ಧಾರವಾಡ | ಕನ್ನಡದಲ್ಲೇ ಮಾತನಾಡಿ, ಕನ್ನಡೇತರರಿಗೆ ಕನ್ನಡ ಕಲಿಸುತ್ತೇನೆ ಎಂದು ಪಣತೊಡೋಣ: ಸಂತೋಷ ಲಾಡ್

Date:

ಪ್ರಗತಿ ಮತ್ತು ನಾವೀನ್ಯತೆಗೆ ಬದ್ಧತೆಯನ್ನು ತೋರಿಸುವ ಸಂಕಲ್ಪವನ್ನು ಮಾಡುತ್ತಾ, ನಮ್ಮ ನಾಡು ನುಡಿಯ ಪ್ರೀತಿಯನ್ನು ಕೇವಲ ನವ್ಹೆಂಬರ್ ತಿಂಗಳಿಗೆ ಮಾತ್ರ ಸೀಮಿತವಾಗಿಸದೆ, ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ಕನ್ನಡದಲ್ಲೇ ಮಾತನಾಡುತ್ತೇನೆ, ಬರೆಯುತ್ತೇನೆ, ನಿತ್ಯ ವ್ಯವಹಾರವನ್ನು ಕನ್ನಡದಲ್ಲೇ ಮಾಡುತ್ತೇನೆ, ಕನ್ನಡೇತರರಿಗೆ ಕನ್ನಡ ಕಲಿಸುತ್ತೇನೆ ಎಂದು ನಾವೆಲ್ಲರೂ ಪಣತೊಡೋಣ ಎಂದು ಕಾರ್ಮಿಕ ಇಲಾಖೆ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್ ಹೇಳಿದರು.

ಧಾರವಾಡ ಜಿಲ್ಲಾಡಳಿತವು ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 70 ನೇ ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ರಾಷ್ಟ್ರ ಧ್ವಜಾರೋಹಣ ನೇರವೇರಿಸಿ, ಜಿಲ್ಲೆಯ ಸಾರ್ವಜನಿಕರನ್ನು ಉದ್ದೇಶಿಸಿ, ಮಾತನಾಡುತ್ತಾ, ನಮ್ಮ ಧ್ವಜ ಬಾವುಟದಲ್ಲಿನ ಕೆಂಪು ಮತ್ತು ಹಳದಿ ಬಣ್ಣವು ನಮ್ಮ ರಾಜ್ಯದ ಶಕ್ತಿ, ಶೌರ್ಯ ಮತ್ತು ಸಾಂಸ್ಕೃತಿಕ ಹೆಮ್ಮೆಯನ್ನು ತಿಳಿಸುತ್ತದೆ. ನಾಡಿನ ಭಾಷೆಯಾದ ಕನ್ನಡವು ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಬಿಂಬಿಸುತ್ತದೆ. ಕನ್ನಡ ಭಾಷೆಯು ಸುಮಾರು 2500 ವರ್ಷಗಳ ಹಳೆಯ ಭಾಷೆಯಾಗಿದ್ದು, ಹಲವಾರು ಉಪಭಾಷೆಗಳನ್ನು ಹೊಂದಿದೆ.

ಕರ್ನಾಟಕ ಏಕೀಕರಣ ಚಳವಳಿಯು ದೇಶದ ಸ್ವಾತಂತ್ರ್ಯ ಹೋರಾಟದಷ್ಟೇ ಪ್ರಮುಖ ಸ್ಥಾನವನ್ನು ಪಡೆದಿದೆ. 1956 ರಲ್ಲಿ ಕನ್ನಡ ಮಾತನಾಡುವ ವಿವಿಧ ಭಾಗಗಳು ಸೇರಿ ಮೈಸೂರು ರಾಜ್ಯವು ಉದಯವಾಯಿತು. ಕರ್ನಾಟಕ ಏಕೀಕರಣ ಚಳವಳಿಯನ್ನು ಹುಟ್ಟುಹಾಕಿದ್ದು ಧಾರವಾಡ ಜಿಲ್ಲೆ ಆಗಿದೆ. ಆಲೂರ ವೆಂಕಟರಾಯರು ಇದರ ಮೂಲ ಪುರುಷರು. ಏಕೀಕರಣ ಚಳವಳಿಯ ಪ್ರಮುಖರಾದ ರಾ.ಹ.ದೇಶಪಾಂಡೆರವರು, ಡೆಪ್ಯೂಟಿ ಚನ್ನಬಸಪ್ಪರವರು, ಅದರಗುಂಚಿ ಶಂಕರಗೌಡ ಪಾಟೀಲರು ಮತ್ತಿತರರನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳುವುದು ನಮ್ಮೆಲ್ಲರ ಆದ್ಯಾ ಕರ್ತವ್ಯವಾಗಿದೆ ತಿಳಿಸಿದರು.
ಬಹು ಭಾಷಾ ಕವಿಗಳಾದ ಬೇಂದ್ರೆಯವರನ್ನು ಕುರಿತು ಒಬ್ಬ ವ್ಯಕ್ತಿ ನಿಮ್ಮ ಕನ್ನಡ ಪದ್ಯ ಬಹಳ ಚೆನ್ನಾಗಿದೆ ಎಂದು ಹೇಳಿದಾಗ, ತಮ್ಮಾ, ಪದ್ಯ ಬರೆಯೋಕೆ ಕನ್ನಡವೇ ಬಹಳ ಚೆನ್ನಾಗಿದೆ ಎಂದು ಹೇಳಿದ್ದು, ಅವರಿಗಿದ್ದ ಕನ್ನಡ ಪ್ರೇಮ ಮತ್ತು ಭಾಷೆಯ ಅಭಿಮಾನಕ್ಕೆ ಒಂದು ಉದಾಹರಣೆಯಾಗಿದೆ ಎಂದು ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಚನ ಸಾಹಿತ್ಯ, ದಾಸ ಸಾಹಿತ್ಯ, ಸರ್ವಜ್ಞನ ತ್ರಿಪದಿ ಮತ್ತು ಮಂಕುತಿಮ್ಮನ ಕಗ್ಗ, ಕನ್ನಡಿಗರ ಜ್ಞಾನ, ಭಕ್ತಿ ಮತ್ತು ಕರ್ಮ ಸಿದ್ಧಾಂತಗಳನ್ನು ಡಿಂಡಿಮದಂತೆ ಸಾರಿ ಹೇಳುವುದಲ್ಲದೆ, ಇತರ ಭಾಷಿಗರನ್ನು ಅಪ್ಪಿಕೊಂಡಿದೆ.
ಕನ್ನಡಿಗರ ಶಾಂತಿಪ್ರಿಯತೆ, ಕನ್ನಡ ನಾಡು ನುಡಿ, ಸಂಸ್ಕೃತಿ ಮತ್ತು ಪರಂಪರೆಯ ಉಳಿವಿಗೆ ಕನ್ನಡದ ಸಾಹಿತ್ಯದ ಮೂಲ ಪುರುಷರೇ ಕಾರಣ ಹಾಗೂ ಅವರ ಕೃತಿಗಳು ಸಾರ್ವಕಾಲಿಕ. ಸದಾ ಕಾಲಕ್ಕೂ ಮಾನವ ಪೀಳಿಗೆಗೆ ದಾರಿದೀಪವಾಗಿದೆ. ಈ ದಿನ ಕನ್ನಡಾಂಬೆಗೆ ನುಡಿ-ನಮನ ಅರ್ಪಿಸಲಾಗುತ್ತಿದೆ ಎಂದು ಹೇಳಿದರು.

ಕನ್ನಡ ಭಾಷೆಯ ಬೆಳವಣಿಗೆಗೆ ಕೊಡುಗೆ ನೀಡಿದ ನಾಡಿನ ಹೆಸರಾಂತ ಕವಿ, ಸಾಹಿತಿ, ಸಂಗೀತಗಾರರುಗಳನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ. ಪಂಪ, ಪೊನ್ನ, ರನ್ನ, ಬಸವಣ್ಣ, ಅಕ್ಕಮಹಾದೇವಿ, ಅಲ್ಲಮಪ್ರಭು, ಹುಯಿಲಗೋಳ ನಾರಾಯಣರಾಯರು, ಕುವೆಂಪು, ದ.ರಾ.ಬೇಂದ್ರೆ, ಪಾಟೀಲ ಪುಟ್ಟಪ್ಪ, ಚನ್ನವೀರಕಣವಿ, ಎಂ.ಎಂ.ಕಲಬುರ್ಗಿ, ಮಲ್ಲಿಕಾರ್ಜುನ ಮನಸೂರ, ಗಂಗೂಬಾಯಿ ಹಾನಗಲ್, ಬಸವರಾಜರಾಜಗುರು ಇನ್ನೂ ಮುಂತಾದವರ ಕೊಡುಗೆ ಅಪಾರವಾಗಿದೆ ಎಂದು ಅಭಿಮಾನ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗಳವರ ನೇತೃತ್ವದ ರಾಜ್ಯ ಸರ್ಕಾರವು ನುಡಿದಂತೆ ನಡೆದಿದ್ದು, ಸರ್ವರಿಗೂ ಸಮಪಾಲು ಹಾಗೂ ಸಮಬಾಳು ಎಂಬ ಆಶಯದೊಂದಿಗೆ ಜನಕಲ್ಯಾಣ ಯೋಜನೆಗಳಾದ ಶಕ್ತಿ ಯೋಜನೆ, ಗೃಹಲಕ್ಷ್ಮಿಯೋಜನೆ, ಅನ್ನಭಾಗ್ಯಯೋಜನೆ, ಗೃಹಜ್ಯೋತಿ ಹಾಗೂ ಯುವನಿಧಿ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಅವರು ತಿಳಿಸಿದರು.
ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ 29.47 ಕೋಟಿ ಮಹಿಳೆಯರು ಉಪಯೋಗ ಪಡೆದಿದ್ದು, ರೂ.631.95 ಕೋಟಿಗಳನ್ನು ವೆಚ್ಚ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಜಿಲ್ಲೆಯಲ್ಲಿ 3,95,310 ಮಹಿಳೆಯರಿಗೆ ರೂ.1,584.90 ಕೋಟಿಗಳನ್ನು ಬಿಡುಗಡೆ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 5,70,003 ಕುಟುಂಬಗಳಿಗೆ ರೂ.517.53 ಕೋಟಿಗಳನ್ನು ವೆಚ್ಚ ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ 3,62,516 ಕುಟುಂಬಗಳಿಗೆ ರೂ.358.28 ಕೋಟಿಗಳನ್ನು ವಿತರಿಸಲಾಗಿದೆ. ಯುವನಿಧಿ ಯೋಜನೆಯಡಿ ಧಾರವಾಡ ಜಿಲ್ಲೆಯಲ್ಲಿ 7920 ಫಲಾನುಭವಿಗಳಿಗೆ ನೇರ ನಗದು (ಡಿಬಿಟಿ) ರೂ.19.95 ಕೋಟಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಧಾರವಾಡದ ʼಮನ್ಸೂರ ಕಲಾಭವನʼ; ಕಲೆಗಾಗಿ ಕಟ್ಟಿದ ಕಟ್ಟಡ ಈಗ ಕಸದ ಗೋದಾಮು!

ಈ ಸಂದರ್ಭದಲ್ಲಿ ವಿಧಾನ ಪರಿಷತ್ತ ಸದಸ್ಯ ಎಫ್.ಎಚ್.ಜಕ್ಕಪ್ಪನವರ, ಕರ್ನಾಟಕ ಬಾಲವಿಕಾಸ ಅಕಾಡಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ ಆರ್ಯ, ಅಪರ ಜಿಲ್ಲಾಕಾರಿ ಗೀತಾ ಸಿ.ಡಿ., ಉಪವಿಭಾಗಾಧಿಕಾರಿ ಶಾಲಂ ಹುಸೇನ್, ತಹಶಿಲ್ದಾರ ಡಾ.ಡಿ.ಎಚ್.ಹೂಗಾರ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಇಲಾಖೆಗಳ ಮುಖ್ಯಸ್ಥರು, ಅಧಿಕಾರಿಗಳು, ಸಿಬ್ಬಂದಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...