ಧಾರವಾಡ | ಸಿಡಿಲು ಬಡಿದು ಯುವಕ‌ ಸಾವು

Date:

ಸಿಡಿಲು ಬಡಿದು ಯುವಕ ಮೃತಪಟ್ಟಿರುವ ಘಟನೆ ಮಂಗಳವಾರ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನೆರ್ತಿ ಗ್ರಾಮದ ಹೊರಹೊಲಯದಲ್ಲಿ ನಡೆದಿದೆ.

18 ವರ್ಷದ ಮೃತಪಟ್ಟಿರುವ ಮೈಲಾರಪ್ಪ ಉಣಕಲ್ ಆತನ ಗೆಳೆಯನ ಜೊತೆಗೂಡಿ ಹಿರೇನೆರ್ತಿ ಗ್ರಾಮದ ಹೊರಹೊಲಯದ ಕೆರೆಯಲ್ಲಿ ಎತ್ತುಗಳ ಮೈ ತೊಳೆಯಲು ಹೋದಾಗ; ಸಿಡಿಲು ಬಿಡಿದ ಪರಿಣಾಮ ಮೈಲಾರಪ್ಪ ಸ್ಥಳದಲ್ಲೇ ಮೃತಪಟ್ಟುದ್ದು, ಆತನ ಜೊತೆಗಿದ್ದ ಮಂಜುನಾಥ ನಾಯ್ಕನನ್ನು ಕೂಡಾ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತ ಯುವಕ ಮೂಲತಃ ಹಿರೆಕರಗುಣಿ ಗ್ರಾಮದ. ನಿವಾಸಿಯಾಗಿದ್ದು, ರಜಾದಿನಕ್ಕೆ ಅಜ್ಜನ ಮನೆಗೆ ಬಂದಿದ್ದ ಎಂದು ಹೇಳಲಾಗಿದೆ. ಇನ್ನು ಸ್ಥಳಕ್ಕೆ ಭೇಟಿ ನೀಡಿದ ತಾಲೂಕು ದಂಡಾಧಿಕಾರಿ ರಾಜು ಮಾವಕರ ಮೃತ ಯುವಕನ ಕುಟುಂಬಕ್ಕೆ 5ಲಕ್ಷ ಪರಿಹಾರ ನೀಡುವ ಭರವಸೆ ನೀಡಿದರು. ಮತ್ತು ವಿಪರೀತ ಮಳೆ‌ ಇರುವ ಕಾರಣ; ಆದಷ್ಟು ಸಾರ್ವಜನಿಕರು ಮನೆಯಿಂದ ಹೊರಗೆ ಬರುವುದನ್ನು ತಪ್ಪಿಸಬೇಕು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...