ಧಾರವಾಡ | ಕಿಮ್ಸ್‌ ಆಸ್ಪತ್ರೆ ಅಧಿಕಾರಿಗಳಿಗೆ ಬೀದಿ ನಾಯಿಗಳ ತಲೆನೋವು

Date:

ಉತ್ತರ ಕರ್ನಾಟಕ ಭಾಗದ ಜನರಿಗೆ ಜೀವನಾಡಿಯಂತೆ ಕಂಡಿರುವ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಆಸ್ಪತ್ರೆ ಆವರಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಅವರನ್ನು ನಿಯಂತ್ರಿಸುವುದೇ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ನಾಯಿಗಳ ಹಾವಳಿ ತಡೆಗಾಗಿ ಕಠಿಣ ಕ್ರಮ ಕೈಗೊಳ್ಳುವಂತೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (ಎಚ್‌ಡಿಎಂಸಿ) ಪೌರಾಯುಕ್ತರಿಗೆ ದೂರು ನೀಡಿದ್ದಾರೆ.

ಕಳೆದ ಕೆಲವು ತಿಂಗಳಿಂದ ಬೀದಿ ನಾಯಿಗಳ ಹಾವಳಿಗೆ ಸಂಬಂಧಿಸಿದಂತೆ ಕಿಮ್ಸ್ ಅಧಿಕಾರಿಗಳು ಪೌರಾಯುಕ್ತರೊಂದಿಗೆ ಪತ್ರ ವ್ಯವಹಾರ ನಡೆಸುತ್ತಿದ್ದಾರೆ. ಆದರೂ ಯಾವುದೇ ಪ್ರಯೋಜವಾಗಿಲ್ಲ ಎನ್ನಲಾಗಿದೆ.

ಇತ್ತೀಚೆಗೆ ಕಿಮ್ಸ್ ಆಸ್ಪತ್ರೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಭೇಟಿ ನೀಡಿದ್ದರು. ಆಗಲೂ ಆಧಿಕಾರಿಗಳು ಸಂದರ್ಭದಲ್ಲಿ ಅಧಿಕಾರಿಗಳು ಎಚ್‌ಡಿಎಂಸಿ ಅಧಿಕಾರಿಗಳಿಗೆ ನಾಯಿಗಳ ಹಾವಳಿ ಸಮಸ್ಯೆ ಬಗ್ಗೆ ಮಾಹಿತಿ ನೀಡಿದ್ದರು. ಶೀಘ್ರದಲ್ಲೇ ನಾಯಿಗಳನ್ನು ಸ್ಥಳಾಂತರಿಸುವುದಾಗಿ ಪಾಲಿಕೆ ಅಧಿಕಾರಿಗಳು ಭರವಸೆ ನೀಡಿದರು. ಆದರೆ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಕೆಲವು ತಿಂಗಳುಗಳಿಂದ ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿದೆ. ಕಿಮ್ಸ್‌ ಆವರಣದಲ್ಲಿ 25ಕ್ಕೂ ಹೆಚ್ಚು ಬೀದಿ ನಾಯಿಗಳು ಬೀಡುಬಿಟ್ಟಿವೆ. ಆಸ್ಪತ್ರೆಗೆ ಬರುವವರಿಗೆ ಅಪಾಯ ತಂದೊಡ್ಡುತ್ತಿವೆ. ಮಾತ್ರವಲ್ಲ, ಕೆಲವೊಮ್ಮೆ ವಾರ್ಡ್‌ಗಳಿಗೂ ನುಗ್ಗುತ್ತವೆ ಎಂದು ತಿಳಿದುಬಂದಿದೆ.

ಆಸ್ಪತ್ರೆಗೆ ಬರುವ ಜನರು ಬೀದಿನಾಯಿಗಳ ದಾಳಿಯ ಭೀತಿಯಲ್ಲಿದ್ದಾರೆ. ವಾರ್ಡ್‌ಗಳಿಂದ ಹೊರ ಬರಲು ಹೆದರುತ್ತಿದ್ದಾರೆ. ನಾವು ನಾಯಿಗಳನ್ನು ಓಡಿಸುತ್ತೇವೆ. ಆದರೆ, ಅವು ಮತ್ತೆ ಬರುತ್ತವೆ ಎಂದು ಭದ್ರತಾ ಸಿಬ್ಬಂದಿ ಹೇಳಿದ್ದಾರೆ.

“ಆಸ್ಪತ್ರೆಯಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದೆ. ಸಮಸ್ಯೆಯನ್ನು ಪೌರಾಯುಕ್ತರ ಗಮನಕ್ಕೆ ತರಲಾಗಿದೆ. ನಾವು ಪತ್ರ ಬರೆದಾಗ ಅಥವಾ ಕಂಟ್ರೋಲ್ ರೂಂಗೆ ದೂರು ನೀಡಿದಾಗ ಅಧಿಕಾರಿಗಳು ಬೀದಿ ನಾಯಿಗಳನ್ನು ಓಡಿಸುತ್ತಾರೆ. ಆದರೆ, ಅವುಗಳನ್ನು ಶಾಶ್ವತವಾಗಿ ಸ್ಥಳಾಂತರಿಸಲು ನಾವು ಮನವಿ ಮಾಡಿದ್ದೇವೆ” ಎಂದು ಕಿಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ. ರಾಮಲಿಂಗಪ್ಪ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...