ಧಾರವಾಡ | ಮತದಾನ ನಮ್ಮ ಹಕ್ಕು, ಹೆಮ್ಮೆ, ಗೌರವದ ಸಂಕೇತ; ಅದು ಮಾರಾಟಕ್ಕಲ್ಲ: ಸಿಇಓ ಭುವನೇಶ ಪಾಟೀಲ

Date:

ಭಾರತದಂತಹ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಮತದಾನ ಹಕ್ಕು ದೊರೆತಿರುವುದು ನಮ್ಮ ಹೆಮ್ಮೆ ಮತ್ತು ಗೌರವದ ಸಂಕೇತವಾಗಿದೆ. ಮತಗಳು ಮಾರಾಟಕ್ಕಲ್ಲ; ಮತದಾನದಲ್ಲಿ ಮುತ್ಸದ್ದಿತನ ತೋರಬೇಕು ಎಂದು ಜ. 25ರಂದು ನಗರದ ಆಲೂರು ವೆಂಕಟರಾವ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಭಾರ ಜಿಲ್ಲಾಧಿಕಾರಿಗಳು ಆಗಿರುವ ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ ಹೇಳಿದರು.

ಸದೃಢ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಪ್ರತಿಯೊಬ್ಬ ಅರ್ಹ ನಾಗರಿಕರು ತಪ್ಪದೇ ಮತ ಚಲಾಯಿಸಬೇಕು. ಭಾರತ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು. ನಮ್ಮ ಸಂವಿಧಾನ ನಮಗೆ ನೀಡಿರುವ ಅತ್ಯಂತ ಪವಿತ್ರವಾದ ಹಕ್ಕು ಮತದಾನದ ಹಕ್ಕು. ಇದನ್ನು ಯಾರೂ ಕಡೆಗಣಿಸಬಾರದು. ಇತ್ತೀಚಿನ ದಿನಗಳಲ್ಲಿ ಯುವಕರು ಮತದಾನ ಪ್ರಕ್ರಿಯೆಯಿಂದ ದೂರ ಉಳಿಯುತ್ತಿರುವುದು ಕಳವಳಕಾರಿ ಸಂಗತಿ.

18 ವರ್ಷ ತುಂಬಿದ ಪ್ರತಿಯೊಬ್ಬ ಯುವಕ-ಯುವತಿಯರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು. ಪ್ರತಿಯೊಬ್ಬ ಮತದಾರರು, ಚುನಾವಣಾ ಸಮಯದಲ್ಲಿ ಆಮಿಷಗಳಿಗೆ ಒಳಗಾಗದೆ, ನಿರ್ಭೀತಿಯಿಂದ ಮತ ಚಲಾಯಿಸಬೇಕು. ಪ್ರತಿಯೊಂದು ಮತವೂ ಅಮೂಲ್ಯ. ನಮ್ಮ ಒಂದು ಮತ ದೇಶದ ಆಡಳಿತವನ್ನು ಬದಲಿಸುವ ಮತ್ತು ಸಮರ್ಥ ನಾಯಕನನ್ನು ಆಯ್ಕೆ ಮಾಡುವ ಶಕ್ತಿಯನ್ನು ಹೊಂದಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮ ಉದ್ಘಾಟಿಸಿದ ಹಿರಿಯ ಸಿವಿಲ್ ನ್ಯಾಯಾಧೀಶ ಪರುಶುರಾಮ ದೊಡಮ್ಮನಿ ಮಾತನಾಡಿ, ಪ್ರಜಾಪ್ರಭುತ್ವದ ಯಶಸ್ಸು ಮತದಾರರ ಜಾಗೃತಿ ಮೇಲೆ ನಿಂತಿದೆ. ನಾವು ಒಬ್ಬ ಶ್ರೇಷ್ಠ ಮತ್ತು ಅರ್ಹ ವ್ಯಕ್ತಿಯನ್ನು ನಮ್ಮ ಪ್ರತಿನಿಧಿಯನ್ನಾಗಿ ಆರಿಸಿ ತಂದರೆ, ಆ ಇಡೀ ದೇಶವೇ ಉದ್ಧಾರವಾಗುತ್ತದೆ ಎಂದು ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕ‌ರ್ ನೀಡಿದ ಕರೆಯನ್ನು ಸ್ಮರಿಸಬೇಕು. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನದ ಹಕ್ಕು ಅತ್ಯಂತ ಪವಿತ್ರವಾದದ್ದು ಹಾಗೂ ಪ್ರಬಲವಾದದ್ದು ಎಂಬುದನ್ನು ಜನರಿಗೆ ತಿಳಿಸುವುದು ಈ ದಿನದ ಪ್ರಮುಖ ಉದ್ದೇಶವಾಗಿದೆ. ಅಂಬೇಡ್ಕರ್ ಅವರ ಪ್ರಕಾರ, ಮತದಾನ ಎನ್ನುವುದು ಕೇವಲ ಹಕ್ಕಲ್ಲ, ಅದೊಂದು ಜವಾಬ್ದಾರಿಯಾಗಿತ್ತು ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಮಾತನಾಡಿ, ಮತದಾನದ ಹಕ್ಕು ಸಂವಿಧಾನ ನಮಗೆ ನೀಡಿರುವ ಅತ್ಯಂತ ಶ್ರೇಷ್ಠ ಅಧಿಕಾರವಾಗಿದೆ. ಇದು ಮಾರಾಟದ ವಸ್ತುವಲ್ಲ, ಬದಲಾಗಿ ದೇಶದ ಭವಿಷ್ಯ ರೂಪಿಸುವ ಜವಾಬ್ದಾರಿ ಆಗಿದೆ. ಭಾರತದಂತಹ ಬಹುಧರ್ಮೀಯ ರಾಷ್ಟ್ರದಲ್ಲಿ ಜಾತಿ, ಧರ್ಮಗಳನ್ನು ಮೀರಿ ನಾವು ಮತ ಚಲಾಯಿಸಬೇಕು. ಮತದಾನ ಕೇವಲ ಬೆರಳಿಗೆ ಶಾಯಿ ಹಾಕಿಸಿಕೊಳ್ಳುವ ಪ್ರಕ್ರಿಯೆ ಅಲ್ಲ. ಅದು ನಮ್ಮ ಹಕ್ಕು ಮತ್ತು ಅಷ್ಟೇ ದೊಡ್ಡ ಗೌರವವಾಗಿದೆ. ಚುನಾವಣೆ ಎಂದರೆ ಕೇವಲ ರಜೆ ಎಂದು ಭಾವಿಸಿ ವಿಹಾರಕ್ಕೆ ಹೋಗುವುದು ಸರಿಯಲ್ಲ. ಬದಲಿಗೆ, ಇದು ಪ್ರತಿಯೊಬ್ಬ ಪ್ರಜೆಯೂ ತನ್ನ ದೇಶದ ಭವಿಷ್ಯವನ್ನು ನಿರ್ಧರಿಸುವ ಅಧಿಕಾರ ಚಲಾಯಿಸುವ ದಿನವಾಗಿರುತ್ತದೆ ಎಂದರು.

“ಮತದಾನದ ಮುಂದೆ ಯಾವುದೂ ಇಲ್ಲ, ನಾನು ಖಚಿತವಾಗಿ ಮತ ಚಲಾಯಿಸುತ್ತೇನೆ” ಎಂಬ ಪ್ರತಿಜ್ಞಾ ವಿಧಿಯನ್ನು ಉಪವಿಭಾಗಾಧಿಕಾರಿ ಶಾಲಂ ಹುಸೇನ ಅವರು ಅಧಿಕಾರಿಗಳಿಗೆ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ  ಬೋಧಿಸಿದರು. ಇದೇ ಸಂದರ್ಭದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುತ್ತೇವೆ ಮತ್ತು ಯಾವುದೇ ಪ್ರಭಾವಕ್ಕೆ ಒಳಗಾಗದೆ ಮತ ಚಲಾಯಿಸುತ್ತೇವೆ ಎಂದು ಎಲ್ಲರೂ ಪ್ರತಿಜ್ಞೆ ಸ್ವೀಕರಿಸಿದರು.

ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಸ್ವಾಗತಿಸಿದರು. ಧಾರವಾಡ ತಹಶಿಲ್ದಾರ ಡಾ.ಡಿ.ಹಚ್. ಹೂಗಾರ ವಂದಿಸಿದರು. ವೇದಿಕೆಯಲ್ಲಿ ಸಹಾಯಕ ಪೊಲೀಸ್ ಆಯುಕ್ತ ಪ್ರಶಾಂತ ಸಿದ್ದನಗೌಡರ ಅವರು ಇದ್ದರು. ಕಾರ್ಯಕ್ರಮದಲ್ಲಿ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿಗಳ ಕಚೇರಿ ಚುನಾವಣಾ ವಿಭಾಗದ ಅಧಿಕಾರಿ, ಸಿಬ್ಬಂದಿಗಳು, ತಾಲೂಕ ಮಟ್ಟದ ಅಧಿಕಾರಿಗಳು, ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...