ಧಾರವಾಡ | ವಿಶ್ವಕರ್ಮ ಸಮುದಾಯವು ಕರಕುಶಲತೆಗೆ ಆಧಾರ ಸ್ತಂಭವಾಗಿದೆ: ಜ್ಯೋತಿ ಪಾಟೀಲ

Date:

ವಿಶ್ವಕರ್ಮ ಸಮುದಾಯವು ಭಾರತೀಯ ಸಂಸ್ಕೃತಿ ಮತ್ತು ಕರಕುಶಲತೆಗೆ ಆಧಾರ ಸ್ತಂಭವಾಗಿದೆ. ಶಿಲ್ಪಕಲೆ, ವಾಸ್ತುಶಿಲ್ಪ ಮತ್ತು ಮರಗೆಲಸ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅವರ ಕೌಶಲ್ಯ ಮತ್ತು ಪರಿಣತಿಯು ಅನನ್ಯವಾದದ್ದು ಎಂದು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಭಾಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತವಾಗಿ ಆಯೋಜಿಸಿದ್ದ ಭಗವಾನ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮಹಾಪೌರರಾದ ಜ್ಯೋತಿ ಪಾಟೀಲ ಹೇಳಿದರು.

ನಮ್ಮ ಸುತ್ತಮುತ್ತ ನಾವು ಕಾಣುವ ಅನೇಕ ಅದ್ಭುತ ಕಲಾಕೃತಿಗಳ ಹಿಂದೆ ವಿಶ್ವಕರ್ಮರ ಶ್ರಮ ಮತ್ತು ಕೌಶಲ್ಯ ಅಡಗಿದೆ. ಆಧುನಿಕ ಯುಗದಲ್ಲಿಯೂ ವಿಶ್ವಕರ್ಮ ಸಮುದಾಯವು ತಮ್ಮ ಸಾಂಪ್ರದಾಯಿಕ ಕೌಶಲ್ಯಗಳನ್ನು ಉಳಿಸಿಕೊಂಡು ಬಂದಿದೆ. ಜೊತೆಗೆ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಸಮಕಾಲೀನ ಸಮಾಜದ ಬೇಡಿಕೆಗಳಿಗೆ ಅನುಗುಣವಾಗಿ ತಮ್ಮ ವೃತ್ತಿಗಳನ್ನು ಮುಂದುವರೆಸುತ್ತಿದ್ದಾರೆ. ಸಮಾಜದಲ್ಲಿ ಅವರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಅವರ ಕೌಶಲ್ಯ ಮತ್ತು ಜ್ಞಾನವನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಎಲ್ಲರೂ ಬಡಗಿಯರ ಕಲೆಯ ಮೇಲೆ ಅವಲಂಬಿತರಾಗಿದ್ದಾರೆ. ಕೇವಲ ಮರದಿಂದ ವಸ್ತುಗಳನ್ನು ತಯಾರಿಸುವುದಿಲ್ಲ, ಬದಲಾಗಿ ಪ್ರತಿಯೊಬ್ಬರು ಮನೆ ಕಟ್ಟುವ ಕನಸುಗಳನ್ನು ನನಸಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಅವರ ಕೌಶಲ್ಯ, ಶ್ರಮ ಮತ್ತು ಸೃಜನಶೀಲತೆ ಸಮಾಜಕ್ಕೆ ನೀಡುವ ಕೊಡುಗೆ ಅಪಾರವಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಮಾತನಾಡಿ, ಪೂರ್ವಜರು ಕೈಯಿಂದ ಮಾಡಿದ ಕಲೆಗಳು, ಅಂದರೆ ಕರಕುಶಲ ವಸ್ತುಗಳು, ಸಾಂಪ್ರದಾಯಿಕ ಚಿತ್ರಕಲೆಗಳು, ಶಿಲ್ಪಕಲೆಗಳು ಇತ್ಯಾದಿಗಳು ಶತಮಾನಗಳ ಕಾಲ ಉಳಿದು ತಮ್ಮದೇ ಆದ ಮಹತ್ವವನ್ನು ಉಳಿಸಿಕೊಂಡಿವೆ.‌ ಕರಕುಶಲ ಕಲೆಗಳು ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಭಾಗವಾಗಿವೆ. ಪ್ರತಿಯೊಂದು ಕೈಯಿಂದ ಮಾಡಿದ ವಸ್ತುವು ಅದರ ಸೃಷ್ಟಿಕರ್ತನ ಕೌಶಲ್ಯ, ಶ್ರಮ ಮತ್ತು ಕಥೆಯನ್ನು ಹೇಳುತ್ತದೆ. ಇವುಗಳು ಕೇವಲ ವಸ್ತುಗಳಲ್ಲ, ಬದಲಿಗೆ ನಮ್ಮ ಇತಿಹಾಸ ಮತ್ತು ಭಾವನೆಗಳನ್ನು ಒಳಗೊಂಡಿರುತ್ತವೆ. ಕುಲಕಸುಬುಗಳು ಕೇವಲ ಆರ್ಥಿಕ ಮೂಲವಲ್ಲ, ಅವು ನಮ್ಮ ಗುರುತು ಮತ್ತು ಹೆಮ್ಮೆ. ಈ ಕಲೆಗಳನ್ನು ಉಳಿಸಿಕೊಂಡು ಹೋಗುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ಧಿ ಓದಿದ್ದೀರಾ? ಧಾರವಾಡ | ಗ್ರಾಪಂ ಚುನಾವಣೆ; ಗುರುಪಾದಪ್ಪ ಇಚ್ಚಂಗಿ ನೂತನ ಅಧ್ಯಕ್ಷ

ಕಾರ್ಯಕ್ರಮದಲ್ಲಿ ಧಾರವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಗುರುನಾಥ ಕೆ. ಬಡಿಗೇರ ವಿಶೇಷ ಉಪನ್ಯಾಸ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿದರು. ಮಾಜಿ ಶಾಸಕಿ ಸೀಮಾ ಮಸೂತಿ ಮಾತನಾಡಿದರು. ಅಶ್ವಿನಿ ಎನ್. ಪತ್ತಾರ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ರವಿ ಕುಲಕರ್ಣಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರು ಹಾಗೂ ವಿಶ್ವಕರ್ಮ ಸಮಾಜದವರೂ, ಸಾರ್ವಜನಿಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...