ರಿಪದಿಗಳು ಮಾನವೀಯತೆ ಸತ್ಯ ಮತ್ತು ನೀತಿಯ ಮಾರ್ಗವನ್ನು ಬೋಧಿಸುತ್ತವೆ. ವಿದ್ಯಾರ್ಥಿಗಳು ಸರ್ವಜ್ಞರ ವಚನಗಳನ್ನು ಜೀವನದುದ್ದಕ್ಕೂ ಸ್ಮರಿಸಿಕೊಂಡು ತಮ್ಮ ನಡೆ ನುಡಿಯಲ್ಲಿ ಅನುಸರಿಸಬೇಕು.  ಸರ್ವಜ್ಞರ ತತ್ವಗಳು ಇಂದಿಗೂ ಪ್ರಸ್ತುತವಾಗಿವೆ ಹಾಗೂ ಸಮಾಜ ಸುಧಾರಣೆಗೆ ಮಾರ್ಗದರ್ಶಿಯಾಗಿವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಆದರ್ಶ ಪದವಿ ಪೂರ್ವ ಕಾಲೇಜಿನ ನಂದೀಶ ಕಾಖಂಡಕಿ ಅವರು ಸಂತಕವಿ ಸರ್ವಜ್ಞ ಅವರ ಜೀವನ ಚರಿತ್ರೆ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ರವಿ ಕುಲರ್ಣಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಇದನ್ನೂ ಓದಿ ಧಾರವಾಡ | ಸಂಗೀತ ಕಲಿಯುವ ಮಕ್ಕಳು ಸರಿಯಾಗಲಿ, ತಪ್ಪಾಗಲಿ ಹಾಡಲು ಹೆದರಬಾರದು: ಸಂಗೀತಾ ಕಟ್ಟಿ

ವೇದಿಕೆಯಲ್ಲಿ ಧಾರವಾಡ ಜಿಲ್ಲಾ ಕರ್ನಾಟಕ ಪ್ರದೇಶ ಕುಂಬಾರ ಸಂಘದ ಅಧ್ಯಕ್ಷ ಬಸವಂತಪ್ಪ ಬಿ.ಚಕ್ರಸಾಲಿ, ನಿವೃತ್ತ ಜಿಲ್ಲಾ ನ್ಯಾಯಾಧೀಶ ಜಿ. ಎಂ. ಕುಂಬಾರ, ಪ್ರಧಾನ ಕಾರ್ಯದರ್ಶಿ ಎಮ್. ಪಿ.ಕುಂಬಾರ, ಶಂಕರ ಕುಂಬಾರ, ಐಟಿಐ ಕಾಲೇಜು ಪ್ರಾಂಶುಪಾಲ ಕಿರಣ ಆಚಾರ್ಯ ಅವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಮುದಾಯದ ಮುಖಂಡರು,  ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...