ಧಾರವಾಡ | ಸ್ವಚ್ಛತಾ ಕಾರ್ಯಕ್ರಮದ ಮೂಲಕ ಗುರುವಿನ ಹುಟ್ಟುಹಬ್ಬ ಆಚರಿಸಿದ ವಿದ್ಯಾರ್ಥಿಗಳು

Date:

ಧಾರವಾಡದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಬಸವರಾಜ ತಲ್ಲೂರ ಅವರು ತಮ್ಮ ಹುಟ್ಟ ಹಬ್ಬವನ್ನು ಕೇಕ್ ಕತ್ತರಿಸದೆ, ಪರಿಸರ ನಾಶಕ್ಕೆ ಎಡೆಮಾಡಿಕೊಡದೆ, ಸ್ವಚ್ಛತೆಯ ಅರಿವು ಮೂಡಿಸುವ ಸಲುವಾಗಿ, ಪರಿಸರ ಖಾಳಜಿಯೊಂದಿಗೆ ವಿಭಿನ್ನವಾಗಿ ಆಚರಸಿಕೊಂಡಿದ್ದು, ಮಾದರಿ ಹುಟ್ಟುಹಬ್ಬವಾಗಿದೆ. ಆ ಹಿನ್ನೆಲೆಯಲ್ಲಿ ಅವರ ವಿದ್ಯಾರ್ಥಿಗಳು ನಗರವನ್ನು ಸ್ವಚ್ಛಗೊಳಿಸುವ ಮೂಲಕ ತಮ್ಮ ಗುರುಗಳಿಗೆ ಜನುಮದಿನದ ವಿಶಿಷ್ಠ ಉಡುಗೊರೆ ನೀಡಿದ್ದಾರೆ ಎಂದು ಡಾ. ವಿಲಾಸ ಕುಲಕರ್ಣಿ ಹೇಳಿದರು.

ಇಂದು ಬೆಳಿಗ್ಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಶ್ರೀನಗರದ ಉದ್ಯಾನವನ ಹಾಗೂ ನಗರದ ಕೆಲ ರಸ್ತೆಗಳಲ್ಲಿ ಸ್ವಶ್ಚತೆ ಮಾಡುವುದರ ಮೂಲಕ ಹುಟ್ಟು ಹಬ್ಬವನ್ನು ಅಚರಿಸಿದ್ದು, ಈ ರೀತಿಯ ವಿಶಿಷ್ಟ ಆಚರಣೆಯು ಸತತ 5 ವರ್ಷಗಳಿ‌ಂದ ನಡೆದುಕೊಂಡು ಬಂದಿದ್ದು, ಈ ತರಹದ ಜನುಮದಿನದ ಆಚರಣೆ ನಮಗೂ ರೂಢಿಯಾಗಿದೆ ಅನ್ನುತ್ತಾರೆ ವಿದ್ಯಾರ್ಥಿಗಳು.

ಡಾ. ವಿಲಾದ ಕುಲಕರ್ಣಿ ಮುಂದುವರೆದು ಮಾತನಾಡಿ, ಹುಟ್ಟು ಹಬ್ಬ ಅಂದಾಕ್ಷಣ ಕೆಲವರು ಕೇಕ್ ಕತ್ತರಿಸಿ, ಮೊಟ್ಟೆ ಹೊಡೆದು ಪರಿಸರ ನಾಶ ಮಾಡುವ ರೀತಿಯಲ್ಲಿ ತಮ್ಮ ಜನುಮದಿನ ಆಚರಸಿಕೊಳ್ಳುತ್ತಾರೆ. ಆದರೆ ಬಸವರಾಜ ತಲ್ಲೂರ ಅವರು ಸ್ವಚ್ಛತಾ ಕಾರ್ಯದ ಮೂಲಕ, ಪರಿಸರದ ಕುರಿತು ಅರಿವು ಮೂಡಿಸುವ ಕಾರ್ಯದಲ್ಲಿ ತೊಡಗಿರುವುದು ಬಹಳ ಖುಷಿತಂದಿದೆ. ಈ ರೀತಿಯ ಹುಟ್ಟು ಹಬ್ಬವು ಎಲ್ಲರಿಗೂ ಮಾದರಿ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ? ಧಾರವಾಡ | ದಾಸೋಹದ ಮೂಲಕ ಮುರುಘಾಮಠ ಪ್ರಸಿದ್ಧಿಯಾಗಿದೆ: ಅರವಿಂದ ಬೆಲ್ಲದ

ಎಸ್ ಅರ್ ತಲ್ಲೂರ್ ಪೌಂಡೇಶನ್ ಕಾರ್ಯದರ್ಶಿ ಡಾ.‌ಸುಮಾ ತಲ್ಲೂರ, ಪರಿಸರ ಪ್ರೇಮಿ ಪ್ರಭು ಕೊಂಗಿ, ಸದಸ್ಯ ಮಹೇಶ ತಲ್ಲೂರ, ಶ್ರೀನಗರದ ನಿವಾಸಿಗಳು ಹಾಗೂ ವಿದ್ಯಾರ್ಥಿಬಳಗ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...