ಧಾರವಾಡ | ಸಾಮಾಜಿಕ ಅನಿಷ್ಠಗಳ ವಿರುದ್ಧ ಶರಣರು ವಚನ ಚಳುವಳಿ ರೂಪಿಸಿದ್ದರು: ಶಾಕೀರ್ ಸನದಿ

Date:

12 ನೇ ಶತಮಾನದ ಬಸವಣ್ಣನವರ ನೇತೃತ್ವದಲ್ಲಿ ಅನೇಕ ಶರಣರು ರಚಿಸಿರುವ ವಚನಗಳಲ್ಲಿ ಜೀವನ ಮೌಲ್ಯಗಳಿವೆ. ನಮ್ಮ ಪೂರ್ವಜರು ಪ್ರಾಮಾಣಿಕತೆ ಹೊಂದಿದ್ದರು ಮತ್ತು ಅವರು ಮಾಡುವ ಕಾಯಕದಲ್ಲಿ ನಂಬಿಕೆ ಇಟ್ಟಿದ್ದರು ಎಂದು ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ ಹೇಳಿದರು.

ಫೆ. 10ರಂದು ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ ಸಾಂಸ್ಕøತಿಕ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಕಾಯಕ ಶರಣರ ಜಯಂತಿ ಕಾರ್ಯಕ್ರಮದಲ್ಲಿ ಕಾಯಕ ಶರಣರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ, ಮಾತನಾಡಿ, ಪೂರ್ವಜರಲ್ಲಿ ಇದ್ದ ಪ್ರಾಮಾಣಿಕತೆ, ಬದ್ಧತೆ ಮತ್ತು ನಂಬಿಕೆಗಳು ಇಂದಿನ ಸಾಮಾಜದಲ್ಲಿ ಕಡಿಮೆಯಾಗಿವೆ. ಸಾಮಾಜದಲ್ಲಿ ಪರಸ್ಪರ ಅಪನಂಬಿಕೆ, ಅಸಹಿಷ್ಣುತೆ ಹೆಚ್ಚಾಗುತ್ತಿದೆ. ವಚನಗಳನ್ನು ಅಧ್ಯಯನ ಮಾಡಿ, ಅಳವಡಿಸಿಕೊಂಡಲ್ಲಿ ಪರಸ್ಪರರು ವ್ಯಕ್ತಿ ಗೌರವ ಮತ್ತು ಸಹಕಾರದಿಂದ ಬದುಕಬಹುದಾಗಿದೆ ಎಂದು ಹೇಳಿದರು.

ಬಸವಣ್ಣನ ಕಾಲದಲ್ಲಿ ನಾಡಿನ ಅನೇಕ ಸ್ಥಳಗಳಿಂದ ಆಗಮಿಸಿದ್ದ ಶರಣರು ತಮ್ಮ ಕಾಯಕದೊಂದಿಗೆ ಸಾಮಾಜಿಕ ಬದಲಾವಣೆ ಮತ್ತು ಸುಧಾರಣೆಗಾಗಿ ವಚನಗಳನ್ನು ರಚಿಸಿ, ಮಾರ್ಗದರ್ಶನ ಮಾಡಿದರು. ಅಂದು ಅಸ್ತಿತ್ವದಲ್ಲಿದ್ದ ಕಂದಾಚಾರಗಳನ್ನು, ಸಾಮಾಜಿಕ ಅನಿಷ್ಠಗಳನ್ನು ವಚನಗಳ ಮೂಲಕ ವಿರೋಧಿಸಿದರು. ಹೊಸ ಪರಂಪರೆಗೆ ಪ್ರೋತ್ಸಾಹಿಸಿದರು. ಮಾಡುವ ಕಾಯಕ ಶ್ರೇಷ್ಠವೆಂದು ಅವರು ಸಾರಿದರು. ಆ ಮೂಲಕ ಸಾಮಾಜದಲ್ಲಿ ಸಮಾನತೆ, ಶಾಂತಿ, ಸೌರ್ಹಾದತೆಯನ್ನು ಹೆಚ್ಚಿಸಲು ಪ್ರಯತ್ನಿಸಿದರು ಎಂದರು.

ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಅಧ್ಯಕ್ಷತೆ ವಹಿಸಿ, ಮಾತನಾಡಿ, ಅನೇಕ ಸಮಾಜದ ಕಾಯಕದ ಶರಣರನ್ನು ಗುರುತಿಸಿ, ಗೌರವಿಸಲು ಸರ್ಕಾರವು ಕಾಯಕ ಶರಣರ ಜಯಂತಿಯನ್ನು ಆಚರಿಸುತ್ತಿದೆ. ವಿಶೇಷವಾಗಿ ಮಾದಾರ ಚನ್ನಯ್ಯ, ಮಾದಾರ ಧೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಮತ್ತು ಉರಿಲಿಂಗಪೆದ್ದಿ ಶರಣರ ಜೀವನ ಸಾಧನೆಗಳನ್ನು ಮತ್ತು ತತ್ವ, ಬೋಧನೆಗಳನ್ನು ಸಮಾಜಕ್ಕೆ ಪರಿಚಯಿಸಿ, ಪ್ರಸ್ತುತಪಡಿಸುವ ಕಾರ್ಯವನ್ನು ಈ ಜಯಂತಿಯಲ್ಲಿ ಮಾಡಲಾಗುತ್ತಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೇಲು ಕೀಳು, ಹೆಣ್ಣು ಗಂಡು ಮತ್ತು ಮೇಲ್ಜಾತಿ ಕೆಳಜಾತಿ ಎಂಬ ಅಸಮಾನತೆ ಹೊಂದಿದ್ದ ಸಮಾಜದಲ್ಲಿ ಕಾಯಕವನ್ನು ಜೀವನದ ಸಾಧನವನ್ನಾಗಿ ಮಾಡಿಕೊಂಡು ಬದುಕಿದ್ದ ಶರಣರು ತಮ್ಮ ಕಾಯಕವನ್ನು ಜಾತಿಗೆ ಸೇರಿಸಿಲ್ಲ. ಜಾತಿಯತೆಯನ್ನು ವಿರೋಧಿಸಿ ತಮ್ಮ ವಚನಗಳನ್ನು ರಚಿಸಿದ್ದಾರೆ. ಇಂದಿನ ಸಮಾಜಕ್ಕೆ ವಿಶೇಷವಾಗಿ ಯುವಸಮೂಹಕ್ಕೆ ವಚನಗಳನ್ನು ಪರಿಚಯಿಸಿ, ಅದರಲ್ಲಿನ ತಿರುಳನ್ನು ತಿಳಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು. 

ಕಾಯಕ ಶರಣರ ಜಯಂತಿ ಕಾರ್ಯಕ್ರಮದಲ್ಲಿ ವಿವಿಧ ಶರಣ ಕುರಿತು ರಂಜಾನ ದರ್ಗಾ, ಡಾ. ಮಾಲತೇಶ ಪೂಜಾರ, ಡಾ. ಗಂಗಾಧರ ಗಣಪತಿ ಗರಗ ಹಾಗೂ ಬಿ.ಪಿ. ಮಲ್ಲೂರ ಅವರು ವಿಶೇಷ ಉಪನ್ಯಾಸ ನೀಡಿದರು.

ಇದನ್ನೂ ಓದಿ ಧಾರವಾಡ | ನೂತನ ಜಿಲ್ಲಾಧಿಕಾರಿಯಾಗಿ ಸ್ನೇಹಲ್. ಆರ್ ಅಧಿಕಾರ ಸ್ವೀಕಾರ

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿದರು. ರವಿ ಕುಲಕರ್ಣಿ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಲಕ್ಷ್ಮಣ ಬಕಾಯಿ ಸೇರಿದಂತೆ ಧಾರವಾಡ ಜಿಲ್ಲಾ ಕಾಯಕ ಶರಣರ ಸಂಘ-ಸಂಸ್ಥೆಗಳು ಹಾಗೂ ಕಾಯಕ ಸಮಾಜದ ಅಧ್ಯಕ್ಷರು, ಮುಖಂಡರು, ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

WhatsApp Image 2024 09 06 at 11.32.31 a95e9ba6
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...