ಧಾರವಾಡ | ತತ್ವಪದ ಮತ್ತು ಜನಪದ ಕಾಯಕ ಜೀವಿಗಳ ಕೊಡುಗೆ ಅಪಾರ: ತತ್ವಪದ ಹಾಡುಗಾರ ಮಂಜುನಾಥ ರಾಟಿಮನಿ

Date:

“ಕಲಿತವರ ಕಾಮಧೇನು ಕಲಿಯದವರ ಕಲ್ಪವೃಕ್ಷವಾಗಿರುವ ಹಲವಾರು ತತ್ವಪದ ಮತ್ತು ಜನಪದಗಳು ದಿನನಿತ್ಯ ಕಾಯಕದಲ್ಲಿ ತೊಡಗಿರುವ ದುಡಿಮೆಗಾರರ ಕೊಡುಗೆ ಅಪಾರ” ಎಂದು ನೂಲ್ವಿಯ ತತ್ವಪದ ಹಾಡುಗಾರರಾದ ಮಂಜುನಾಥ ಬಸಪ್ಪ ರಾಟಿಮನಿ ಇವರು ಹೇಳಿದರು.

ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಗುಡಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಆಯೋಜಿಸಿದ್ದ, ಜಾನಪದ ಹಬ್ಬದ ‘ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಮಾವು, ಬಂಡಿಗಾಲಿ, ರಾಶಿ, ತಳಿರು ತೋರಣಗಳಿಂದ ಶೃಂಗಾರಗೊಂಡ ಕಾಲೇಜಿನಲ್ಲಿ ಹಬ್ಬದ ವಾತಾವರಣವಿತ್ತು. ವಿದ್ಯಾರ್ಥಿ ವಿದ್ಯಾರ್ಥಿನಿಯರು ದೇಶಿ ಉಡುಗೆಯಲ್ಲಿ ಕಂಗೊಳಿಸಿದರು. ಡೊಳ್ಳು, ಕುಂಭ, ಚಕ್ಕಡಿ, ಹೋರಿಗಳ ಮೂಲಕ ದ್ಯಾಮವ್ವನ ಗುಡಿಯಿಂದ ಕಾಲೇಜಿನವರೆಗೂ ಮುಖ್ಯ ಬೀದಿಯಲ್ಲಿ ಮೆರವಣಿಗೆ ಸಾಗಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಾನಪದ ವಸ್ತುಗಳ ಪ್ರದರ್ಶನವನ್ನು ನಡೆಸಲಾಯಿತು. ಲಾವಣಿ ಹಾಡು, ಜನಪದ ನೃತ್ಯ ಮತ್ತು ಡೊಳ್ಳು ಕುಣಿತಗಳು ಎಲ್ಲರ ಮನಸೂರೆಗೊಂಡು ಸಹೃದಯದಲ್ಲಿ ಸಂಚಲನ ಸೃಷ್ಟಿಸಿದವು.

ಈ ಸುದ್ದಿ ಓದಿದ್ದೀರಾ? ಹಾವೇರಿ | ತಂದೆಯ ಸಾವಿನಲ್ಲೂ ಪರೀಕ್ಷೆ ಬರೆದ ಅಣ್ಣ-ತಂಗಿ

ಸಾಂಸ್ಕೃತಿಕ ಸಂಚಾಲಕರಾದ ಡಾ. ಭೀಮೇಶ ಯರಡೋಣಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪ್ರಾಚಾರ್ಯರು ಗಂಗಾಧರ ಗುಮ್ಮಗೋಳಮಠ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಚಾಲಕರು ಚೇತನ ಸಿ.ಎನ್, ಶ್ರೀಧರ ಮಾಯಣ್ಣವರ, ಡಾ. ಹನುಮಂತ ಕಲ್ಲೋಳಿಕರ, ವಾಯ್.ಎಚ್.ಬೀರಣ್ಣವರ, ಪಿ.ಜಿ. ಹರ್ಲಾಪುರ,  ಡಾ. ನಾಗರಾಜ ದಳಪತಿ, ಅಪೂರ್ವ ಕೆ.ಎಚ್, ಶ್ರೀನಿವಾಸ್ ಎನ್ಕೆ, ದೇವರಾಜು, ಎಂ.ಎಂ.ಹೂಗಾರ, ಶೇಖ್ ಮೆಹಬೂಬ್, ತಹಶೀಲ್ದಾರ್, ಕೊಟ್ರೇಶ್ ಪಟ್ಟಣಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಮಾಲತೇಶ ಪಾಟೀಲ ಮತ್ತು ಬಿ.ಸಿ ಅಮಾತಿಯವರು ನಡೆಸಿಕೊಟ್ಟರು. ವೀರೇಶ ಶಾಹಪುರಕರ ವಂದಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...