ಧಾರವಾಡ | ಸಂಶಿಯಲ್ಲಿ ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಆಗ್ರಹ

Date:

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಗ್ರಾಮದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಸ್ಥಾಪನೆ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

“ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿಯೇ ಸಂಶಿ ಅತಿ ದೊಡ್ಡ ಗ್ರಾಮವಾಗಿದೆ. ಈ ಗ್ರಾಮದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಇಲ್ಲ. ಇದರಿಂದಾಗಿ ಇಲ್ಲಿನ ವಿದ್ಯಾರ್ಥಿಗಳು ಕಾಲೇಜು ಶಿಕ್ಷಣಕ್ಕಾಗಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಗ್ರಾಮದಲ್ಲಿ ಪದವಿ ಪೂರ್ವ ಕಾಲೇಜು ತೆರೆಯುವಂತೆ ಹಲವು ಬಾರಿ ಅಂಚೆಯ ಮೂಲಕ ಶಾಸಕರಿಗೆ ಹಾಗೂ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಿದರೂ ಈವರೆಗೆ ಯಾರೂ ಸ್ಪಂದಿಸುತ್ತಿಲ್ಲ” ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಈ ದಿನ.ಕಾಮ್‌ನೊಂದಿಗೆ ನಿವೃತ್ತ ಶಿಕ್ಷಕ ಎನ್ ಎಫ್ ನದಾಫ್ ಮಾತನಾಡಿ, “ಸಂಶಿ ಗ್ರಾಮದಲ್ಲಿ ಸುಮಾರು 20 ಸಾವಿರಕ್ಕೂ ಹೆಚ್ಚು ಜನವಸತಿ ಇದ್ದು, ಇಲ್ಲಿ ಎಸ್‌ಎಸ್‌ಎಲ್‌ಸಿವರೆಗೆ ಮಾತ್ರ ಸರ್ಕಾರಿ ಶಾಲೆಗಳು ಇವೆ. ಪದವಿ ಪೂರ್ವ ಕಾಲೇಜನ್ನು ತೆರೆದರೆ ಗ್ರಾಮದ ಮಕ್ಕಳಿಗೆ ಹಾಗೂ ಸುತ್ತಲಿನ ಗ್ರಾಮಗಳಾದ ಚಾಕಲಬ್ಬಿ, ಹೊಸಳ್ಳಿ, ಪಶುಪತಿಹಾಳ, ಹಿರೇಹರಕುಣಿ, ಶಿರೂರು, ಬಸಾಪೂರ ಸೇರಿದಂತೆ ಬಹುತೇಕ ಗ್ರಾಮದ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆಂದು ಹಲವು ಬಾರಿ ಮನವಿಯಲ್ಲಿ ತಿಳಿಸಲಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗದಗ | ಪೌರಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸುವಂತೆ ಮನವಿ

ಪರಶುರಾಮ ಸೋಲದ ಮಾತನಾಡಿ, “ಗ್ರಾಮದಲ್ಲಿ ಪದವಿ ಪೂರ್ವ ಕಾಲೇಜು ತೆರೆಯುವಂತೆ ಗ್ರಾಮದ ನಾಗರಿಕರಿಕರೆಲ್ಲ ಸೇರಿ ಅಂಚೆಯ ಮೂಲಕ ಶಾಸಕರಿಗೆ ಹಾಗೂ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಿದ್ದೇವೆ. ಆದರೆ, ಇಂದಿಗೂ ಯಾರೂ ಸ್ಪಂದಿಸುತ್ತಿಲ್ಲ. ಗ್ರಾಮದಲ್ಲಿ ಪದವಿ ಪೂರ್ವ ಕಾಲೇಜು ಇಲ್ಲದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕಾಲೇಜು ಶಿಕ್ಷಣಕ್ಕಾಗಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಈ ಕುರಿತು ಶಿಕ್ಷಣ ಇಲಾಖೆ ಗಮನಹರಿಸಬೇಕು” ಎಂದು ಒತ್ತಾಯಿಸಿದರು.

ವಿ ಡಿ ಅಕ್ಕಿ, ವಿ ಡಿ ಯರಗುಪ್ಪ, ಲೋಕೇಶ ಸರಾವರಿ, ವಿದ್ಯಾಧರ ಸುಕುಂದ, ಎಲ್ ಬಿ ದೊಡ್ಡಮನಿ, ಡಿ ಬಿ ದೊಡ್ಡಮನಿ, ರಾಜು ಪುಟ್ಟಣ್ಣವರ ಸೇರಿ ಮನವಿ ಸಲ್ಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...