ಧಾರವಾಡ | ಸಾಮಾಜಿಕ ಬದ್ಧತೆ ಮತ್ತು ಜೀವನದ ಬದ್ಧತೆ ವಿರುದ್ಧಾರ್ಥಕ ಪದಗಳಲ್ಲ: ಡಾ. ವಿನಯಾ ವಕ್ಕುಂದ

Date:

ಸಾಮಾಜಿಕ ಬದ್ಧತೆ ಮತ್ತು ಜೀವನದ ಬದ್ಧತೆ ಎನ್ನುವುದು ವಿರುದ್ಧಾರ್ಥಕ ಶಬ್ಧಗಳಲ್ಲ ಎಂದು ಖ್ಯಾತ ಸಾಹಿತಿ ಹಾಗೂ ಮಹಿಳಾಪರ ಚಿಂತಕಿ ಡಾ.‌ವಿನಯಾ‌ ವಕ್ಕುಂದ ಧಾರವಾಡದ ಸಮುದಾಯ ಹಾಗೂ ಬೆಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ವಿದ್ಯಾವರ್ಧಕ ಸಂಘ, ರಾ.ಹ. ದೇಶಪಾಂಡೆ ಭವನದಲ್ಲಿ ಜೋಸೆಫ್ ಮಲ್ಲಾಡಿ ರಚಿತ ಸುಡುವ ಕನಸುಗಳು ಎಂಬ ಕವನ ಸಂಕಲನ ಬಿಡುಗಡೆಗೊಳಿಸಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಬದ್ಧತೆ ಬಗ್ಗೆ ಮಾತಾಡುವುದೇ ತಪ್ಪೇನೋ? ಅಪರಾಧವೇನೋ? ಸಾಮಾಜಿಕ ಬದ್ಧತೆ ಇರುವುದು ಒಳ್ಳೆಯ ಕವಿತೆ ಆಗಲಾರದೇನೋ? ಎನ್ನುವಂತ ತೊಳಲಾಟಕ್ಕೆ ಈಗಿನ ಕವಿಗಳು ಬಿದ್ದಿದ್ದಾರೆ. ಸಾಮಾಜಿಕ ಬದ್ಧತೆ ಮತ್ತು ಜೀವನ ಬದ್ಧತೆ ಎರಡೂ ಬೇರೆ ಬೇರೆಯಲ್ಲ. ಎಷ್ಟೋ ಸಲ ದೊಡ್ಡ ದೊಡ್ಡ ಕವಿಗಳು ಕೂಡ ನಾನು ಬದ್ಧ ಕವಿಯಲ್ಲ, ಆದರೆ ನಾನು ಜೀವನಕ್ಕೆ ಬದ್ಧನಾಗಿದ್ದಿನಿ ಎಂದು ಹೇಳುತ್ತಾರೆ. ಅಂದರೆ ಧಮನಿತರ ಪರವಾಗಿದ್ದೇನೆ ಎಂದರ್ಥವಲ್ಲವೇ? ನಾನೊಬ್ಬ ಬದುಕಬೇಕೆನ್ನುವ ಅವಕಾಶವಾದಿತನವನ್ನು ಕಳೆದುಕೊಳ್ಳದೇ ಮನುಷ್ಯನಾಗುವ ಪ್ರಕ್ರಿಯೆ.

ಸಮಾಜದಲ್ಲಿ ಮೌನವು ಕೆಡಕನ್ನು ಬೆಳೆಸುತ್ತಲೇ ಇರುತ್ತದೆ. ನಾನು ಕೂಡ ತಪ್ಪಿತಸ್ಥನೆ ಎನ್ನುವ ಪ್ರಶ್ನೆ ತುಂಬಾ ತೀವ್ರವಾಗಿ ಇಲ್ಲಿ ಹಲವಾರು ಕವನಗಳಲ್ಲಿ ವ್ಯಕ್ತವಾಗಿದೆ. ವರ್ತಮಾನ ಎದುರಿಟ್ಟುಕೊಂಡು ಕಾವ್ಯವನ್ನು ರಚನೆ ಮಾಡುವುದು ಬಹಳ ಸವಾಲಿನ ಕೆಲಸ, ಆ ಸವಾಲನ್ನು ಕವಿ ಜೋಸೆಫ್ ತುಂಬಾ ಮುಖ್ಯವಾದ ಧಾತುವಿನಲ್ಲಿ ಎದುರಿಸಿದ್ದಾರೆ. ಸಮಾಜದ ಪರವಾಗಿ ನಿಂತು ಕೆಲಸಮಾಡುವ ವ್ಯಕ್ತಿ, ರಾಜ್ಯಮಟ್ಟದ ಪ್ರಶಸ್ತಿಗಳು ಬಂದರೂ ಕೂಡ ಅವರಲ್ಲಿರುವ ವಿನಮ್ರತೆ, ಧನ್ಯತೆ ಕಡಿಮೆ ಆಗುವುದಿಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಲಘಟಗಿಯ ಗುಡ್ ನ್ಯೂಸ್ ಮಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯ ಡಾ. ಬಿ.ಜಿ. ಬಿರಾದಾರ ಮಾತನಾಡಿ, ಮಲ್ಲಾಡಿಯವರಿಗಿರುವ ಸಾಮಾಜಿಕ ಕಳಕಳಿಯೇ ಅವರನ್ನು ಉತ್ತಮ ಕವಿಯಾಗಿಸಿದೆ ಎಂದರು. ನ್ಯಾಯವಾದಿ ಹಾಗೂ ಚಿಂತಕ ಅಮೋಘಸಿದ್ಧ ಮಾ. ಖೋಬ್ರಿ ಅವರು ವಿವಿಧ ಮಗ್ಗಲುಗಳ ಅನುಭವಗಳನ್ನು ಚಿಂತನೆಮಾಡಿ ಅನುಭವದಿಂದ ಬಂದಂತಹ ಅತ್ಯುತ್ತಮ ಸಾಹಿತ್ಯವನ್ನು ಕಟ್ಟಿಕೊಟ್ಟಿದ್ದಾರೆ ಎಂದು ಹೇಳಿದರು.

ಈ ವರದಿ ಓದಿದ್ದೀರಾ? ಹುಬ್ಬಳ್ಳಿ | ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಸಿಲಿಂಡರ್ ಸ್ಫೋಟ: 10 ಮಂದಿಗೆ ಗಾಯ; ಓರ್ವ ವೃದ್ಧ ಗಂಭೀರ

ಸಮುದಾಯ ಸಂಘದ ಅಧ್ಯಕ್ಷ ಬಿ.ಐ. ಈಳಿಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಗೀಗೀ ಪದ ಕಲಾವಿದರಾದ ಯಲ್ಲಪ್ಪ ತಿರ್ಲುಕೊಪ್ಪ ಮತ್ತು ಸಂಗಡಿಗರಿಂದ ಗೀತಗಾಯನ ನಡೆಯಿತು. ಜೋಸೆಫ್ ಮಲ್ಲಾಡಿಯವರ ಎರಡು ಕವನಗಳನ್ನು ಹೇಮಂತ ಲಮಾಣಿ ಹಾಗೂ ಸಂಗಡಿಗರು ಶಾಸ್ತ್ರೀಯ ಸಂಗೀತದಲ್ಲಿ ಪ್ರಸ್ತುತ ಪಡಿಸಿದರು.

ಸಮುದಾಯದ ಕಾರ್ಯದರ್ಶಿ ಈರಣ್ಣ ಐನಾಪೂರ ಸ್ವಾಗತಿಸಿದರು. ಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಬಿ. ಹೆಚ್. ಕುರಿ ನಿರೂಪಿಸಿದರು. ಭೂಮಿ ಪತ್ತಾರ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...