ಧಾರವಾಡ | ಸಾಂಪ್ರದಾಯಿಕ ಬೋಧನಾ ಪದ್ಧತಿ ಪರಿಣಾಮಕಾರಿಯಲ್ಲ: ಡಾ. ಎಸ್.ಎಮ್.ಶಿವಪ್ರಸಾದ್

Date:

ಸಾಂಪ್ರದಾಯಿಕ ಬೋಧನಾ ಪದ್ಧತಿ ಬಿಟ್ಟು ತಂತ್ರಜ್ಞಾನ ಆಧಾರಿತ ಬೋಧನಾ ಪದ್ಧತಿಯನ್ನು ರೂಢಿಸಿಕೊಂಡಾಗ ಮಾತ್ರ ಕಲಿಕೆ ಪರಿಣಾಮಕಾರಿಯಾಗುತ್ತದೆ ಎಂದು ಧಾರವಾಡದ ಐ.ಐ.ಟಿ ಡೀನ್ ಡಾ. ಎಸ್.ಎಮ್.ಶಿವಪ್ರಸಾದ್ ಹೇಳಿದರು.

ನಗರದ ಅಂಜುಮನ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಹಮ್ಮಿಕೊಂಡ “ಎಂಪ್ಲಾಯ್‌ಮೆಂಟ್ ಎಂಪ್ಲಾಯಿಲಿಟಿ ಆ್ಯಂಡ್ ಹೈಯರ್ ಎಜುಕೇಶನ್ ಇನ್ ಇಂಡಿಯಾ: ದಿ ಮಿಸ್ಸಿಂಗ್ ಲಿಂಕ್” ಎಂಬ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡುತ್ತಾ ಪ್ರಸ್ತುತ 1,043 ವಿಶ್ವವಿದ್ಯಾಲಯಗಳು, 42,343 ಕಾಲೇಜುಗಳು, 11,779 ಸ್ವತಂತ್ರ ಸಂಸ್ಥೆಗಳು, 37.4 ಮಿಲಿಯನ್ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವು ಸೇವೆ ಸಲ್ಲಿಸುತ್ತಾ ಬೃಹತ್ ಪ್ರಮಾಣದ ಬದಲಾವಣೆಯನ್ನು ತಂದಿದೆ ಎಂದರು.

ಪಠ್ಯಕ್ರಮ ರಚನೆಯಲ್ಲಿ ಬದಲಾವಣೆ ಬರಬೇಕಿದೆ. ಇದಲ್ಲದೇ, ಶಿಕ್ಷಕರು ಕಾಲಕಾಲಕ್ಕೆ ತಕ್ಕಂತೆ ಬದಲಾವಣೆ ಹೊಂದಬೇಕು ಅಂದಾಗ ಮಾತ್ರವೇ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತವು ಮಾನವ ಸಂಪನ್ಮೂಲ ನಿರ್ಮಿಸಲು ಸಾಧ್ಯವಾಗುತ್ತದೆ. ಭವಿಷ್ಯದ ಉದ್ಯೋಗಗಳ ಬೇಡಿಕೆಗಳಿಗೆ ವಿದ್ಯಾರ್ಥಿಗಳನ್ನು ಸಿದ್ಧಪಡಿಸುವಲ್ಲಿ ಕೌಶಲ್ಯ ಆಧಾರಿತ ಬೋಧನೆಯನ್ನು ಮಾಡಬೇಕು. ಪ್ರಸ್ತುತ ವಿಜ್ಞಾನ, ವೈದ್ಯಕೀಯ, ಇಂಜಿನಿಯರಿಂಗ್ ಹಾಗೂ ಕೃಷಿ ಹೀಗೆ ಸರ್ವ ರಂಗವು ತಂತ್ರಜ್ಞಾನವನ್ನು ಅಳವಡಿಸಿಕೊಂಡಿದೆ. ಹೀಗಾಗಿ ಶಿಕ್ಷಣದಲ್ಲಿಯೂ ಕೂಡ ತಂತ್ರಜ್ಞಾನವನ್ನು ಅಳವಡಿಸಿಕೊಂಡರೆ ವಿದ್ಯಾರ್ಥಿಗಳ ಭವಿಷ್ಯ ಕೂಡ ಉಜ್ವಲಗೊಳ್ಳಲಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತದ ಉನ್ನತ ಶಿಕ್ಷಣವು ಗುರುಕುಲದಿಂದ ಆರಂಭವಾಗಿ ಆಧುನಿಕ ವಿಶ್ವವಿದ್ಯಾಲಯಗಳವರೆಗೆ ಪರಿಣಾಮಕಾರಿಯಾಗಿ ಬೆಳೆದುಕೊಂಡು ಬಂದಿದೆ ಎಂದು ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಶಿಕ್ಷಣ ನಿರ್ದೇಶಕ ಡಾ. ವಿ.ಆರ್. ಕಿರೇಸೂರ ಅಭಿಪ್ರಾಯಪಟ್ಟರು.

ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ದೇಶದ ವಿವಿಧ ಭಾಗಗಳಿಂದ 120ಕ್ಕೂ ಅಧಿಕ ಪ್ರತಿನಿಧಿಗಳು ಪಾಲ್ಗೊಂಡಿದ್ದು, ಸುಮಾರು 82 ಸಂಶೋಧನಾ ಲೇಖನಗಳನ್ನು ಮಂಡಿಸಿದರು.

ಈ ವಿಚಾರ ಸಂಕಿರಣದಲ್ಲಿ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ, ಉಪಾಧ್ಯಕ್ಷ ಬಶೀರ್ ಅಹ್ಮದ್ ಜಹಗೀರದಾರ್, ಪ್ರಾಚಾರ್ಯ ಡಾ. ಎನ್.ಎಮ್. ಮಕಾಂದಾರ, ಡಾ. ಎ.ಎಸ್. ಬಳ್ಳಾರಿ. ಡಾ. ಆಯ್.ಎ.ಮುಲ್ಲಾ, ಡಾ.ಎನ್.ಬಿ. ನಾಲತವಾಡ, ಡಾ. ಮೇಟಿ ರುದ್ರೇಶ ಮತ್ತು ನಾಡಿನ ಅನೇಕ ವಿದ್ವಾಂಸರು, ಸಂಶೋಧಕರು, ಕಾಲೇಜಿನ ಪ್ರಾಧ್ಯಾಪಕ ವೃಂದ. ಶಿಕ್ಷಕೇತರ ವೃಂದ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...