ಧಾರವಾಡ | ಅವಳಿ ನಗರಗಳಿಗೆ 5 ತಿಂಗಳಲ್ಲಿ 100 ಹೊಸ ಸಿಟಿ ಬಸ್‌ಗಳು ರಸ್ತೆಗಿಳಿಯಲಿವೆ: ಸಾರಿಗೆ ಸಚಿವ

Date:

ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಹುಬ್ಬಳ್ಳಿ-ಧಾರವಾಡದಲ್ಲಿ 45 ಕೋಟಿ ರೂ. ವ್ಯಯದೊಂದಿಗೆ 100 ಹೊಸ ಬಸ್‌ಗಳನ್ನು ರಸ್ತೆಗಿಳಿಸಲು ಮುಂದಾಗಿದೆ. ಟೆಂಡರ್ ಪ್ರಕ್ರಿಯೆ ನಿಗದಿಯಂತೆ ನಡೆದರೆ ಮುಂದಿನ ಐದು ತಿಂಗಳಲ್ಲಿ ಅವಳಿ ನಗರಗಳಿಗೆ ಹೆಚ್ಚುವರಿಯಾಗಿ 100 ಹೊಸ ಬಸ್‌ಗಳು ಬರಲಿವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ರಜತ ಮಹೋತ್ಸವದ ಅಂಗವಾಗಿ ಧಾರವಾಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಅವಳಿ ನಗರದಲ್ಲಿ ಪ್ರತಿದಿನ ಅಂದಾಜು ಮೂರು ಲಕ್ಷ ಮಂದಿ ಬಸ್‌ಗಳಲ್ಲಿ ಪ್ರಯಾಣಿಸುತ್ತಿರುವುದರಿಂದ ಹೊಸ ಹೆಚ್ಚುವರಿ ಬಸ್‌ಗಳ ಅವಶ್ಯಕತೆಯಿದೆ. ಹಾಗಾಗಿ ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಕೇಂದ್ರ ಬಸ್ ನಿಲ್ದಾಣವನ್ನು 23.4 ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗುವುದು. ಧಾರವಾಡದ ಸಿಟಿ ಬಸ್ ನಿಲ್ದಾಣವನ್ನು 13.1 ಕೋಟಿ ರೂ.ಗಳ ವೆಚ್ಚದಲ್ಲಿ ನಗರ ಭೂ ಸಾರಿಗೆ ನಿರ್ದೇಶನಾಲಯದ (ಡಿಯುಎಲ್ ಟಿ) ಆರ್ಥಿಕ ನೆರವಿನೊಂದಿಗೆ ಪುನರ್‌ ನಿರ್ಮಿಸಲಾಗುವುದು” ಎಂದು ಸಚಿವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಲೆಕ್ಟ್ರಿಕ್ ಬಸ್ ಖರೀದಿಗೆ ನೀಡುತ್ತಿದ್ದ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ನಿಲ್ಲಿಸಿದೆ. ಅದು ಪುನರಾರಂಭಗೊಂಡರೆ, ಹೆಚ್ಚಿನ ಎಲೆಕ್ಟ್ರಿಕ್ ಬಸ್‌ಗಳನ್ನು ರಸ್ತೆಗಿಳಿಸಲು ಇದು ಸಹಾಯ ಮಾಡುತ್ತದೆ. ಹುಬ್ಬಳ್ಳಿ, ಧಾರವಾಡ ಮತ್ತು ಬೆಳಗಾವಿಯಲ್ಲಿ ಒಟ್ಟು ವೆಚ್ಚದ ಗುತ್ತಿಗೆ (ಜಿಸಿಸಿ) ಮಾದರಿಯಲ್ಲಿ 450 ಎಲೆಕ್ಟ್ರಿಕ್ ಬಸ್ಸುಗಳನ್ನು ಹೊಂದುವ ಎನ್‌ಡಬ್ಲ್ಯೂಕೆಆರ್‌ಟಿಸಿಯ ಪ್ರಸ್ತಾಪಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಎಲೆಕ್ಟ್ರಿಕ್ ಬಸ್‌ಗಳ ಕಾರ್ಯಾಚರಣೆ ನಿರ್ವಹಿಸಲು 15 ಕೋಟಿ ರೂ. ವೆಚ್ಚದಲ್ಲಿ ಬಸ್ ಡಿಪೋಗಳನ್ನು ಆಧುನೀಕರಿಸಲು ನಿರ್ಧರಿಸಲಾಗಿದೆ” ಎಂದರು.

“9 ಕೋಟಿ ರೂ.ಗಳ ವೆಚ್ಚದಲ್ಲಿ 20 ನಾನ್ ಎಸಿ ಸ್ಲೀಪರ್ ಬಸ್ಸುಗಳು ಮತ್ತು 7 ಕೋಟಿ ರೂ.ಗಳ ವೆಚ್ಚದಲ್ಲಿ ನಾಲ್ಕು ಮಲ್ಟಿ ಆಕ್ಸಲ್ ಬಸ್ಸುಗಳನ್ನು ಖರೀದಿಸಲು ಎನ್‌ಡಬ್ಲ್ಯೂಕೆಆರ್‌ಟಿಸಿಗೆ ಸರ್ಕಾರ ಅನುಮೋದನೆ ನೀಡಿದೆ. ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ನೀಡುವ ‘ಶಕ್ತಿ’ ಯೋಜನೆಯನ್ನು ಪ್ರಾರಂಭಿಸಿದ ಬಳಿಕ, ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ದಿನಕ್ಕೆ 82 ಲಕ್ಷದಿಂದ 1.1 ಕೋಟಿ ಪ್ರಯಾಣಿಕರ ಸಂಖ್ಯೆ ಹೆಚ್ಚಿಸಲಾಗಿದ್ದು, 13,000 ಮಂದಿ ಸಿಬ್ಬಂದಿಯನ್ನು ನೇಮಕ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ” ಎಂದು ಹೇಳಿದರು.

ಎನ್‌ಡಬ್ಲ್ಯೂಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್ ಮಾತನಾಡಿ, “ಶಕ್ತಿ ಯೋಜನೆ ಪ್ರಾರಂಭವಾದ ನಂತರ ಎನ್‌ಡಬ್ಲ್ಯೂಕೆಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆ ದಿನಕ್ಕೆ 16 ಲಕ್ಷದಿಂದ 24 ಲಕ್ಷಕ್ಕೆ ಏರಿದೆ” ಎಂದರು.

ಇದೇ ವೇಳೆ ಅಪಘಾತ ರಹಿತ ಚಾಲನೆ ಮಾಡಿದ 242 ಚಾಲಕರಿಗೆ ಬೆಳ್ಳಿ ಪದಕ ಮತ್ತು ಅಪಘಾತ ವಿಮೆಯ ಚೆಕ್‌ಗಳನ್ನು ವಿತರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್, ಶಾಸಕ ಅರವಿಂದ ಬೆಲ್ಲದ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...