ಧಾರವಾಡ | ವಿದ್ಯಾರ್ಥಿಯ ಜನಿವಾರ ತೆಗೆಸಿದ ಆರೋಪ; ಸೂಕ್ತ ಕ್ರಮಕ್ಕೆ ಒತ್ತಾಯ

Date:

ಧಾರವಾಡದ ಹುರಕಡ್ಲಿ ಅಜ್ಜ ಕಾಲೇಜಿನ ಪರೀಕ್ಷಾ ಕೇಂದ್ರದ‌‌ ದ್ವಾರದಲ್ಲಿ ಸಿಇಟಿ ಬರೆಯಲು ಬಂದಿದ್ದ ವಿದ್ಯಾರ್ಥಿಯ ಜನಿವಾರ ತೆಗೆಯಿಸಿ ಪರೀಕ್ಷಾ ಕೊಠಡಿಗೆ ಕಳುಹಿದ್ದಾರೆ ಎಂಬ ಆರೋಪದ ಮೇಲೆ ಸೂಕ್ತ ಕ್ರಮ ಜರುಗಿಸಲು ಒತ್ತಾಯಿಸಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹೋಗುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಗಳ ತಪಾಸಣೆ ಮಾಡುವಾಗ ಪೊಲೀಸ್ ಸಿಬ್ಬಂದಿಯೊಬ್ಬರು, ಜನಿವಾರ ಹಾಕಿಕೊಂಡು ಪರೀಕ್ಷಾ ಕೇಂದ್ರದೊಳಗೆ ಹೋಗುವಂತಿಲ್ಲ ಎಂದು ವಿದ್ಯಾರ್ಥಿ ನಂದನ್ ಏರಿ ಧರಿಸಿದ್ದ ಜನಿವಾರವನ್ನು ತೆಗೆಸಲಾಯಿತು ಎನ್ನಲಾಗುತ್ತಿದೆ.

ಈ ವೇಳೆ ನಂದನ್ ತಂದೆ ವಿವೇಕ ಮಾತನಾಡಿ, ಪರೀಕ್ಷೆಗೆ ಹೋದಾಗ ಪೊಲೀಸ್ ಸಿಬ್ಬಂದಿಯೊಬ್ಬರು ಆತನ ತಡೆದು ಜನಿವಾರ ತೆಗೆದರೆ ಮಾತ್ರ ಒಳಗೆ ಬಿಡುತ್ತೇನೆ ಎಂದಿದ್ದಾರೆ. ಇದು ಬ್ರಾಹ್ಮಣ ಸಮಾಜಕ್ಕೆ ಮಾಡಿದ ಅಪಮಾನ. ನಾವು ಜನಿವಾರ ತೆಗೆಯುವುದು ಸತ್ತಾಗ ಮಾತ್ರ, ಇನ್ಯಾವುದೇ ಸಮಯದಲ್ಲಿ ನಾವು ತೆಗೆಯಲ್ಲ. ಕೆಲವರು ರುದ್ರಾಕ್ಷಿ, ಶಿವದಾರ ಕೂಡಾ ತೆಗೆದಿದ್ದಾರೆ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಸಿಸಿ ಕ್ಯಾಮರಾ ಸಾಕ್ಷಿಗಳ ಪರಿಶೀಲನೆ ನಡೆಯುತ್ತಿದೆ. ಆ ವೇಳೆ ಏನು‌ ನಡೆಯಿತು ಎಂಬುದರ ಕುರಿತು ಸೂಕ್ತ ತನಿಖೆ ನಡೆಸುತ್ತೇವೆ ಎಂದು ಪೊಲೀಸರು ಮಾಹಿತಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...