ಧಾರವಾಡ | ಸ್ಮಾರ್ಟ್ ಸಿಟಿ ಅನುದಾನವಿದ್ದರೂ ಅವಳಿ ನಗರಕ್ಕಿಲ್ಲ ಸ್ಮಾರ್ಟ್ ಭಾಗ್ಯ: ರಾಜು‌ ನಾಯಕವಾಡಿ ಆಕ್ರೋಶ

Date:

ಹುಬ್ಬಳ್ಳಿ ಧಾರವಾಡ ಮಹಾನಗರಕ್ಕೆ ಕೋಟ್ಯಂತರ ರೂಪಾಯಿ ಅನುದಾನ ಬಂದರೂ ಕೂಡಾ ಅವಳಿನಗರ ಮಾತ್ರ ಸ್ಮಾರ್ಟ್ ಆಗುತ್ತಿಲ್ಲ. ಸ್ಮಾರ್ಟ್ ಸಿಟಿ ಹಣೆಪಟ್ಟಿ ಹೊತ್ತಿರುವ ಅವಳಿ ನಗರ ತಗ್ಗು-ಗುಂಡಿಗಳ ಆಗರವಾಗುತ್ತಿರುವದು ವಿಪರ್ಯಾಸವಾಗಿದೆ ಎಂದು ಸಮಾಜ ಸೇವಕ ರಾಜು‌ ನಾಯಕವಾಡಿ ಆಕ್ರೋಶ ವ್ಯಕ್ತಪಡಿಸಿದರು.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, “ಪಾಲಿಕೆ ಮೇಯರ್ ರಾಮಣ್ಣ ಬಡಿಗೇರ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಅನುದಾನ ಬಿಡುಗಡೆಗೆ ಕೋರಿ ಪತ್ರ ಬರೆದಿದ್ದಾರೆ. ಈ ಹಣವಾದರೂ ಅಭಿವೃದ್ಧಿಗೆ ಪೂರಕವಾಗಿ ಖರ್ಚುವಾಗುವುದೋ ಎಂಬ ಅನುಮಾನ ವ್ಯಕ್ತವಾಗುತ್ತಿದೆ” ಎಂದರು.

ಸ್ಮಾರ್ಟ್‌ ಸಿಟಿ ಹುಬ್ಬಳ್ಳಿ

“ಜನಸಾಮಾನ್ಯರ ತೆರಿಗೆ ಹಣ ಪೋಲಾಗುವುದನ್ನು ನಾವೆಲ್ಲರೂ ಖಂಡಿಸಬೇಕಿದೆ. ಏಕೆಂದರೆ ಈಗಾಗಲೇ ಹುಬ್ಬಳ್ಳಿ ಧಾರವಾಡ ಮಹಾನಗರಕ್ಕೆ ಸ್ಮಾರ್ಟ್ ಸಿಟಿ ಸೇರಿದಂತೆ ಇತರ ಯೋಜನೆಗಳಿಂದ ನೂರಾರು ಕೋಟಿ ಹಣ ಬಂದಿದೆ. ಇದನ್ನು ಸ್ವತಃ ಜನಪ್ರತಿನಿಧಿಗಳೇ ಹೇಳಿಕೊಳ್ಳುತ್ತಾರೆ. ಹೀಗಿರುವಾಗ ನಗರ ಮಾತ್ರ ಯಾಕೆ ನಿರೀಕ್ಷೆಯ ಮಟ್ಟದಲ್ಲಿಯಾದರೂ ಅಭಿವೃದ್ಧಿಯಾಗುತ್ತಿಲ್ಲ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಅಕ್ರಮ ಗಣಿಗಾರಿಕೆ, ಜಿಂದಾಲ್‌ಗೆ ಭೂ ಮಂಜೂರು ವಿರೋಧಿಸಿ ಸೆ.4 ರಂದು ಸಮಾವೇಶ

“ಇದೀಗ ಮಹಾಪೌರರು ಅನುದಾನ ಬಿಡುಗಡೆಗೆ ಮನವಿ ಮಾಡಿರುವುದು ಸ್ವಾಗತಾರ್ಹ‌. ಹೀಗಾಗಿ ಈಗಲಾದರೂ ಮೇಯರ್, ಉಪಮೇಯರ್, ಸರ್ವಸದಸ್ಯರು ಮತ್ತು ಅಧಿಕಾರಿಗಳು ಜನರ ತೆರಿಗೆ ಹಣವನ್ನು ಪೋಲು ಮಾಡದೇ, ಸರಿಯಾದ ರೀತಿಯಲ್ಲಿ ಯೋಜನೆ ರೂಪಿಸಿ ನಗರವನ್ನು ಅಭಿವೃದ್ಧಿಗೊಳಿಸಬೇಕು” ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...