ಧಾರವಾಡ | ಜಾಗತೀಕರಣ ಪ್ರಭಾವದಿಂದ ರಂಗಕಲೆ ಕ್ಷಿಣವಾಗಿಗುತ್ತಿದೆ: ಶಿವಶಂಕರ ಹಂಪಣ್ಣವರ

Date:

ಜಾಗತೀಕರಣದ ಪ್ರಭಾವದಿಂದ ಇಂದು ರಂಗಕಲೆ ಕ್ಷಿಣವಾಗುತ್ತಿದೆ. ನಮ್ಮ ಸಂಸ್ಕೃತಿಯ ಅವಿಭಾಜ್ಯ ಅಂಗವಾದ ರಂಗಕಲೆಗೆ ಪ್ರೊತ್ಸಾಹ ಅಗತ್ಯವಾಗಿದೆ. ನಾಟಕಗಳಿಗೆ ಪ್ರೇಕ್ಷಕರೇ ಜೀವಾಳ ಎಂದು ಗಣ್ಯ ವ್ಯಾಪಾರಸ್ಥರಾದ ಶಿವಶಂಕರ ಹಂಪಣ್ಣವರ ಕರ್ನಾಟಕ ವಿದ್ಯಾವರ್ಧಕ ಸಂಘವು ರಾಜ್ಯೋತ್ಸವ ಅಂಗವಾಗಿ ಆಯೋಜಿಸಿದ್ದ ಹತ್ತು ದಿನಗಳ ನಾಟಕೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.

ಕನ್ನಡ ಉಳಿಸುವುದು ಬರೀ ಬಾಯಿ ಮಾತಿನಿಂದ ಹೇಳಿದರೆ ಸಾಲದು. ಅದು ನಮ್ಮ ಮನೆಯಿಂದಲೇ ಮೊದಲು ಪ್ರಾರಂಭವಾಗಬೇಕು. ನಮ್ಮ ಮಕ್ಕಳಿಗೆ ಬಾಲ್ಯದಿಂದಲೇ ಕನ್ನಡ ಭಾಷೆ ಬಳಕೆಯ ಬಗ್ಗೆ ಅರಿವು ಮೂಡಿಸಬೇಕು. ಎಲ್.ಕೆ.ಜಿ ಯಿಂದಲೇ ಮಕ್ಕಳಿಗೆ ಕನ್ನಡದಲ್ಲಿ ಶಿಕ್ಷಣ ಕೊಡಿಸಬೇಕು. ಇಂದು ಸರಕಾರಿ ಶಾಲೆಗಳು ನಿರಂತರವಾಗಿ ಮುಚ್ಚುವ ಸ್ಥಿತಿಯಲ್ಲಿದ್ದು ಅವುಗಳನ್ನು ಸಶಕ್ತಗೊಳಿಸಲು ಕ.ವಿ.ವ ಸಂಘ ಪ್ರಯತ್ನಿಸಬೇಕು ಎಂದು ಹೇಳಿದರು.

ರಂಗಕಲಾವಿದ ಡಾ. ಹಜರೇಸಾಬ ನದಾಪ ಸನ್ಮಾನ ಸ್ವೀಕರಿಸಿ ಮಾತನಾಡಿ, ನನಗೆ ಬಾಲ್ಯದಿಂದಲೇ ನನ್ನ ತಂದೆ ನಾಟಕಗಳ ಬಗ್ಗೆ ಆಸಕ್ತಿ ಮೂಡುವಂತೆ ಮಾಡಿದರು. ಜೀವಿ ಕಲಾಬಲಗ ಹಾಗೂ ಜಾನಪದ ಕಲಾ ಬಳಗ ಎರಡು ಕಲಾ ಸಂಸ್ಥೆಗಳು ನನ್ನ ಕಲಾ ಪ್ರದರ್ಶನಕ್ಕೆ ಪ್ರೋತ್ಸಾಹ ನೀಡಿದ್ದರಿಂದ ನಾನು ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯವಾಯಿತು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಂಗಕಲಾವಿದೆ ದೇವಿಕಾರಾಣಿ ಜಗದೀಶ ಮಾತನಾಡಿ, ನನ್ನಂತಹ ಇತರ ಕಲಾವಿದರಿಗೂ ಕ.ವಿ.ವ ಸಂಘ ಗುರುತಿಸಿ ಸನ್ಮಾನಿಸಬೇಕೆಂದು ಹೇಳಿದರು. ಶಂಕರ ಕುಂಬಿ ಸ್ವಾಗತಿಸಿದರು. ಶಂಕರ ಹಲಗತ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿವಾನಂದ ಭಾವಿಕಟ್ಟಿ ನಿರೂಪಿಸಿದರು. ಗುರು ಹಿರೇಮಠ ವಂದಿಸಿದರು. ವೀರಣ್ಣ ಒಡ್ಡೀನ, ಕೆ. ಎಚ್. ನಾಯಕ, ಕಿರಣ ಸಿದ್ದಾಪೂರ, ಶಂಕರ ಗಟ್ನಟ್ಟಿ, ಬಸವರಾಜ ಮುರಗೋಡ, ಎನ್. ಆರ್. ಬಾಲಿಕಾಯಿ, ನಿಂಗಯ್ಯ ರಾಚಯ್ಯನವರ, ಈರಣ್ಣ ನವಲಗುಂದ, ಎಂ. ಸಿ. ಯಲಿಗಾರ, ಸಿ. ಎಸ್. ಪಾಟೀಲಕುಲಕರ್ಣಿ, ಎಲ್. ಆರ್. ಬೂದಿಹಾಳ, ಶ್ರೀಧರ ಗಸ್ತಿ, ರಾಮಚಂದ್ರ ಗೆದ್ದೆಣ್ಣವರ ಇದ್ದರು.

ಇದನ್ನೂ ಓದಿ ಧಾರವಾಡ | ನಾಟಕಗಳಿಗೆ ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಶಕ್ತಿ ಇದೆ: ಡಾ. ನಿತಿನಚಂದ್ರ ಹತ್ತಿಕಾಳ

ಕೊನೆಗೆ ಶಿವಮೊಗ್ಗದ ಕಲಾರೋಹಣ ಪ್ರಸ್ತುತಿಯ ಡಾ. ಗಜಾನನ ಶರ್ಮಾ ರಚನೆಯ ಬಿ. ಆರ್. ರೇಣುಕಪ್ಪ ನಿರ್ದೇಶನದ “ನನನ……. ನಮ್ ರಸ್ತೆ” ಹಾಸ್ಯ ಪ್ರಧಾನ ನಾಟಕ ಪ್ರದರ್ಶನಗೊಂಡಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...