ಧಾರವಾಡ | ವಿದ್ಯಾರ್ಥಿಗಳ ಬಸ್ ಸಮಸ್ಯೆ ನಿವಾರಣೆಗೆ ಕ್ರಮವಹಿಸಿ: ಅರವಿಂದ ಏಗನಗೌಡರ

Date:

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹೋಗಲು ಬಸ್‍ಗಳು ಸರಿಯಾದ ಸಮಯಕ್ಕೆ ಬಾರದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಬಹಳ ತೊಂದರೆಯನ್ನು ಅನುಭವಿಸುತ್ತಿದ್ದು, ಬಸ್ ತಡೆದು ಹೋರಾಟ ಮಾಡುತ್ತಿರುವದು ಗಮನಕ್ಕೆ ಬಂದಿದೆ ಆದ್ದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಧಾರವಾಡ ತಾಲೂಕು ಅಧ್ಯಕ್ಷ ಅರವಿಂದ ಏಗನಗೌಡರ ಹೇಳಿದರು.

ಧಾರವಾಡ ತಾಲೂಕು ಪಂಚಾಯತ್ ಸಭಾಭವನದಲ್ಲಿ ತಾಲೂಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸಭೆ ಜರುಗಿಸಿ, ಮಾತನಾಡಿ, ಗೃಹಲಕ್ಷ್ಮಿ ಫಲಾನುಭವಿಗಳು ನಿಧನರಾದ ನಂತರ ಗೃಹಲಕ್ಷ್ಮಿ ಹಣ ಜಮೆಯಾದರೆ ಅಂತವರನ್ನು ಗುರುತಿಸಿ, ಮರಳಿ ಸರಕಾರಕ್ಕೆ ಹಣವನ್ನು ನೀಡುವಂತೆ ಅವರಿಗೆ ತಿಳುವಳಿಕೆಯನ್ನು ನೀಡಬೇಕು. ಐಟಿ, ಜಿಎಸ್‍ಟಿ.ಯ ಹಿನ್ನೆಲೆಯಲ್ಲಿ ಬಿಪಿಎಲ್ ಕಾರ್ಡಗಳನ್ನು ಎಪಿಎಲ್ ಕಾರ್ಡಗಳಿಗೆ ಬದಲಾಯಿಸುತ್ತಿರುವ ಸಂದರ್ಭದಲ್ಲಿ ಅರ್ಹರಿಗೆ ತೊಂದರೆಯಾಗದಂತೆ ಕ್ರಮವಹಿಸಬೇಕು. ಪಡಿತರ ನ್ಯಾಯಬೆಲೆ ಅಂಗಡಿಗಳಲ್ಲಿ ಸರಿಯಾಗಿ ಪಡಿತರ ವಿತರಣೆ ಮಾಡುತ್ತಿಲ್ಲ, ಅಂಗನವಾಡಿ ಕೇಂದ್ರಗಳಲ್ಲಿ ಬಾಣಂತಿಯರಿಗೆ ಪೌಷ್ಟಿಕ ಆಹಾರಗಳನ್ನು ಸರಿಯಾಗಿ ವಿತರಿಸುತ್ತಿಲ್ಲ ಎಂದು ದೂರುಗಳು ಬರುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಕುರಿತು ಕ್ರಮ ವಹಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಸದಸ್ಯರುಗಳಾದ ಚಂದ್ರಶೇಖರ ಕದಂ, ಪರಮೇಶ್ವರ ಕರಿಕಟ್ಟಿ, ಮಂಜುನಾಥ ಉಡಿಕೇರಿ, ಮಿಲಿಂದ ಇಚಂಗಿ, ರಾಜೇಶ ಚವ್ಹಾಣ, ಸಿದ್ದಪ್ಪ ಅಗಸಿಮನಿ, ಕಲಾವತಿ ಭೀಮಕ್ಕನವರ, ರೇಣುಕಾ ಕಳ್ಳಿಮನಿ, ಮೈಲಾರಗೌಡ ಪಾಟೀಲ, ಕಾರ್ತಿಕ ಗೋಕಾಕ, ಪರಮೇಶ್ವರ ಕಾಳೆ, ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ ಕಂದಕೂರ ಹಾಗೂ ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...