ಧಾರವಾಡ | ‘ಸಾರಾಯಿ‌ ಮುಕ್ತ ಗ್ರಾಮ’ ಎಂದು ನಾಮಫಲಕ ಅನಾವರಣ

Date:

ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕು ಕೂಡಲಗಿ ಗ್ರಾಮದಲ್ಲಿ ಗ್ರಾಮಸ್ಥರು, ಮಹಿಳೆಯರು, ಯುವಜನತೆ ಹಾಗೂ ರಾಜ್ಯ ಮಹಿಳಾ ಒಕ್ಕೂಟ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯಿಂದ ಸಾರಾಯಿ ಮುಕ್ತ ಗ್ರಾಮವನ್ನಾಗಿ ಮಾಡಲು ಗ್ರಾಮದ ಪ್ರಮುಖ ಬೀದಿಯಲ್ಲಿ ಸಾರಾಯಿ ಮುಕ್ತ ಗ್ರಾಮ‌ ಎಂದು ನಾಮಫಲಕ ಅನಾವರಣಗೊಳಿಸಿದ್ದಾರೆ.

ತಾಲೂಕಿನ ವಿವಿಧ ಸಂಘಟನೆಯ ಮಹಿಳೆಯರು ಮತ್ತು ಪುರುಷರು ಸೇರಿ ಸಭೆ ನಡೆಸಿ, ಸಭೆಯ ನಂತರ ಊರಿನ ಮುಂಭಾಗದಲ್ಲಿ ಫಲಕ ಹಾಕಿದ್ದಾರೆ. ಗ್ರಾಕೂಸ್ ಸಂಘಟನೆಯ ನಿಂಗಮ್ಮ ಸವಣೂರ ಮಾತನಾಡಿ, ಇನ್ನು ಮುಂದೆ ಸಾರಾಯಿ ಮಾರಾಟ ಮಾಡುವುದನ್ನು ನಿಲ್ಲಿಸಬೇಕು. ಇದುವರೆಗೂ ಮದ್ಯ ಮಾರಾಟ ಮಾಡುತ್ತಿರುವವರು ಈಗಲೇ ಬಂದ್ ಮಾಡಿ ನಾವು ಯಾವುದೇ ರೀತಿಯಾಗಿ ನಿಮಗೆ ತೊಂದರೆ ಕೊಡುವುದಿಲ್ಲ ಎಂದಿದ್ದಾರೆ ಎಂದು ಹೇಳಿದರು.

ನಂತರ ಮಾತನಾಡಿದ ಪೊಲೀಸ್ ಇನ್ಸ್ಪೆಕ್ಟರ್, ಮುಂದೆ ಯಾವುದೇ ಅಹಿತಕರ ಘಟನೆಗಳು ನಡೆದರೆ ಮತ್ತು ಸರಾಯಿ ಮಾರಾಟ ಮಾಡುವುದನ್ನು ನಡೆಸಿದರೆ ʼ112ʼ ಈ ಸಂಖ್ಯೆಗೆ ಕರೆ ಮಾಡಬೇಕು ಎಂದು ವಿನಂತಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...