ಬೈಕ್ ನಿಯಂತ್ರಣ ತಪ್ಪಿದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಬ್ಬಳ್ಳಿ ಧಾರವಾಡ ಮಾರ್ಗ ಮಧ್ಯದಲ್ಲಿರುವ ರಾಯಾಪುರದ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಸಮೀಪ ಜ. 4ರ ತಡರಾತ್ರಿ ನಡೆದಿದೆ.
ಬೈಕ್ ಚಲಿಸುವಾಗ ನಿಯಂತ್ರಣ ತಪ್ಪಿ ರಸ್ತೆಬದಿಗೆ ಉರುಳಿದೆ. ಸವಾರರಿಬ್ಬರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಜಯಪುರದ ಪ್ರಜ್ವಲ್ (26) ಹಾಗೂ ಹುಬ್ಬಳ್ಳಿಯ ಶಂಕರ (26) ಮೃತ ಯುವಕರೆಂದು ಗುರುತಿಸಲಾಗಿದೆ.
ಪರಿಶೀಲನೆ ವೇಳೆ ಮೃತರ ಬಳಿ ಮದ್ಯದ ಬಾಟಲಿ ಹಾಗೂ ಗಾಂಜಾ ಪತ್ತೆಯಾಗಿದೆ ಎನ್ನಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಧಾರವಾಡ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಇದನ್ನೂ ಓದಿ ಧಾರವಾಡ | ಮರ್ಯಾದೆಗೇಡು ಹತ್ಯೆ ಪ್ರಕರಣ; ಲಿಂಗಾಯತ ಮಹಾಸಭಾ ಖಂಡನೆ
ಪ್ರಕರಣ ದಾಖಲಿಸಿಕೊಂಡಿರುವ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಅಪಘಾತದ ನಿಖರ ಕಾರಣ ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ.





