ಧಾರವಾಡದ ಅಂಜುಮನ್ ಕಾಲೇಜಿನಲ್ಲಿ ಐಕ್ಯೂಎಸಿ ಅಡಿಯಲ್ಲಿ, ಎನ್ಎಸ್ಎಸ್ ಘಟಕ 1 ಮತ್ತು 2 ರ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಸಂದರ್ಭದಲ್ಲಿ ಯುವಶಕ್ತಿ ಸಬಲೀಕರಣ, ವ್ಯಕ್ತಿತ್ವ ನಿರ್ಮಾಣ ಮತ್ತು ರಾಷ್ಟ್ರಸೇವೆಯ ಕುರಿತು ವಿವೇಕಾನಂದರು ನೀಡಿದ ಸಂದೇಶಗಳನ್ನು ಸ್ಮರಿಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ, ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮೇಟಿ ರುದ್ರೇಶ್ ಮಾತನಾಡಿ, ಸ್ವಾಮಿ ವಿವೇಕಾನಂದರ ಜೀವನ, ತತ್ವಶಾಸ್ತ್ರ ಮತ್ತು ಅವರ ಕೊಡುಗೆಗಳ ಕುರಿತು ಪ್ರೇರಣಾದಾಯಕ ಉಪನ್ಯಾಸ ನೀಡಿದರು. ಪ್ರೊ. ಶ್ರುತಿ ಎಸ್. ಯವಗಲಮಠ ಅವರು, ಸ್ವಾಮಿ ವಿವೇಕಾನಂದರ ಜೀವನ ಮತ್ತು ಅವರ ಸಂದೇಶಗಳ ಕುರಿತು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಬಿ.ನಾಲತವಾಡ ಮಾತನಾಡಿ, ಇಂದಿನ ಸಮಾಜದಲ್ಲಿ ಸ್ವಾಮಿ ವಿವೇಕಾನಂದರ ಆದರ್ಶಗಳ ಪ್ರಸ್ತುತಟೆ ಆಗಿವೆ. ಶಿಸ್ತು, ಸೇವಾಭಾವ ಮತ್ತು ನೈತಿಕ ಮೌಲ್ಯಗಳ ಮೂಲಕ ವಿದ್ಯಾರ್ಥಿಗಳು ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಬೇಕು. ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಶೈಕ್ಷಣಿಕ ಹಾಗೂ ಸಾಮಾಜಿಕ ಜೀವನದಲ್ಲಿ ಅನುಸರಿಸುವ ನವ ಸಂಕಲ್ಪದೊಂದಿಗೆ ಕಾರ್ಯಕ್ರಮ ಅಚ್ಚುಕಟ್ಟಾಗಿ ನೆರವೇರಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಇದನ್ನೂ ಓದಿ ಧಾರವಾಡ | ಗಳಗನಾಥರು ಆಧುನಿಕ ಕನ್ನಡ ಸಾಹಿತ್ಯದ ಮೊದಲ ಕಾದಂಬರಿಕಾರ: ಸಿ. ಆರ್. ಜೋಶಿ
ಕಾರ್ಯಕ್ರಮದಲ್ಲಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಪ್ರೊ. ನಾಗರಾಜ್ ಕನಕಣಿ ನಿರೂಪಿಸಿದರು. ಪ್ರೊ. ನೂರ್‌ಜಹಾನ್ ಗಲಗಲಿ ವಂದಿಸಿದರು.





