ಧಾರವಾಡ | ಬೆಳಗಾವಿ ಸುವರ್ಣಸೌಧದಲ್ಲಿ ಡಿ.16 ರಂದು ಅಕಾಡೆಮಿ ವಾರ್ಷಿಕ ಪ್ರಶಸ್ತಿಗಳ ಪ್ರಧಾನ ಸಮಾರಂಭ

Date:

ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಇದೇ ಪ್ರಥಮಬಾರಿಗೆ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗಳ ಪ್ರಧಾನ ಸಮಾರಂಭ ಹಮ್ಮಿಕೊಂಡಿದ್ದು, 2022-23 ಹಾಗೂ 2023-24 ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪುರಸ್ಕೃತರಿಗೆ ವಿತರಿಸಲಾಗುತ್ತಿದೆ. ಕರ್ನಾಟಕ ಬಾಲವಿಕಾಸ ಅಕಾಡೆಮಿಯು ರಾಜ್ಯದ ಸುಮಾರು 2 ಕೋಟಿ ಮಕ್ಕಳ ಶ್ರಯೋಭಿವೃದ್ಧಿಗಾಗಿ ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಶ್ರಮಿಸುತ್ತಿದೆ ಎಂದು ಅಕಾಡೆಮಿ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ ಹೇಳಿದರು.

ಜಿಲ್ಲಾ ಪಂಚಾಯತ ಕಾನ್ಫರೆನ್ಸ್ ಹಾಲ್ (ನೆಲ ಮಹಡಿ)ದಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮಿಯ 2022–23 ಮತ್ತು 2023–24 ಸಾಲಿನ ಗೌರವ ಪ್ರಶಸ್ತಿ, ಮಕ್ಕಳ ಚಂದಿರ ಪುಸ್ತಕ ಪ್ರಶಸ್ತಿ, ಬಾಲ ಗೌರವ ಪ್ರಶಸ್ತಿ ಹಾಗೂ ವಿಶೇಷ ಗೌರವ ಪ್ರಶಸ್ತಿ ವಿತರಣಾ ಸಮಾರಂಭದ ಕುರಿತು ಮತ್ತು ಅಕಾಡೆಮಿಯ ಯೋಜನೆಗಳ ಕುರಿತು ಪತ್ರಿಕಾಗೋಷ್ಠಿ ಜರುಗಿಸಿ, ಮಾತನಾಡಿದರು.

ಕಳೆದ ಎರಡು ವರ್ಷಗಳ (2022–23 ಮತ್ತು 2023–24) ಅಕಾಡೆಮಿ ಗೌರವ ಪ್ರಶಸ್ತಿ, ಮಕ್ಕಳ ಸಾಹಿತ್ಯಕ್ಕೆ ನೀಡುವ ಮಕ್ಕಳ ಚಂದಿರ ಪುಸ್ತಕ ಪ್ರಶಸ್ತಿ, ಎಲೆಮರೆ ಕಾಯಿಯಂತಿರುವ ಪ್ರತಿಭಾವಂತ ಮಕ್ಕಳಿಗೆ ನೀಡುವ ಬಾಲ ಗೌರವ ಪ್ರಶಸ್ತಿ ಹಾಗೂ ವಿಶೇಷ ಗೌರವ ಪ್ರಶಸ್ತಿಗಳನ್ನು ವಿತರಿಸುವ ಸಮಾರಂಭವನ್ನು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳಿಂದ ಆಯ್ಕೆ ಮಾಡಿರುವ ಪ್ರಶಸ್ತಿ ಪುರಸ್ಕೃತರು ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಈ ಪ್ರಶಸ್ತಿಗಳು ಮಕ್ಕಳ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹನೀಯರಿಗೆ ಮತ್ತು ಪ್ರತಿಭಾವಂತ ಮಕ್ಕಳಿಗೆ ಪ್ರೇರಣೆಯಾಗಲಿವೆ. ಮಕ್ಕಳಲ್ಲಿನ ಸೂಪ್ತ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಸೂಕ್ತ ವೇದಿಕೆ ಕಲ್ಪಿಸುವುದು ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ ನಮ್ಮ ಆದ್ಯತೆಯಾಗಿದೆ. ಮಕ್ಕಳನ್ನು ಗೌರವಿಸುವುದು ಮತ್ತು ಅವರನ್ನು ಪ್ರೋತ್ಸಾಹಿಸುವುದು ಅಕಾಡೆಮಿ ಅಧ್ಯಕ್ಷರಾಗಿ ನಮ್ಮ ಜವಾಬ್ದಾರಿ. ಈ ಪ್ರಶಸ್ತಿಗಳನ್ನು ಸಚಿವರ ಮೂಲಕವೇ ಕೊಡಿಸಬೇಕೆಂಬ ಮಹದಾಸೆಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಹಾಗೂ ನಾಡಿನ ಗಣ್ಯಮಾನ್ಯರ ಉಪಸ್ಥಿತಿಯಲ್ಲಿ ಮಕ್ಕಳಿಗೆ ಪ್ರಶಸ್ತಿ ನೀಡಿ, ಗೌರವ ಸಲ್ಲಿಸಲಾಗುವುದು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಳಗಾವಿ ಸುವರ್ಣಸೌಧದ ಉತ್ತರ ಭಾಗದಲ್ಲಿರುವ ಗಾಂಧಿ ಭವನದಲ್ಲಿ ಡಿಸೆಂಬರ್ 16, 2025 ರಂದು ಮಾಧ್ಯಹ್ನ 12 ಗಂಟೆಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದ ಮೂಲಕ ಮಕ್ಕಳಿಗೆ ಹೆಚ್ಚಿನ ಪ್ರೇರಣೆ ಸಿಗಲಿದ್ದು, ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಮಕ್ಕಳ ಕಲರವ ಕೇಳಿಬರಲಿದೆ. ಧಾರವಾಡದಲ್ಲಿರುವ ಅಕಾಡೆಮಿಯ ಕೇಂದ್ರ ಕಚೇರಿಯ ಕಟ್ಟಡದಲ್ಲಿ ಸುಮಾರು 20 ಲಕ್ಷ ರೂ.ಗಳ ವೆಚ್ಚದಲ್ಲಿ ಸುಸಜ್ಜಿತ ಸ್ಟುಡಿಯೋ ನಿರ್ಮಿಸಲಾಗಿದೆ. ಈಗ ನೂತನ ಸ್ಟುಡಿಯೋ ಉದ್ಘಾಟನೆಗೆ ಸಿದ್ಧಗೊಂಡಿದ್ದು, ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಕ್ಕಳ ಕಾರ್ಯಕ್ರಮಕ್ಕೆ ಬಂದಾಗ ಸೂಕ್ತವಾದ ಸಲಹೆ ನೀಡಿದ್ದಾರೆ. ಮಿಷನ್ ವಿದ್ಯಾಕಾಶಿ ಮೂಲಕ ಎಸ್‍ಎಸ್‍ಎಲ್‍ಸಿ ಮಕ್ಕಳ ಫಲಿತಾಂಶ ಸುಧಾರಣೆಗಾಗಿ ಬಾಲ ವಿಕಾಸ ಅಕಾಡೆಮಿಯ ಸ್ಟುಡಿಯೋವನ್ನು ಬಳಸಿಕೊಳ್ಳಬೇಕೆಂದು ಶೈಕ್ಷಣಿಕ ಉಪನಿರ್ದೇಶಕರಿಗೆ ನಿರ್ದೇಶನ ಕೊಡುತ್ತಿದ್ದೇವೆ ಎಂದರು.

ಈ ಸ್ಟುಡಿಯೋದಲ್ಲಿ ನಾಡಿನ ಸಂಪನ್ಮೂಲ ವ್ಯಕ್ತಿಯನ್ನು ಕರೆತಂದು ಮಕ್ಕಳಿಗೆ ಉಪಯುಕ್ತವಾಗುವ ವಿಷಯ ತಜ್ಞರ ಮೂಲಕ ವಿಷಯವನ್ನು ತಲುಪಿಸುವ ಮೂಲಕ ಎಸ್‍ಎಸ್‍ಎಲ್‍ಸಿ ಫಲಿತಾಂಶವನ್ನು ಹೆಚ್ಚಿಸುವ ಉದ್ದೇಶ ಹೊಂದಿದೆ. ಬಾಲ ವಿಕಾಸ ಅಕಾಡೆಮಿಯಲ್ಲಿರುವ ಅವಕಾಶ ವಂಚಿತ ಮಕ್ಕಳನ್ನು ಗುರುತಿಸಿ, ಅವರನ್ನು ನಿಸರ್ಗದ ಮಡಿಲಿಗೆ ಕರೆತರುವ ನಿಟ್ಟಿನಲ್ಲಿ ಬಾಲವಿಕಾಸ ಅಕಾಡೆಮಿ ಮಹತ್ವದ ಹೆಜ್ಜೆಯನ್ನಿಟ್ಟಿದೆ. 15 ದಿನಗಳವರೆಗೆ ಅವರ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ನಡೆಸುವ ಮೂಲಕ ರಾಜ್ಯದಲ್ಲಿನ 10 ಜನರ, ಮೂರು ತಂಡಗಳನ್ನಾಗಿಸಿ ಮಕ್ಕಳಿಗೆ ಹೊಸ ಆತ್ಮವಿಶ್ವಾಸ ತರುವ ವಿದೇಶದಿಂದ ಸಾಧನೆ ಮಾಡಲು ಪ್ರೇರೇಪಿಸುತ್ತದೆ. ಸಾಧಕರನ್ನು ಕರೆದು,  ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುವ ಪ್ರಯತ್ನ ಬಾಲವಿಕಾಸ ಅಕಾಡೆಮಿ ಮಾಡುತ್ತಿದೆ ಎಂದು ಹೇಳಿದರು.

ಅಕಾಡೆಮಿಯಿಂದ ದಾನಿಗಳ ನೆರವಿನಿಂದ ಎಸ್‍ಎಸ್‍ಎಲ್‍ಸಿ ಮಕ್ಕಳಿಗೆ ಅನುದಾನದ ಹಣವನ್ನು ಬಳಸಿಕೊಂಡು ಪುಸ್ತಕಗಳನ್ನು ಚಿಕ್ಕೋಡಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಈ ನಾಲ್ಕು ಶೈಕ್ಷಣಿಕ ಜಿಲ್ಲೆಯ ಪ್ರತಿ ಸರಕಾರಿ ಶಾಲೆಗಳಿಗೆ ಈ ಪುಸ್ತಕವನ್ನು ಜಿಲ್ಲಾಧಿಕಾರಿ, ಸಿಇಓ ಅವರ ಸಹಕಾರದಲ್ಲಿ ಮುಟ್ಟಿಸುವ ಕೆಲಸ ಮಾಡಿದೆ. ಇಂದಿನ ಬದಲಾದ ಜೀವನಶೈಲಿಯಲ್ಲಿ ಮಕ್ಕಳ ಮನಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಮತ್ತು ಅವರೊಂದಿಗೆ ಉತ್ತಮ ಬಾಂಧವ್ಯವನ್ನು ಬೆಳೆಸಿಕೊಳ್ಳಲು ಪಾಲಕರಿಗೆ ಮಾರ್ಗದರ್ಶನ ನೀಡುವ ಉದ್ದೇಶದಿಂದ, ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲಿ ಪಾಲಕರಿಗೆ ವಿಶೇಷ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ದತ್ತಿನಿಧಿ ಪಡೆಯುವ ಅವಕಾಶವಿದ್ದು, ಅದರಿಂದ 25 ಲಕ್ಷ ದತ್ತಿನಿಧಯ ಮೂಲಕ ರಾಷ್ಟ್ರೀಕೃತ ಬ್ಯಾಂಕ್‍ನಲ್ಲಿ ಇಟ್ಟು, ಅದರಿಂದ ಬರುವ ಬಡ್ಡಿಯ ಮೂಲಕ ಮಕ್ಕಳಿಗೆ ವಿಶೇಷ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ, ಆರ್ಥಿಕವಾಗಿ ಹಿಂದುಳಿದವರಿಗೆ, ಅವಕಾಶ ವಂಚಿತ ಮಕ್ಕಳಿಗೆ, ಫೀ ಕಟ್ಟಲು ಆಗದೆ ಇರುವವರಿಗೆ ಇದನ್ನು ಕೊಡಲು ಸಚಿವರೊಂದಿಗೆ ಚರ್ಚಿಸಿದ್ದು, ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗುತ್ತದೆ. ಧಾರವಾಡ ಬಾಲ ವಿಕಾಸ ಅಕಾಡೆಮಿ ವತಿಯಿಂದ ಕೊಡ ಮಾಡುವ ಅಕಾಡೆಮಿ ಗೌರವ ಪ್ರಶಸ್ತಿಗೆ ಆಯ್ಕೆಯಾದ ಸಾಹಿತಿ, ಲೇಖಕರು, ಸಂಘ-ಸಂಸ್ಥೆಗಳಿಗೆ 25 ಸಾವಿರ ನಗದು ಬಹುಮಾನ, ಮಕ್ಕಳ ಚಂದಿರ ಪ್ರಶಸ್ತಿಗೆ ಆಯ್ಕೆಯಾದ ಲೇಖಕರಿಗೆ 15 ಸಾವಿರ ನಗದು ಬಹುಮಾನ, ಹಾಗೂ ಅಕಾಡೆಮಿ ಬಾಲ ಗೌರವ ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ 10 ಸಾವಿರ ನಗದು ಬಹುಮಾನ, ವಿಶೇಷ ಗೌರವ ಪ್ರಶಸ್ತಿ ಪುರಸ್ಕೃತರಿಗೆ 10 ಸಾವಿರ ನಗದು ಬಹುಮಾನವನ್ನು ವಿತರಿಸಿ ಗೌರವಿಸಲಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ ನಿರುದ್ಯೋಗದ ಪ್ರಶ್ನೆಗೆ ನಿಗ್ರಹವೇ ಉತ್ತರವೇ?; ಉದ್ಯೋಗಾಕಾಂಕ್ಷಿಗಳಿಗೆ ಉತ್ತರಿಸುವವರಾರು?

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮಿ ಯೋಜನಾಧಿಕಾರಿ ಅಕ್ಕಮಹಾದೇವಿ ವಿಶೇಷ ಕರ್ತವ್ಯ ಅಧಿಕಾರಿ ಅನ್ನಪೂರ್ಣ ಸಂಗಳದ ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...