ಧಾರವಾಡ | ದೇಶದೆಲ್ಲೆಡೆ ಆವರಿಸಿರುವ ಅಘೋಷಿತ ತುರ್ತು ಪರಿಸ್ಥಿತಿ ಹೋಗಲಾಡಿಸಬೇಕಿದೆ: ಶಬನಂ ಹಾಶ್ಮಿ

Date:

ರಾಷ್ಟ್ರೀಯ ಸ್ವಯಂಸೇವಕ ಸಂಘವು (ಆರ್‌ಎಸ್‌ಎಸ್‌) ಸರ್ವಾಧಿಕಾರಿ ಹಿಟ್ಲರ್‌ ನೀತಿ ಅನುಸರಿಸುತ್ತಿದ್ದು, ಇದರಿಂದ ದೇಶವನ್ನು ರಕ್ಷಿಸಬೇಕಿದೆ. ಎಲ್ಲೆಡೆ ಆವರಿಸಿರುವ ಅಘೋಷಿತ ತುರ್ತು ಪರಿಸ್ಥಿತಿ ಹೋಗಲಾಡಿಸಬೇಕಿದೆ ಎಂದು ಮಾನವ ಹಕ್ಕುಗಳ ಹೋರಾಟಗಾರ್ತಿ ಶಬನಂ ಹಾಶ್ಮಿ ಹೇಳಿದರು.

ಸಂವಿಧಾನ ಸುರಕ್ಷಾ ಸಮಿತಿಯಿಂದ ಶುಕ್ರವಾರ ನಡೆದ ‘ಭಾರತದ ಪ್ರಸ್ತುತ ಪರಿಸ್ಥಿತಿ’ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಗಣರಾಜ್ಯೋತ್ಸವದ ಸಂದರ್ಭದಲ್ಲಿ ಎಲ್ಲೆಡೆ ತಿರಂಗ ಧ್ವಜ ಕಾಣುತ್ತಿದ್ದೆವು. ಆದರೆ, ಕೆಲ ದಿನಗಳಿಂದ ದೇಶದಲ್ಲೆಡೆ ತಿರಂಗದ ಬದಲು ಬೇರೆಯದ್ದೇ ಧ್ವಜವನ್ನು ಹೆಚ್ಚು ಕಾಣುತ್ತಿದ್ದೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶದಲ್ಲಿ ಕೆಲವರ ಧ್ವನಿ ಮಾತ್ರ ಕೇಳುತ್ತಿದೆ. ಅಪಾಯಕಾರಿ ಬೆಳವಣಿಗೆಗಳ ವಿರುದ್ಧ ಮಾತನಾಡಿದರೆ, ಇ ಡಿ, ಐ ಟಿ ದಾಳಿ ನಡೆಸಲಾಗುತ್ತಿದೆ. ನಾವೇನು ಧರಿಸಬೇಕು, ಯಾವ ಆಹಾರ ಸೇವಿಸಬೇಕು, ಯಾರೊಂದಿಗೆ ಮದುವೆ ಆಗಬೇಕು, ಯಾರನ್ನು ಪ್ರೀತಿಸಬೇಕು ಎಂಬುದನ್ನು ಯಾರೋ ನಿರ್ಧರಿಸುತ್ತಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಗುಜರಾತ್‌ನಲ್ಲಿ ಮೂಡಿಸಲಾದ ಭಯದ ವಾತಾವರಣವನ್ನು ದೇಶದಾದ್ಯಂತ ವಿಸ್ತರಿಸಲು ಯೋಜನೆ ರೂಪಿಸಲಾಗುತ್ತಿದೆ. ಈಗಲೂ ಅಲ್ಲಿ ಭಯದ ವಾತಾವರಣವಿದೆ” ಎಂದು ಕಳವಳ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಶೋಷಿತರ ಜಾಗೃತಿ ಸಮಾವೇಶ; ನಗರದಲ್ಲಿ ವಾಹನಗಳ ಮಾರ್ಗ ಬದಲಾವಣೆ

“ಫೆಬ್ರುವರಿ 21ರಂದು ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರಿನ ಕೋಟೆ ಬಳಿ ರಾಷ್ಟ್ರಮಟ್ಟದ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ಚನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಕೋಟೆವರೆಗೆ ಮೆರವಣಿಗೆ ನಡೆಸಲಾಗುವುದು. ರಾಣಿ ಚನ್ನಮ್ಮ ಅಭಿಯಾನದ ಮೂಲಕ ಮಹಿಳಾ ಸಂಘಟನೆಗಳನ್ನು ಒಗ್ಗೂಡಿಸಲಾಗುವುದು” ಎಂದು ಹೇಳಿದರು.

ಈ ವೇಳೆ ಸಮಿತಿಯ ಸಂಚಾಲಕ ಮಹೇಶ ಪತ್ತಾರ, ಅಶ್ರಫ್ ಅಲಿ ಬಶೀರ್‌, ಅನ್ವರ್‌ ಮುದೋಳ್‌ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...