ಧಾರವಾಡ | ಆರ್ಥಿಕವಾಗಿ ಕಷ್ಟದಲ್ಲಿರುವ ವಿದ್ಯಾವರ್ಧಕ ಸಂಘಕ್ಕೆ ಸರಕಾರ ಸೌಲಭ್ಯ ಒದಗಿಸಲಿ: ದಾನಪ್ಪ ಕಬ್ಬೇರ

Date:

ಕರ್ನಾಟಕ ವಿದ್ಯಾವರ್ಧಕ ಸಂಘವು ಇಂದು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು, ಸರಕಾರ ಈ ಹಿಂದೆ ಕೊಡುತ್ತಿದ್ದಂತೆ ಎಲ್ಲಾ ಸೌಲಭ್ಯ ಒದಗಿಸಬೇಕು ಎಂದು ಮಾಜಿ ಮೇಯರ ದಾನಪ್ಪ ಕಬ್ಬೇರ ಸರ್ಕಾರಕ್ಕೆ ಒತ್ತಾಯಿಸಿದರು.

ನವೆಂಬರ್ 14 ರಂದು ಕರ್ನಾಟಕ ವಿದ್ಯಾವರ್ಧಕ ಸಂಘವು ಆಯೋಜಿಸಿದ್ದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡುತ್ತಾ, ರಾಜ್ಯೋತ್ಸವ ಎಂದರೆ ನಾಡು-ನುಡಿಗಾಗಿ ಹೋರಾಡಿದ ಪ್ರಾತಃಸ್ಮರಣೀಯರನ್ನು ಸ್ಮರಿಸುವ ಪರ್ವಕಾಲ. ಕ.ವಿ.ವ. ಸಂಘದ ಈಗಿನ ಪದಾಧಿಕಾರಿಗಳು ಯಾವುದೇ ಫಲಾಪೇಕ್ಷೆ ಇಲ್ಲದೆ ನಿಸ್ವಾರ್ಥ ಸೇವೆ ಮಾಡುತ್ತಿರುವುದು ಅಭಿನಂದನೀಯ. ಸಾರ್ವಜನಿಕರ ಸಹಭಾಗಿತ್ವದಲ್ಲಿ ನಾವೆಲ್ಲಾ ಕ.ವಿ.ವ. ಜೊತೆ ಸಹಕರಿಸಬೇಕು ಎಂದು ಹೇಳಿದರು.

ಸಾಧಕರ ಸನ್ಮಾನ ಸ್ವೀಕರಿಸಿದ ಸಂಜಯಕುಮಾರ್ ಬಿರಾದಾರ ಮಾತನಾಡಿ, ಸಾಂಸ್ಕೃತಿಕ ನಗರಿ ಧಾರವಾಡ ನನ್ನ ಸಾಮರ್ಥ್ಯ ಹಾಗೂ ವ್ಯಕ್ತಿತ್ವ ನಿರ್ಮಿಸುವಲ್ಲಿ ಪ್ರಮುಖವಾಗಿದೆ. ಧಾರವಾಡ ನನಗೆ ನಾಯಕತ್ವದ ಗುಣಗಳನ್ನು ಬೆಳೆಸಿದೆ. ಕನ್ನಡ ಮಾಧ್ಯಮದಲ್ಲೇ ಅಧ್ಯಯನ ಮಾಡಿದ ನಾನು ಇಂದು ರಾಷ್ಟ್ರಪತಿ ಭವನದ ಮೆಟ್ಟಿಲು ಏರಲು ಕಾರಣವಾದ ಕೆ.ಸಿ.ಡಿ ಹಾಗೂ ಕ.ವಿ.ವಿ.ಗೆ ನಾನು ಚಿರಕಾಲ ಋಣಿಯಾಗಿದ್ದೇನೆ. ನಾನು ಎನ್.ಎಸ್.ಎಸ್. ಸ್ವಯಂ ಸೇವಕನಾಗಿ ರಾಷ್ಟ್ರಪತಿಗಳಿಂದ ಗೌರವಿಸಲ್ಪಟ್ಟಿದ್ದು ನನ್ನ ಭಾಗ್ಯ. ದೇಶದ ಪ್ರಧಾನ ಮಂತ್ರಿಗಳಿಗೆ ಊಟ ಬಡಿಸುವ ಸುದೈವ ನನಗೆ ಸಿಕ್ಕಿದಂತೂ ಸಂಭ್ರಮದ ಕ್ಷಣವೇ ಸರಿ. ನಾನು ವಿನಮ್ರವಾಗಿ ಕ.ವಿ.ವ. ಸಂಘದ ಈ ಸನ್ಮಾನ ಸ್ವೀಕರಿಸಿದ್ದೇನೆ ಎಂದು ಹರ್ಷ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ ಧಾರವಾಡ | ಸರಕಾರಿ ಉರ್ದು ಶಾಲೆಗಳಲ್ಲಿ ಕನ್ನಡ ಶಿಕ್ಷಕರನ್ನು ಖಾಯಂಗೊಳಿಸಿ: ಶಂಕರ ಹಲಗತ್ತಿ

ಪ್ರಾರಂಭದಲ್ಲಿ ಕಲಬುರ್ಗಿಯ ಸಂಗಮೇಶ ಪಾಟೀಲ ಹಾಗೂ ಸಂಗಡಿಗರಿಂದ ಸಂಗೀತ ಕಾರ್ಯಕ್ರಮ ಜರುಗಿತು. ತಡಸಿನಕೊಪ್ಪದ ಗಂಗವ್ವ ಆಡಿನ ಹಾಗೂ ಸಂಗಡಿಗರಿಂದ ಸೋಬಾನ ಪದಗಳು ಪ್ರಸ್ತುತವಾದವು. ಡಾ. ಶೈಲಜಾ ಅಮರಶೆಟ್ಟಿ ಸ್ವಾಗತಿಸಿದರು. ಶಂಕರ ಹಲಗತ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಜಿನದತ್ತ ಹಡಗಲಿ ನಿರ್ವಹಿಸಿದರು. ಶಂಕರ ಕುಂಬಿ ವಂದಿಸಿದರು. ಶಿವಾನಂದ ಭಾವಿಕಟ್ಟಿ, ವೀರಣ್ಣ ಒಡ್ಡೀನ, ಡಾ. ಧನವಂತ ಹಾಜವಗೋಳ, ವೀರಯ್ಯ ಬಲಗೋಡಮಠ, ಶಂಕರ ಘಟ್ನಟ್ಟಿ, ಪ್ರೊ. ಬಿ.ಎಚ್. ಕೋಟಿಗೌಡ್ರ, ಕಿರಣ ಸಿದ್ಧಪೂರ ಸೇರಿದಂತೆ ಮುಂತಾದವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...