ಧಾರವಾಡ | ತಂಬೂರ-ಮುಕ್ಕಲ ಗ್ರಾಮ ಪಂಚಾಯತ ಪಿಡಿಓ ನಾಗರಾಜಕುಮಾರ ಅಮಾನತ್ತು

Date:

ಕರ್ತವ್ಯಲೋಪ ಹಾಗೂ ಹಣಕಾಸು ದುರಪಯೋಗ ಆರೋಪದ ಮೇಲೆ ಕಲಘಟಗಿ ತಾಲೂಕಿನ ತಂಬೂರು ಗ್ರಾಪಂ ಹಾಗೂ ಹೆಚ್ಚುವರಿ ಪ್ರಭಾರ ಮುಕ್ಕಲ ಗ್ರಾಪಂ ಪಂಚಾಯತ ಅಭಿವೃದ್ಧಿ ಅಧಿಕಾರಿ ನಾಗರಾಜಕುಮಾರ ಎಸ್. ಬಿದರಳ್ಳಿ ಅವರನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅಮಾನತ್ತುಗೊಳಿಸಿ, ಆದೇಶ ಹೊರಡಿಸಿದ್ದಾರೆ.

ಪಂಚಾಯತ ಅಭಿವೃದ್ಧಿ ಅಧಿಕಾರಿ ನಾಗರಾಜಕುಮಾರ ಬಿದರಳ್ಳಿ ತಂಬೂರ ಹಾಗೂ ಮುಕ್ಕಲ ಗ್ರಾಮ ಪಂಚಾಯತಗಳಲ್ಲಿ ಎಸ್ಕೋ ಬ್ಯಾಂಕ್ ಖಾತೆಯಿಂದ ಖಾಸಗಿ ವ್ಯಕ್ತಿಗಳಿಗೆ ಹಣ ಸಂದಾಯ ಮಾಡಿರುವುದು ಕಂಡುಬಂದಿದೆ. ತಂಬೂರ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ 2024-25 ನೇ ಸಾಲಿನಲ್ಲಿ ರೂ. 5,10,000 ಮತ್ತು 2025-26 ನೇ ಸಾಲಿನಲ್ಲಿ ರೂ. 2,28,000 ಹಾಗೂ ಹೆಚ್ಚುವರಿ ಪ್ರಭಾರ ವಹಿಸಿಕೊಂಡಿರುವ ಮುಕ್ಕಲ ಗ್ರಾಮ ಪಂಚಾಯತಿಯಲ್ಲಿ 2024-25 ನೇ ಸಾಲಿನಲ್ಲಿ ರೂ. 4,20,000 ಮತ್ತು 2025-26 ನೇ ಸಾಲಿನಲ್ಲಿ ರೂ. 1,30,000 ಮೊತ್ತವನ್ನು ಎಸ್ಕೋ ಬ್ಯಾಂಕ್ ಖಾತೆಯಿಂದ ಖಾಸಗಿ ವ್ಯಕ್ತಿಗಳಿಗೆ ಹಣ ಸಂದಾಯ ಮಾಡಿ, ಸರ್ಕಾರ ನಿಯಮಗಳನ್ನು ಮತ್ತು ಇಲಾಖಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿ, ಕರ್ತವ್ಯ ಲೋಪ ಮಾಡಿ ಹಣಕಾಸಿನ ದುರಪಯೋಗ ಪಡಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಗ್ರಾಮ ಪಂಚಾಯತಿಯ ಎಸ್ಕೋ ಖಾತೆಗಳಲ್ಲಿ ಉಳಿದಿರುವ ಅನುದಾನವನ್ನು ಕಡ್ಡಾಯವಾಗಿ ಹೆಸ್ಕಾಂ ಕಂಪನಿಗಳಿಗೆ ಪಾವತಿಸುವುದು ಹಾಗೂ ಶಾಸನಬದ್ಧ ಅನುದಾನದಡಿ ಗ್ರಾಮ ಪಂಚಾಯತಿಯ ಎಸ್ಕೋ ಖಾತೆಗಳಿಗೆ ಬಿಡುಗಡೆಯಾಗಿರುವ ಅನುದಾನವನ್ನು ಕಡ್ಡಾಯವಾಗಿ ಹಿಂದಿನ ವರ್ಷಗಳಿಗೆ ಬಾಕಿ ಇರುವ ವಿದ್ಯುಚ್ಛಕ್ತಿ ಬಿಲ್‍ನ್ನು ಪ್ರತಿ ಆರ್.ಆರ್. ಸಂಖ್ಯೆ ಅನುಸಾರ ಹೊಂದಾಣಿಕೆ ಮಾಡಿಕೊಳ್ಳದಿದ್ದರೂ ಸಹ ಮುಂಗಡವಾಗಿ ಹೆಸ್ಕಾಂ ಕಂಪನಿಗಳಿಗೆ ಪಾವತಿಸಲು ಸೂಚಿಸಲಾಗಿದ್ದರೂ ಸಹ ಸರ್ಕಾರದ ನಿಯಮಗಳನ್ನು ಪಾಲಿಸಿದೆ ಇಲಾಖಾ ಮಾರ್ಗಸೂಚಿ ಉಲ್ಲಂಘಿಸಿ, ಕರ್ತವ್ಯ ಲೋಪ ಮಾಡಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ನಾಗರೀಕ ಸೇವಾ ನಿಯಮಗಳು (ವರ್ಗಿಕರಣ ನಿಯಂತ್ರಣ ಮತ್ತು ಅಪೀಲು) 1957 ರ ನಿಯಮ 10 (1) ಡ ಪ್ರಕಾರ ಗ್ರಾಮಪಂಚಾಯತ ಪಿಡಿಓ ನಾಗರಾಜಕುಮಾರ ಎಸ್. ಬಿದರಳ್ಳಿ ಅವರನ್ನು ಇಲಾಖಾ ವಿಚಾರಣೆ ಕಾಯ್ದಿರಿಸಿ, ಅಮಾನತ್ತುಗೋಳಿಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...