ಧಾರವಾಡ | ಟೋಲ್ ದರ ಏರಿಕೆ ಖಂಡಿಸಿ ಏ.11ರಂದು ವಿವಿಧ ಸಂಘಟನೆಗಳಿಂದ ಪ್ರತಿಭಟನೆಗೆ ಕರೆ

Date:

ರಾಜ್ಯ ಸರ್ಕಾರ ಟೋಲ್ ದರ ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ದರ ಏರಿಕೆ ಖಂಡಿಸಿ ಧಾರವಾಡ ಜಿಲ್ಲಾ ಅಣ್ಣಿಗೇರಿ ತಾಲೂಕಿನ ವ್ಯಾಪ್ತಿಗೆ ಬರುವ ನಲವಡಿ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾ’ದ ಬಳಿ ಏ.11ರಂದು ಧಾರವಾಡ ಜಿಲ್ಲೆಯ ವಿವಿಧ ಸಂಘಟನೆಗಳು ಮತ್ತು ಆಮ್ ಆದ್ಮಿ ಪಕ್ಷದ ಜಂಟೀ ಸಹಯೋಗದಲ್ಲಿ ರಸ್ತೆ ತಡೆದು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಈ ಕುರಿತು ಹುಬ್ಬಳ್ಳಿಯ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆ ನಡೆಸಿ ಪ್ರತಿಭಟನೆಯ ರೂಪುರೇಷೆಗಳ ಬಗ್ಗೆ ತೀರ್ಮಾನಿಸಿದರು. ಸರ್ಕಾರವು ಜನರಿಗೆ ಸರಿಯಾಗಿ ಮೂಲಭೂತ ಸೌಕರ್ಯ ಒದಗಿಸದೆ. ಜನರನ್ನು ಸುಲಿಗೆ ಮಾಡುತ್ತಿರುವ ಹಾಗೂ ಎಪ್ರಿಲ್ ಒಂದರಿಂದ ಟೋಲ್ ದರ ಹೆಚ್ಚಳ ಮಾಡಿದ್ದು ಸಾಮಾನ್ಯವಾಗಿ ಜನರ ಗಾಯದ ಮೇಲೆ ಬರೆ ಎಳೆದಂತಾಗಿದೆ.‌ ಈ ಕಾರಣ ಪ್ರತಿಭಟಿಸುವುದು ತುರ್ತಾಗಿದೆ. ಇನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವತಿಯಿಂದ ಮೂಲಭೂತ ವ್ಯವಸ್ಥೆಗಳ ಕೊರತೆ ಎದ್ದುಕಾಣುತ್ತಿದೆ.

ಹಲವು ಮೂಲಭೂತ ಸೌಕರ್ಯಗಳ ಕಲ್ಪಿಸಿದೆ ಇರುವುದನ್ನು, ಟೋಲ್ ದರ ಏರಿಕೆಯನ್ನು ಖಂಡಿಸಿ ಧಾರವಾಡ ಜಿಲ್ಲೆಯ ಕನ್ನಡಪರ ಸಂಘಟನೆ, ದಲಿತ ಸಂಘಟನೆ, ರೈತ ಸಂಘಟನೆ, ಧಾರವಾಡ ಜಿಲ್ಲಾ ವಾಹನ ಮಾಲಿಕರ, ಚಾಲಕರ ಸಂಘ, ಆಟೋ ಚಾಲಕರ ಸಂಘ, ಧಾರವಾಡ ಜಿಲ್ಲಾ ಆಮ್ ಆದ್ಮಿ ಪಕ್ಷದ ಸಹಯೋಗದೊಂದಿಗೆ ಹಾಗೂ ಖಾಸಗಿ ವಾಹನಗಳ ಸವಾರರ ಸಹಭಾಗಿತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಾಗಿದೆ ಎಂದು ನಿರ್ಯಣ ತೆಗೆದುಕೊಂಡರು. ಏ.11ರಂದು ನಲವಡಿ ಹತ್ತಿರದ ರಾಷ್ಟ್ರೀಯ ಹೆದ್ದಾರಿಯ ಟೋಲ್ ಪ್ಲಾಜಾ ಬಳಿ ರಸ್ತೆ ತಡೆದು ‘ನಾವ್ಯಾಕೆ ಟೋಲ್ ಕಟ್ಟಬೇಕು’ ಎಂಬ ಶಿರ್ಷಿಕೆಯ ಹೋರಾಟ ಆರಂಭಿಸಲಿದ್ದು, ವಿವಿಧ ಸಂಘಟನೆಗಳ ಕಾರ್ಯಕರ್ತರು, ನಾಯಕರು ಭಾಗವಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ಧಿ ಓದಿರಿ! ಧಾರವಾಡ | ಬೇಂದ್ರೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಸಾವು

ಈ ಸಂದರ್ಭದಲ್ಲಿ ಕನ್ನಡಪರ ಸಂಘಟನೆಯ ಸಂಜೀವ ದುಮಕನಾಳ, ಮಂಜುನಾಥ ಲೂತಿಮಠ. ಹುಸೇನಸಾಬ ತಳೆವಾಡ, ರೈತ ಹೋರಾಟಗಾರ ಸಿದ್ದಣ್ಣ ತೇಜಿ, ಹನುಮಂತ ಪವಾಡಿ, ಈರಣ್ಣ ಎಮ್ಮಿ, ಚಿದಾನಂದ ಸವದತ್ತಿ, ಪ್ರಕಾಶ ನಾಯ್ಕ, ಸಂಜೀವ ಬೆಳಗೇರಿ, ಕುಮಾರ ಲಕ್ಕಣ್ಣವರ, ದತ್ತು ಪವಾರ, ಉಷಾ ಚಲವಾದಿ, ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...