ಧಾರವಾಡ | ವಿಲೀನದ ಹೆಸರಿನಲ್ಲಿ ಸರ್ಕಾರಿ ಶಾಲೆ ಮುಚ್ಚುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ

Date:

ಕೆಪಿಎಸ್- ಮ್ಯಾಗ್ನೆಟ್ ಶಾಲೆಗಳಡಿ ಸುತ್ತಲಿನ ಶಾಲೆಗಳ ವಿಲೀನದೊಂದಿಗೆ 25,000ಕ್ಕೂ ಅಧಿಕ ಸರ್ಕಾರಿ ಶಾಲೆಗಳಿಗೆ ಕಂಟಕ ತಂದೊಡ್ಡಿರುವ ರಾಜ್ಯ ಸರ್ಕಾರದ ವಿರುದ್ಧ ಇಂದು ನ. 21ರಂದು AIDSO ವಿದ್ಯಾರ್ಥಿ ಸಂಘಟನೆಯಿಂದ ನಗರದ ವಿವೇಕಾನಂದ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಸಾವಿರಾರು ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ಶಶಿಕಲಾ ಮೇಟಿ ಮಾತನಾಡಿ, “ಸರ್ಕಾರದ ಆದೇಶದ ಪ್ರಕಾರ, 800 ಶಾಲೆಗಳನ್ನು ಮ್ಯಾಗ್ನೆಟ್ ಶಾಲೆಗಳು ಎಂದು ಗುರುತಿಸಲಾಗಿದೆ. ಅಂದರೆ ಕರ್ನಾಟಕ ಪಬ್ಲಿಕ್ ಶಾಲೆಯ ಸುತ್ತಮುತ್ತಲಿನ 1ರಿಂದ 5 ಕಿ.ಮೀ ವ್ಯಾಪ್ತಿಯ, 50ಕ್ಕಿಂತ ಕಡಿಮೆ ದಾಖಲಾತಿ ಹೊಂದಿರುವ ಶಾಲೆಗಳನ್ನು ತನ್ನಲ್ಲಿ ವಿಲೀನಗೊಳಿಸಿಕೊಳ್ಳಲಿದೆ. ಈ ಹೆಸರಿನಲ್ಲಿ ಆ ಶಾಲೆಗಳನ್ನು ಮುಚ್ಚಲಾಗುತ್ತದೆ. ಈಗ ಸ್ಥಾಪಿಸಲಾಗುತ್ತಿರುವ ಚನ್ನಪಟ್ಟಣ ತಾಲೂಕಿನ  ಹೊಂಗನೂರಿನ ಕೆಪಿಎಸ್ ಮಾಗ್ನೆಟ್ ಶಾಲೆಗೆ, ಹೊಂಗನೂರಿನ ಆರು ಕಿಮೀ ವ್ಯಾಪ್ತಿಯ 7 ಪ್ರಾಥಮಿಕ ಶಾಲೆಗಳನ್ನು ವಿದ್ಯಾರ್ಥಿ, ಉಪಾಧ್ಯಾಯರು ಮತ್ತು ಪರಿಕರಗಳ ಸಮೇತ ವಿಲೀನಗೊಳಿಸಲು ಸರ್ಕಾರವು ಆದೇಶ ಹೊರಡಿಸಿರುವುದು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದರಲ್ಲಿ 110ಕ್ಕೂ ಅಧಿಕ ಸಂಖ್ಯೆಯ ದಾಖಲಾತಿ ಹೊಂದಿರುವ ಶಾಲೆಗಳನ್ನು ಮುಚ್ಚಲು ಹೊರಟಿರುವುದು ಅತ್ಯಂತ ಖಂಡನೀಯ ಎಂದರು.

“KPS ಶಾಲೆಗಳನ್ನು ತೆರೆಯುವುದಕ್ಕೆ ನಮ್ಮ ವಿರೋಧವಿಲ್ಲ ಆದರೆ ಗ್ರಾಮ ಪಂಚಾಯಿತಿಗೆ ಮಾತ್ರ ಒಂದು ಶಾಲೆಗಳನ್ನು ತೆರೆಯುವುದನ್ನು ನಾವು ವಿರೋಧಿಸುತ್ತೇವೆ. ಯಾಕೆಂದರೆ, ಕರ್ನಾಟಕದಲ್ಲಿ ಒಟ್ಟು 49,600 ಸರ್ಕಾರಿ ಶಾಲೆಗಳಿದೆ. ಆದರೆ ಗ್ರಾಮ ಪಂಚಾಯಿತಿಗಳು ಇರುವುದು 5,900; ಹಿಗಾದಲ್ಲಿ ಕರ್ನಾಟಕದಲ್ಲಿ 5,900 ಶಾಲೆಗಳು ಮಾತ್ರ ಉಳಿಯುತ್ತದೆ. ಧಾರವಾಡದ ನವಲೂರಿನ ಪ್ರೌಢಶಾಲೆ, ತಡಕೋಡದ ಪ್ರೌಢಶಾಲೆ, ಯಾದವಾಡದ ಪ್ರೌಢಶಾಲೆ ಕಲಘಟಗಿ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗಂಭ್ಯಾಪುರ ಹಾಗೂ ಇನ್ನಿತರೆ ಶಾಲೆಗಳನ್ನು ಮ್ಯಾಗ್ನೆಟ್ ಶಾಲೆಯನ್ನಾಗಿ ಪರಿವರ್ತಿಸುವುದಾಗಿ ಹೇಳಿದ್ದಾರೆ. ಸರ್ಕಾರವು ಪ್ರತಿ ಹಳ್ಳಿಗೆ ಬಸ್ ಬಿಡುತ್ತೇವೆ ಎಂದು ಹೇಳುತ್ತಾರೆ. ಆದರೆ ಈಗಾಗಲೇ ಎಷ್ಟೋ ಹಳ್ಳಿಗಳಲ್ಲಿ ಬಸ್ ಇಲ್ಲದೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ವಾಸ್ತವತೆ ಹೀಗಿರುವಾಗ, 6-7 ಕಿಮೀ ದೂರದ ಶಾಲೆಯ ಬಡ ಮಕ್ಕಳು ಶಿಕ್ಷಣದಿಂದ ದೂರ ಉಳಿಯುತ್ತಾರಷ್ಟೇ! ಈ ಯೋಜನೆಗೆ ಏಷಿಯನ್ ಡೆವಲಪ್ಮೆಂಟ್ ಬ್ಯಾಂಕಿನಿಂದ ಈಗಾಗಲೇ 2500 ಕೋಟಿ ಸಾಲ ಪಡೆದಿರುವ ಸರ್ಕಾರವು ಕಾರ್ಪೊರೇಟ್ ಹಿತಾಸಕ್ತಿ ಕಾಪಾಡಲು ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ದೇಶದ ನವೋದಯ ಚಳುವಳಿ ಹರಿಕಾರರಾದ ಈಶ್ವರ ಚಂದ್ರ ವಿದ್ಯಾಸಾಗರ್, ಜ್ಯೋತಿರಾವ್ ಪುಲೆ ಸೇರಿದಂತೆ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿಗಳಾದ ನೇತಾಜಿ-ಭಗತ್ ಸಿಂಗ್ ಅವರ ಆಶಯಗಳಿಗೆ ವಿರುದ್ಧವಾಗಿ ಸರ್ಕಾರವು ತಳಮಟ್ಟದ ಶಾಲೆಗಳನ್ನು ಮುಚ್ಚುತ್ತಿದೆ. ಇದನ್ನು ವಿರೋಧಿಸಿ ರಾಜ್ಯದಲ್ಲಿ ಬಲಿಷ್ಠ ಹೋರಾಟ ಕಟ್ಟುವುದು  ವಿದ್ಯಾರ್ಥಿಗಳು, ಪಾಲಕರು ಹಾಗೂ ಶಿಕ್ಷಣ-ಪ್ರೇಮಿ ಜನತೆಯ ಜವಾಬ್ದಾರಿ. ಈ ನಿಟ್ಟಿನಲ್ಲಿ ಶಿಕ್ಷಣವನ್ನು ರಕ್ಷಿಸಲು ಮತ್ತೊಂದು ನವೋದಯ ಚಳುವಳಿ ಕಟ್ಟಬೇಕು” ಎಂದು ಕರೆ ನೀಡಿದರು.

ಇದನ್ನೂ ಓದಿ ಧಾರವಾಡ | 129 ಡ್ರಗ್ಸ್ ಬಳಕೆದಾರರ ವಿರುದ್ಧ 24 FIR ದಾಖಲು

ಸಂಘಟನೆಯ ಜಿಲ್ಲಾ ಅಧ್ಯಕ್ಷೆ ಸಿಂಧು ಕೌದಿ, ಉಪಾಧ್ಯಕ್ಷ ಚಂದ್ರು, ಜಿಲ್ಲಾ ಕಚೇರಿ ಕಾರ್ಯದರ್ಶಿ ಸ್ಫೂರ್ತಿ, ಕಾರ್ಯಕರ್ತ ಸಿದ್ದು, ರವಿ ಹಾಗೂ  ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...